ರಾಜ್ಯಮಟ್ಟದ ಹೊನಲು ಬೆಳಕಿನ ಲಗೋರಿ ಪಂದ್ಯಾಟಕ್ಕೆ ಚಾಲನೆ
Team Udayavani, Jun 9, 2019, 6:10 AM IST
ಸುಳ್ಯ : ದ.ಕ. ಜಿಲ್ಲಾ ಲಗೋರಿ ಅಸೋಸಿಯೇಶನ್ ಮತ್ತು ಸಂಘಟನ ಸಮಿತಿ ಆಶ್ರಯದಲ್ಲಿ ರಾಜ್ಯಮಟ್ಟದ ಹೊನಲು ಬೆಳಕಿನ ಲಗೋರಿ ಪಂದ್ಯಾಟಕ್ಕೆ ಶನಿವಾರ ಚಾಲನೆ ನೀಡಲಾಯಿತು. ಮೆರವಣಿಗೆಯನ್ನು ಕೇನ್ಯ ರವೀಂದ್ರನಾಥ ಶೆಟ್ಟಿ ಉದ್ಘಾಟಿಸಿದರು.
ಲಗೋರಿ ಆಟವನ್ನು ರಾಜ್ಯಮಟ್ಟಕ್ಕೆ ವಿಸ್ತರಿಸಿ ಮುಂದಿನ ದಿನಗಳಲ್ಲಿ ಶಾಲಾ ಕಾಲೇಜು, ದಸರಾ ಕ್ರೀಡೆಗಳಲ್ಲಿ ಅಳವಡಿಸಿಕೊಳ್ಳುವ ದೃಷ್ಟಿಯಿಂದ ರಾಜ್ಯಮಟ್ಟದ ಆಹ್ವಾನಿತ ತಂಡಗಳಿಂದ ಹೊನಲು ಬೆಳಕಿನಲ್ಲಿ ಲಗೋರಿ ಸ್ಪರ್ಧೆ ಏರ್ಪಡಿಸಲಾಗಿದೆ. ನಗರದ ಬಸ್ ನಿಲ್ದಾಣದಿಂದ ಶ್ರೀರಾಂ ಪೇಟೆ, ಜೂ. ಕಾಲೇಜು ರಸ್ತೆಯಾಗಿ ಬ್ಯಾಂಡ್ ವಾದನದೊಂದಿಗೆ ಕ್ರೀಡಾಂಗಣಕ್ಕೆ ಮೆರವಣಿಗೆ ಸಾಗಿತು.
ಜೂನ್ 9ರ ರಾತ್ರಿ 8.30ಕ್ಕೆ ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣೆ ನಡೆಯಲಿದೆ. ಸಂಘಟನ ಸಮಿತಿ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ ಅಧ್ಯಕ್ಷತೆ ವಹಿಸಲಿದ್ದಾರೆ. ಸುಳ್ಯ ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಜಿ.ಪಂ. ಸದಸ್ಯ ಹರೀಶ್ ಕಂಜಿಪಿಲಿ, ಪೆರಾಜೆ ಜ್ಯೋತಿ ವಿದ್ಯಾ ಸಂಘದ ಅಧ್ಯಕ್ಷ ಡಾ| ಎನ್.ಎ. ಜ್ಞಾನೇಶ್, ರಾಜ್ಯ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯಅಕಾಡೆಮಿ ಅಧ್ಯಕ್ಷ ಪಿ.ಸಿ. ಜಯರಾಮ, ಸುಳ್ಯ ನಗರ ವರ್ತಕರ ಸಂಘದ ಅಧ್ಯಕ್ಷ ಸುಧಾಕರ ರೈ ಪಿ.ಬಿ., ಸುಳ್ಯ ತಾಲೂಕು ಗೌಡರ ಯುವಸೇವಾ ಸಂಘದ ಅಧ್ಯಕ್ಷ ಮೋಹನ ರಾಂ ಸುಳ್ಳಿ, ಜಿಲ್ಲಾ ಯುವಜನ ಸೇವಾ ಮತ್ತು ಕ್ರೀಡಾಧಿಕಾರಿ ಪ್ರದೀಪ್ ಡಿ’ಸೋಜಾ, ಯುವಜನ ಸಂಯುಕ್ತ ಮಂಡಳಿಯ ಅಧ್ಯಕ್ಷ ದಿಲೀಪ್ ಬಾಬ್ಲುಬೆಟ್ಟು ಭಾಗವಹಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.