ಪುತ್ತೂರು ಅತ್ಯಾಚಾರ ಪ್ರಕರಣ: ಸಂತ್ರಸ್ತೆಗೆ ಹೊರಜಿಲ್ಲೆಯಲ್ಲಿ ಶಿಕ್ಷಣ: ಶ್ಯಾಮಲಾ
Team Udayavani, Jul 9, 2019, 10:13 AM IST
ಮಂಗಳೂರು: ಪುತ್ತೂರಿನಲ್ಲಿ ಇತ್ತೀಚೆಗೆ ನಡೆದಿರುವ ಸಾಮೂಹಿಕ ಅತ್ಯಾಚಾರ
ಪ್ರಕರಣದ ಸಂತ್ರಸ್ತೆಗೆ ಶಿಕ್ಷಣ ಮುಂದುವರಿ ಸಲು ಹೊರಜಿಲ್ಲೆಯಲ್ಲಿ ವ್ಯವಸ್ಥೆ ಕಲ್ಪಿಸಲಾಗು ವುದು ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲಾ ಎಸ್. ಕುಂದರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಪುತ್ತೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದಿರುವ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ಮಹಿಳಾ ಆಯೋಗ ಸ್ವಯಂ ಪ್ರೇರಿತವಾಗಿ ಕೈಗೆತ್ತಿಕೊಂಡಿದ್ದು ಇದರನ್ವಯ ಮಂಗಳೂರಿಗೆ ಆಗಮಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜತೆ ಸಭೆ ನಡೆಸಿದ್ದೇನೆ. ಸಂತ್ರಸ್ತೆಯ ಮನೆಗೆ ಹಾಗೂ ಆಕೆ ಶಿಕ್ಷಣ ಪಡೆಯುತ್ತಿರುವ ಕಾಲೇಜಿಗೆ ಸೋಮವಾರ ಭೇಟಿ ನೀಡಿ ಮಾಹಿತಿ ಸಂಗ್ರ ಹಿಸಿದ್ದೇನೆ ಎಂದರು.
ಸಹೋದರನಿಗೂ ಕೌನ್ಸೆಲಿಂಗ್
ಸಂತ್ರಸ್ತೆ ಮಾನಸಿಕವಾಗಿ ಕುಗ್ಗಿದ್ದು ಶಿಕ್ಷಣ ಮೊಟಕು ಗೊಳ್ಳುವ ಪರಿಸ್ಥಿತಿ ಇದೆ. ಆಕೆಗೆ ಕೌನ್ಸೆಲಿಂಗ್ ನಡೆಸಿ ಮಾನಸಿಕ ವಾಗಿ ಧೈರ್ಯ ತುಂಬುವ ಕಾರ್ಯ ಅಗತ್ಯವಿದೆ. ನಾನು ಇಂದು ಆಕೆಯ ಮನೆಗೆ ಭೇಟಿ ನೀಡಿ ಸುಮಾರು 1 ತಾಸು ಮಾತನಾಡಿದ್ದು ಶಿಕ್ಷಣ ಮುಂದುವರಿಸುವ ಆವಶ್ಯಕತೆಯನ್ನು ಮನವರಿಕೆ ಮಾಡಿದ್ದೇನೆ. ಆಕೆಯೂ ಒಪ್ಪಿದ್ದಾಳೆ. ಹೊರಜಿಲ್ಲೆಯಲ್ಲಿ ಶಿಕ್ಷಣ ಮುಂದು ವರಿಸಲು ವ್ಯವಸ್ಥೆ ಮಾಡಲಾಗುವುದು. ಇದರ ಜತೆಗೆ ಆಕೆಯ ತಮ್ಮ ದ್ವಿತೀಯ ಪಿಯುಸಿಯಲ್ಲಿದ್ದು ಕಾಲೇಜಿಗೆ ಹೋಗಲು ಹಿಂಜರಿಯುತ್ತಿದ್ದಾನೆ. ಆತನಿಗೂ ಕೌನ್ಸೆಲಿಂಗ್ ಮಾಡಲಾಗುವುದು ಎಂದರು.
4.12 ಲಕ್ಷ ರೂ. ಪರಿಹಾರ
ಸಮಾಜ ಕಲ್ಯಾಣ ಇಲಾಖೆಯಿಂದ 4.12 ಲಕ್ಷ ರೂ. ಪರಿಹಾರದ ಚೆಕ್ ಸಿದ್ಧಗೊಂಡಿದ್ದು ಅದನ್ನು ಸಂತ್ರಸ್ತೆಗೆ ಹಸ್ತಾಂತರಿಸಲಾಗುವುದು. ಇದಲ್ಲದೆ ಇನ್ನೂ 4 ಲಕ್ಷ ರೂ. ಪರಿಹಾರ ನೀಡಲು ವ್ಯವಸ್ಥೆ ಮಾಡಲಾಗುವುದು. ಆಕೆ ಆಘಾತದಿಂದ ಚೇತರಿಸಿಕೊಂಡು ಶಿಕ್ಷಣ ಮುಂದುವರಿಸಿ ಉನ್ನತ ಜೀವನ ಕಂಡುಕೊಳ್ಳಲು ರಾಷ್ಟ್ರೀಯ ಮಹಿಳಾ ಆಯೋಗ ಮತ್ತು ವಿವಿಧ ಇಲಾಖೆಗಳಿಂದ ಸರ್ವ ವ್ಯವಸ್ಥೆ ಕಲ್ಪಿಸಲಾಗುವುದು. ಜತೆಗೆ ಅಪರಾಧಿಗಳಿಗೆ ಕಠಿನ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕಾಗಿದೆ. ಈಗಾಗಲೇ ಪೊಲೀಸ್ ಇಲಾಖೆ ಈ ನಿಟ್ಟಿನಲ್ಲಿ ಕ್ರಮ ಕೈಗೊಂಡಿದೆ ಎಂದರು.
ಪುತ್ತೂರಿನಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದಿರುವ ಇನ್ನೊಂದು ಅತ್ಯಾಚಾರ ಪ್ರಕರಣದ ಬಗ್ಗೆಯೂ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದು ಕೊಂಡಿದ್ದೇನೆ ಎಂದು ಶ್ಯಾಮಲಾ ಅವರು ತಿಳಿಸಿದರು.
16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಬೇಸಿಕ್ ಸೆಟ್ ಬಳಸಲು ಮಾತ್ರ ಅವಕಾಶ ಇರುವ ಬಗ್ಗೆ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದವರು ಅಭಿಪ್ರಾಯಪಟ್ಟರು. ಹೆತ್ತವರು ಹೆಣ್ಣು ಹಾಗೂ ಗಂಡು ಮಕ್ಕಳ ಚಲನ ವಲನಗಳ ಬಗ್ಗೆ ನಿಗಾವಹಿಸುವುದು ಅಗತ್ಯ. ಅವರಿಗೆ ಸಾಮಾಜಿಕ ಅನಿಷ್ಟಗಳ ಬಗ್ಗೆ ಅರಿವು ಮೂಡಿಸುವ ಕಾರ್ಯ ಪರಿಣಾಮಕಾರಿಯಾಗಿ ನಡೆಯಬೇಕು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.