ಶ್ರೀ ಲಂಕಾದಲ್ಲಿ ಸರಣಿ ಸ್ಫೋಟ ಹಿನ್ನೆಲೆ: ಹಲವೆಡೆ ಹದ್ದಿನ ಕಣ್ಣು
ಕೊಡಗಿನಲ್ಲೂ ಭದ್ರತೆ ಬಿಗಿ
Team Udayavani, Apr 30, 2019, 6:30 AM IST
ಮಡಿಕೇರಿ: ಲಂಕಾದಲ್ಲಿ ಸ್ಫೋಟ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಲ್ಲೂ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಎಸ್‌ಪಿ ಡಾ| ಸುಮನ್ ಡಿ. ಪನ್ನೇಕರ್ ನೇತೃತ್ವದಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಲ್ಲೆಗೆ ಬರುವ ಮತ್ತು ಹೊರ ಹೋಗುವ ಎಲ್ಲ ವಾಹನಗಳನ್ನು ತಪಾಸಣೆ ಮಾಡಲಾಗುತ್ತಿದೆ.
ಗುಪ್ತದಳ, ಆಂತರಿಕ ಭದ್ರತಾ ವಿಭಾಗ ಹಾಗೂ ವಿಶೇಷ ದಳ ಕೂಡ ಜಿಲ್ಲೆಯ ಮೇಲೆ ನಿಗಾ ಇಟ್ಟಿವೆ. ಜಿಲ್ಲೆಯ ಜನಜಂಗುಳಿ ಪ್ರದೇಶಗಳು, ಪ್ರವಾಸಿ ತಾಣಗಳು, ಬಸ್ ನಿಲ್ದಾಣಗಳು, ದೇವಾಲಯ, ಮಸೀದಿ, ಚರ್ಚ್‌ಗಳ ಬಳಿಯೂ ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳ ಜಂಟಿಯಾಗಿ ತಪಾಸಣೆ ನಡೆಸುತ್ತಿವೆ.
ಜಿಲ್ಲೆಯ ಪ್ರಮುಖ ಜಲಾಶಯವಾದ ಹಾರಂಗಿಯಲ್ಲಿ ಹೆಚ್ಚಿನ ಪೊಲೀಸ್ ಸಿಬಂದಿಯನ್ನು ನಿಯೋಜಿಸಲಾಗಿದೆ.
**
60 ಕೇರಳೀಯರ ಮೇಲೆ ನಿಗಾ
ಕಾಸರಗೋಡು: ಶ್ರೀಲಂಕಾದಲ್ಲಿ ಎ. 21ರಂದು ನಡೆದ ಸರಣಿ ಬಾಂಬ್ ಸ್ಫೋಟ ಮತ್ತು ಐಸಿಸ್‌ಗೆ ಸೇರ್ಪಡೆಗೊಳ್ಳಲು ಕೇರಳದ ಕೆಲವರು ವಿದೇಶಕ್ಕೆ ತೆರಳಿರುವ ಪ್ರಕರಣಕ್ಕೆ ಸಂಬಂಧಿಸಿ 60ರಷ್ಟು ಕೇರಳೀಯರ ಮೇಲೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ನಿಗಾ ಇರಿಸಿದೆ.
ಈ ಪೈಕಿ ಹಲವರ ಮನೆಗಳಿಗೆ ಎನ್‌ಐಎ ದಾಳಿ ನಡೆಸಿ ಹಲವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿರುವ ಬಗ್ಗೆ ಮಾಹಿತಿ ಇದೆ. ಶ್ರೀಲಂಕಾ
ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಕಾಸರಗೋಡು, ಕಣ್ಣೂರು, ಕೋಯಿಕ್ಕೋಡ್, ಮಲಪ್ಪುರಂ ಮತ್ತು ಪಾಲಕ್ಕಾಡ್ ಜಿಲ್ಲೆಗಳಲ್ಲಿ ಎನ್‌ಐಎ ತನಿಖೆ ನಡೆಸುತ್ತಿದೆ.
ಶ್ರೀಲಂಕಾ ಸ್ಫೋಟದ ಸೂತ್ರಧಾರ ಝಹ್ರಾನ್ ಹಶೀಮ್ ಕೇರಳ ಮತ್ತು
ತಮಿಳುನಾಡಿಗೆ ಪದೇ ಪದೆ ಬಂದಿದ್ದನೆಂಬ ಮಾಹಿತಿ ಪಡೆದುಕೊಂಡಿರುವ ಎನ್‌ಐಎ ಆತ ಯಾರನ್ನು ಭೇಟಿಯಾಗಿದ್ದ ಮತ್ತು ಯಾಕಾಗಿ ಬಂದಿದ್ದ ಎಂಬ ಬಗ್ಗೆ ಮಾಹಿತಿ ಕಲೆಹಾಕುತ್ತಿದೆ. ಕೇರಳ ಮತ್ತು ತಮಿಳುನಾಡಿನಲ್ಲಿ ಈತ ಪ್ರಚೋದನಕಾರಿಯಾಗಿ ಧಾರ್ಮಿಕ ಪ್ರವಚನ ನೀಡಿದ್ದ ನೆಂಬ ಮಾಹಿತಿ ಲಭಿಸಿದೆ. ಅಲ್ಲದೆ ಆತ ಕೇರಳದ ಹಲವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಎನ್ನಲಾಗಿದೆ.
ರಹಸ್ಯ ಸಭೆ
ಮಲಪ್ಪುರಂ ವಂಡೂರಿನಲ್ಲಿ ಕೆಲವು ದಿನಗಳ ಹಿಂದೆ ಜಾಗತಿಕ ಭಯೋತ್ಪಾದಕ ಸಂಘಟನೆಯಾದ ಇಸ್ಲಾಮಿಕ್ ಸ್ಟೇಟ್(ಐಸಿಸ್)ನೊಂದಿಗೆ ನಂಟು
ಹೊಂದಿರುವುದಾಗಿ ಶಂಕಿಸಲಾಗುತ್ತಿರುವ ತಂಡವೊಂದು ರಹಸ್ಯ ಸಭೆ
ನಡೆಸಿತ್ತು. ಈ ಸಂಬಂಧ ಕೋಯಿಕ್ಕೋಡ್ ತಾಮರಶೆÏàರಿ ನಿವಾಸಿ ಶೈಬು ನಿಹಾರ್‌ನನ್ನು ವಶಕ್ಕೆ ತೆಗೆದುಕೊಂಡು ಎನ್‌ಐಎ ವಿಚಾರಣೆ ನಡೆಸಿತ್ತು. ಆತ ಕಾಸರಗೋಡಿನ ಹಲವರೊಂದಿಗೆ ನಂಟು ಇರುವ ಬಗ್ಗೆ ತಿಳಿಸಿದ್ದ. ಈ ಆಧಾರದಲ್ಲಿ 2 ಮನೆಗಳಿಗೆ ಎನ್‌ಐಎ ದಾಳಿ ನಡೆಸಿ ದಾಖಲೆ ವಶಪಡಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.