ಪಾಲಕ್ಕಾಡ್‌ನಲ್ಲಿ ರೈಲ್ವೇ ಬಳಕೆದಾರರ ಸಲಹಾ ಸಮಿತಿ ಸಭೆ
ಜಂಕ್ಷನ್‌ಗೆ ಬರುವ 3 ರೈಲು ಸೆಂಟ್ರಲ್‌ಗೆ ವಿಸ್ತರಣೆ ಆಗ್ರಹ
Team Udayavani, Dec 8, 2023, 12:35 AM IST
ಮಂಗಳೂರು: ಪಾಲ್ಘಾಟ್ (ಪಾಲಕ್ಕಾಡ್) ವಿಭಾಗ ಮಟ್ಟದ ರೈಲ್ವೇ ಬಳಕೆದಾರರ 163ನೇ ಸಲಹಾ ಸಮಿತಿ ಸಭೆ ಪಾಲಕ್ಕಾಡ್‌ನಲ್ಲಿ ಗುರುವಾರ ನಡೆಯಿತು.
ಪಶ್ಚಿಮ ಕರಾವಳಿ ರೈಲ್ವೇ ಯಾತ್ರಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಹಾಗೂ ಪಾಲ್ಘಾಟ್ ವಿಭಾಗ ಬಳಕೆದಾರರ ಸಲಹಾ ಸಮಿತಿ ಸದಸ್ಯ ಹನುಮಂತ ಕಾಮತ್ ಮಂಗಳೂರು ವ್ಯಾಪ್ತಿಯ ರೈಲ್ವೇ ಅಭಿವೃದ್ಧಿಗೆ ಸಂಬಂಧಪಟ್ಟ ವಿಷಯಗಳ ಬಗ್ಗೆ ಪ್ರಸ್ತಾವನೆ ಮಂಡಿಸಿದರು.
ಮಂಗಳೂರು ಜಂಕ್ಷನ್‌ನಿಂದ ಸಂಚರಿ ಸುತ್ತಿರುವ ಮಂಗಳೂರು -ಮುಂಬಯಿ ಸಿಎಸ್‌ಟಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, ಮಂಗಳೂರು -ಬೆಂಗಳೂರು ಗೋಮಟೇಶ್ವರ ಎಕ್ಸ್‌ಪ್ರೆಸ್ ಹಾಗೂ ವಿಜಯಪುರ -ಮಂಗಳೂರು ಎಕ್ಸ್‌ಪ್ರೆಸ್ ರೈಲುಗಳನ್ನು ಮಂಗಳೂರು ಸೆಂಟ್ರಲ್ ವರೆಗೆ ವಿಸ್ತರಿಸುವಂತೆ ಆಗ್ರಹಿಸಿದರು. “ಈ ಮೂರು ರೈಲುಗಳು ಮಂಗಳೂರು ಸೆಂಟ್ರಲ್‌ವರೆಗೆ ವಿಸ್ತರಣೆ ಆಗದೆ, ಯಾವುದೇ ಹೊಸ ರೈಲನ್ನು (ಪ್ರಸ್ತಾವಿತ ಮಂಗಳೂರು-ಮಡಗಾಂವ್ ವಂದೇ ಭಾರತ್ ರೈಲು ಹೊರತುಪಡಿಸಿ) ಮಂಗಳೂರು ಸೆಂಟ್ರಲ್‌ನಿಂದ ಆರಂಭಿಸಲು ಬಿಡುವುದಿಲ್ಲ’ ಹನುಮಂತ ಕಾಮತ್ ತಿಳಿಸಿದರು.
ಸೆಂಟ್ರಲ್‌ನಲ್ಲಿ ಮೇಲ್ಸೇತುವೆ
ಮಂಗಳೂರು ಸೆಂಟ್ರಲ್‌ನಲ್ಲಿ ಹೊಸದಾಗಿ ನಿರ್ಮಿಸಿದ ಪ್ಲಾಟ್‌ಫಾರ್ಮ್ಗೆ ಮೇಲ್ಸೇತುವೆ ನಿರ್ಮಾಣ ಪ್ರಗತಿಯಲ್ಲಿದ್ದು ಡಿಸೆಂಬರ್ ಅಂತ್ಯಕ್ಕೆ ಸಾರ್ವಜನಿಕ ಸೇವೆಗೆ ಲಭ್ಯವಾಗಲಿದೆ. ಮಂಗಳೂರು ಸೆಂಟ್ರಲ್ ಮತ್ತು ಮಂಗಳೂರು ಜಂಕ್ಷನ್ ನಡುವೆ ಸಂಚಾರ ದಟ್ಟಣೆ ಕಡಿಮೆ ಇದ್ದು, ಹಳಿ ದ್ವಿಪಥ ಮಾಡುವ ಅಗತ್ಯ ಕಂಡು ಬರುವುದಿಲ್ಲ. ಮುಂದಿನ ದಿನಗಳಲ್ಲಿ ರೈಲುಗಳ ಓಡಾಟ ಈ ವಿಭಾಗದಲ್ಲಿ ಜಾಸ್ತಿ ಆದ ಅನಂತರ ದ್ವಿಪಥ ಮಾಡಲಾಗುವುದು ಹಾಗೂ ಬಂದರು ಗೂಡ್ಸ್ ಯಾರ್ಡ್ ಅನ್ನು ಪ್ರಯಾಣಿಕ ರೈಲು ಗಾಡಿಗಳ ಟರ್ಮಿನಲ್ ಆಗಿ ಬದಲಾಯಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಸೆಂಟ್ರಲ್‌ಗೆ ವಿಸ್ತರಣೆಗೆ ಸಮ್ಮತಿ
ರೈಲ್ವೇ ಅಧಿಕಾರಿಗಳು ಮಾತನಾಡಿ, ಮಂಗಳೂರು-ವಿಜಯಪುರ ರೈಲು ಗಾಡಿಯನ್ನು ಮಂಗಳೂರು ಸೆಂಟ್ರಲ್ ವರೆಗೆ ವಿಸ್ತರಿಸುವ ಬಗ್ಗೆ ಸಮ್ಮತಿ ನೀಡಲಾಗುವುದು. ವಿಸ್ತರಣೆ ತರುವಾಯ ಈ ರೈಲು ವಿಜಯಪುರದಿಂದ ಮಂಗಳೂರು ಸೆಂಟ್ರಲ್‌ಗೆ ಮಧ್ಯಾಹ್ನ 1ಕ್ಕೆ ಆಗಮಿಸಿ, 2.35ಕ್ಕೆ ಮಂಗಳೂರು ಸೆಂಟ್ರಲ್‌ನಿಂದ ವಿಜಯಪುರಕ್ಕೆ ನಿರ್ಗಮಿಸಲಿದೆ. ಈಗ ಬೆಳಗ್ಗೆ ಮಂಗಳೂರು ಜಂಕ್ಷನ್‌ನಿಂದ 7 ಗಂಟೆಗೆ ಹೊರಡುವ ಮಂಗಳೂರು-ಯಶವಂತಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲನ್ನು ಸಹ ಮಂಗಳೂರು ಸೆಂಟ್ರಲ್‌ಗೆ ಸದ್ಯದಲ್ಲಿಯೇ ವಿಸ್ತರಿಸಲಾಗುವುದು ಎಂದರು.
ರಾಮೇಶ್ವರಂ-ಮಂಗಳೂರು ಹೊಸ ರೈಲಿನ ಪ್ರಸ್ತಾವನೆ ರೈಲ್ವೆ ಮಂತ್ರಾಲಯದಲ್ಲಿ ಪರಿಶೀಲನೆಯ ಹಂತದಲ್ಲಿದ್ದು, ರೈಲ್ವೇ ಮಂತ್ರಾಲಯ ಅನುಮತಿ ನೀಡಿದ ಬಳಿಕ ಆರಂಭಿಸಲಾಗುವುದು ಎಂದರು.
ಮುಂಬಯಿ ಸಿಎಸ್‌ಟಿ ಎಕ್ಸ್‌ಪ್ರೆಸ್ ಸೆಂಟ್ರಲ್‌ಗೆ ವಿಸ್ತರಣೆ ಸದ್ಯ ಅಸಾಧ್ಯ
ಮುಂಬಯಿ ಸಿಎಸ್‌ಟಿ-ಮಂಗಳೂರು ಜಂಕ್ಷನ್ ಎಕ್ಸ್‌ಪ್ರೆಸ್ ರೈಲನ್ನು ಸದ್ಯದ ವೇಳಾಪಟ್ಟಿಯಲ್ಲಿ ಮಂಗಳೂರು ಸೆಂಟ್ರಲ್ ತನಕ ವಿಸ್ತರಿಸಲು ಅಸಾಧ್ಯವಾಗಿರುವ ಕಾರಣ ಕೊಂಕಣ ರೈಲ್ವೇ ಈ ರೈಲನ್ನು ಕೊಂಚ ಬೇಗ ಮಂಗಳೂರು ಜಂಕ್ಷನ್‌ಗೆ ತಲುಪಿಸಿದರೆ ಈ ರೈಲನ್ನು ಮಂಗಳೂರು ಸೆಂಟ್ರಲ್ ತನಕ ವಿಸ್ತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಪಾಲಾ^ಟ್ ಅಧಿಕಾರಿಗಳು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.