Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
ಆರೋಗ್ಯ ಸಂಜೀವಿನಿ ಯೋಜನೆ ಶೀಘ್ರ ಪುನರಾರಂಭಕ್ಕೂ ಒತ್ತಾಯ, ಮುಖ್ಯಮಂತ್ರಿ ಸಿದ್ದರಾಮಯ್ಯ ಸಕಾರಾತ್ಮಕ ಸ್ಪಂದನೆ
Team Udayavani, Jan 1, 2025, 2:39 AM IST
ಬೆಂಗಳೂರು: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ನೇತೃತ್ವದ ನಿಯೋಗವು ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಹಳೇ ಪಿಂಚಣಿ ಯೋಜನೆ ಜಾರಿ ಸೇರಿ ಹಲವು ವಿಚಾರಗಳ ಕುರಿತಂತೆ ಸಮಾಲೋಚನೆ ನಡೆಸಿತು.
ರಾಜ್ಯ ಸರಕಾರಿ ನೌಕರರಿಗೆ ನೂತನ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ ಹಳೇ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸುವ ಸಂಬಂಧ ಸರಕಾರದಿಂದ ರಚಿತವಾಗಿರುವ ಅಧಿಕಾರಿಗಳ ಸಮಿತಿಯಿಂದ ಶೀಘ್ರ ವರದಿ ಪಡೆದು ಹಳೇ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸುವಂತೆ ಮನವಿ ಮಾಡಿತು.
ಜತೆಗೆ ರಾಜ್ಯ ಸರಕಾರಿ ನೌಕರರು ಮತ್ತವರ ಅವಲಂಬಿತ ಕುಟುಂಬದ ಸದಸ್ಯರಿಗೆ ಉಚಿತ ನಗದು ರಹಿತ ಚಿಕಿತ್ಸೆ ನೀಡುವ “ಕರ್ನಾಟಕ ರಾಜ್ಯಆರೋಗ್ಯ ಸಂಜೀವಿನಿ ಯೋಜನೆ’ಯನ್ನು ಶೀಘ್ರವಾಗಿ ಅನುಷ್ಠಾನಗೊಳಿಸುವ ಭರವಸೆ ನೀಡಿದರು. ಈ ವೇಳೆ ಸರಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸಲು ಮುಖ್ಯಮಂತ್ರಿ ಸಕಾರತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.