Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್ಸಿ ರವಿಕುಮಾರ್
ಸಭಾಪತಿ ಹೇಳಿದ್ದಕ್ಕೆ ಮಾತ್ರ ಬೆಲೆ, ಸಿ.ಟಿ.ರವಿಗೆ ಚಿತ್ರಹಿಂಸೆ ಕೊಟ್ಟಿದ್ದು ಯಾಕೆ?
Team Udayavani, Dec 24, 2024, 1:48 AM IST
ಬೆಂಗಳೂರು: ಕಾಂಗ್ರೆಸ್ಸಿನವರು ಬಿಡುಗಡೆ ಮಾಡಿದ ವೀಡಿಯೋಗೆ ಯಾವುದೇ ಬೆಲೆ ಇಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್ತಿನಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಸಿ.ಟಿ. ರವಿ ಅವಾಚ್ಯ ಶಬ್ದ ಬಳಕೆ ಮಾಡಿರುವ ವೀಡಿಯೋ ದಾಖಲೆ ನಮ್ಮ ಬಳಿ ಇಲ್ಲ ಎಂದಿದ್ದಾರೆ. ಈಗ ಕಾಂಗ್ರೆಸ್ನವರು ಬಿಡುಗಡೆ ಮಾಡಿದ ವೀಡಿಯೋಗೆ ಯಾವುದೇ ಆಧಾರ ಇಲ್ಲ, ಬೆಲೆಯೂ ಇಲ್ಲ ಎಂದು ತಿಳಿಸಿದರು.
ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರು ಹೇಳಿದ್ದಕ್ಕೆ ಮಾತ್ರ ಬೆಲೆ ಇದೆ. ಹೈಕೋರ್ಟ್ ಕೂಡಲೇ ಸಿ.ಟಿ. ರವಿ ಅವರನ್ನು ಬಿಡುಗಡೆ ಮಾಡಲು ಹೇಳಿರುವುದರಲ್ಲಿ ನಮಗೆ ಅರ್ಧ ಜಯ ಲಭಿಸಿದೆ. ಸಿ.ಟಿ. ರವಿ ಅವರನ್ನು ಇಷ್ಟೆಲ್ಲ ಓಡಾಡಿಸಿದ್ದು ಯಾಕೆ? ಕಾಡಿನಲ್ಲಿ, ಕ್ರಷರ್ ಹೊಂಡದಲ್ಲಿ, ಕಬ್ಬಿನ ಗದ್ದೆಯಲ್ಲಿ, ಧಾರವಾಡ, ಗದಗ, ಚಿಕ್ಕೋಡಿ ಜಿಲ್ಲೆ , ಬಾಗಲಕೋಟೆ ಜಿಲ್ಲೆ ಗಡಿ ಭಾಗ, ಈ ಥರ ನಾಲ್ಕೈದು ಜಿಲ್ಲೆಗಳಿಗೆ ಕರೆದುಕೊಂಡು ಹೋಗಿ ರಾತ್ರಿಯೆಲ್ಲ ಊಟ, ನೀರು ನೀಡದೆ, ನಿದ್ದೆ ಇಲ್ಲದಂತೆ ವಿಚಿತ್ರವಾಗಿ ಹಿಂಸೆ ಕೊಟ್ಟಿದ್ದಾರೆ. ತಲೆಗೆ ಪೆಟ್ಟಾದರೂ ಚಿಕಿತ್ಸೆ ನೀಡಿಲ್ಲ. ಯಾಕೆ ನೀವು ಈ ತರಹ ಚಿತ್ರಹಿಂಸೆ ಕೊಟ್ಟಿದ್ದೀರಿ ಎಂದು ಪ್ರಶ್ನಿಸಿದರು.
ಸಿ.ಟಿ. ರವಿ ಅವರ ಮೇಲೆ ಹಲ್ಲೆ ಮಾಡಲು ನೂರಾರು ಜನರು ಸುವರ್ಣಸೌಧದ ಒಳಗೆ ಹೇಗೆ ಬಂದರು? ಒಳಗಡೆ ಬರಲು ಕಾರಣ ಯಾರು? ಯಾರ ಪತ್ರದೊಂದಿಗೆ ಒಳಗಡೆ ಬಂದಿದ್ದಾರೆ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್- ಸಿ.ಟಿ.ರವಿ ವಾಗ್ವಾದ
Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್ “ಕೈ’ ಹಾಕಲಿದೆಯೇ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್ಸಿ ಸೇರಿ 2 ಅಧ್ಯಯನ ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.