Congress Session: ತಿರುಚಿದ ದೇಶದ ನಕ್ಷೆ ಬಳಸಿದ್ದು ನಾಚಿಕೆಗೇಡು: ಬಿಜೆಪಿ ಟೀಕೆ
ಪಾಕ್ ಪರ ಕಾಂಗ್ರೆಸ್ ಮನಸ್ಥಿತಿ ಬಯಲು: ಪೂನಾವಾಲ
Team Udayavani, Dec 26, 2024, 9:45 PM IST
ನವದೆಹಲಿ: ಬೆಳಗಾವಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಅಧಿವೇಶನದಲ್ಲಿ ಭಾರತದ ತಿರುಚಿದ ಭೂಪಟವನ್ನು ಬಳಕೆ ಮಾಡಲಾಗಿರುವುದು ನಾಚಿಕೆಗೇಡು ಎಂದು ಬಿಜೆಪಿ ಆರೋಪಿಸಿದೆ.
ನವದೆಹಲಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ಸುಧಾಂಶು ತ್ರಿವೇದಿ “ನವದೆಹಲಿಯಲ್ಲಿ ವೀರ ಬಾಲಕರನ್ನು ಪುರಸ್ಕರಿಸುವ ದಿನದಂದೇ ಕಾಂಗ್ರೆಸ್ ಬೆಳಗಾವಿಯಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ದೇಶದ ತಿರುಚಿದ ಭೂಪಟವನ್ನು ಬಳಕೆ ಮಾಡಿದೆ. ಅದರಲ್ಲಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರ, ಅಕ್ಸಾಯ್ ಚಿನ್ ಪ್ರದೇಶವೇ ಇಲ್ಲ. ಕಾಂಗ್ರೆಸ್ ದೇಶವನ್ನು ಒಡೆಯುವ ಮನಸ್ಥಿತಿ ಹೊಂದಿದೆ ಎನ್ನುವುದಕ್ಕೆ ಇದು ಸಾಕ್ಷಿ. ಇದೊಂದು ಖಂಡನೀಯ ವಿಚಾರ’ ಎಂದು ಟೀಕಿಸಿದ್ದಾರೆ.
ಬಿಜೆಪಿಯ ಮತ್ತೊಬ್ಬ ನಾಯಕ ಶೆಹಜಾದ್ ಪೂನಾವಾಲ ಟ್ವೀಟ್ ಮಾಡಿ ದೇಶವನ್ನು ಚೂರು ಚೂರು ಮಾಡಿ ಎಂಬ ಕಾಂಗ್ರೆಸ್ನ ಮನಸ್ಥಿತಿಗೆ ಇದು ದ್ಯೋತಕವಾಗಿದೆ. ಈ ಮೂಲಕ ಪಾಕಿಸ್ತಾನದ ತಾಳಕ್ಕೆ ಹೆಜ್ಜೆ ಹಾಕುವ, ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಹಸ್ತಾಂತರಿಸುವ ಕಾಂಗ್ರೆಸ್ನ ಅಜೆಂಡಾ ಬಯಲಾಗಿದೆ’ ಎಂದು ಟೀಕಿಸಿದ್ದಾರೆ. ಬಿಜೆಪಿಯ ಮತ್ತೋರ್ವ ನಾಯಕ ಸಿ.ಆರ್.ಕೇಶವನ್, “ಈ ನಕ್ಷೆಯ ಮೂಲಕ ಮಹಾತ್ಮ ಗಾಂಧಿಯವರ ತತ್ವಗಳನ್ನು ಅಣಕವಾಡಲಾಗಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ
National Mourning: ಮಂಗಳೂರಿನ ಬೀಚ್ ಉತ್ಸವ ಮುಂದೂಡಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ
National Mourning: ಮಂಗಳೂರಿನ ಬೀಚ್ ಉತ್ಸವ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.