![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jan 5, 2023, 5:55 PM IST
ಸಂಕೇಶ್ವರ : ಸಂಚರಿಸುತ್ತಿದ್ದ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಬಸ್ಸಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ನಾಕಾ ಸಮೀದ ಪೂನಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಜೆ ನಡೆದಿದೆ.
ಕೊಲ್ಲಾಪೂರ ಕಡೆಯಿಂದ ಬೆಳಗಾವಿ ಕಡೆಗೆ ಗುರುವಾರ ಸಂಜೆ ವೇಲೆ ರಾಜ್ಯ ಸಾರಿಗೆ ಸಂಸ್ಥೆಯ ಬಸ್ಸು ಹುಕ್ಕೇರಿ ತಾಲೂಕಿನ ಹಂಚಿನಾಳ ಕ್ರಾಸ್ ಬಳಿ ಇರುವ ಗುಲಾಬಶಾವಲಿ ದರ್ಗಾ ಬಳಿಯ ಪೂನಾ ಬೆಂಗಳೂರು ರಾಷ್ಟ್ರೀಯ 4ರಲ್ಲಿ ಸಂಚರಿಸುತ್ತಿರುವಾಗ ಆಕಸ್ಮಿಕವಾಗಿ ಬಸ್ಸಿಗೆ ಬೆಂಕಿ ತಗುಲಿಕೊಂಡಿದೆ. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಬಸ್ಸಿನಿಂದ ಕೆಳಗೆ ಇಳಿದು ಓಡಿ ಹೋಗಿದ್ದಾರೆ ಎನ್ನಲಾಗಿದೆ. ಬಸ್ಸಿನ ಚಾಲಕ ಮತ್ತು ನಿರ್ವಾಹಕ ನ ಸಮಯ ಪ್ರಜ್ಞೆ ಯಿಂದಾಗಿ ಅದೃಷ್ಟವಶಾತ್ ಇದರಿಂದ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ಘಟನೆಯ ವಿಷಯ ತಿಳಿದ ಅಗ್ನಿಶಾಮಕದಳದ ಸಿಬಂದಿಗಳು ಸ್ಥಳಕ್ಕೆ ಧಾವಿಸಿ ಬಸ್ಸಿನ ಬೆಂಕಿ ನಂದಿಸುವಷ್ಟರಲ್ಲಿ ಬಸ್ಸು ಸಂಪೂರ್ಣ ಸುಟ್ಟು ಕರಕಲಾಗಿದೆ. ಯಮಕನಮರಡಿ ಸಿಪಿಐ ರಮೇಶ ಛಾಯಾಗೋಳ ಮತ್ತು ಸಿಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.