ಇನ್ನೂ 10 ದಿನ ವಿಸ್ತರಿಸಿ: ಶಾಸಕ ಯು. ಟಿ. ಖಾದರ್
ಕಾಟಾಚಾರದ ಅಧಿವೇಶನಕ್ಕೆ ವಿರೋಧ
Team Udayavani, Sep 15, 2020, 4:28 AM IST
ಮಂಗಳೂರು: ರಾಜ್ಯ ಸರಕಾರವು ಸೆ. 21ರಿಂದ ಕೇವಲ 8 ದಿನ ವಿಧಾನ ಮಂಡಲದ ಅಧಿವೇಶನ ನಡೆಸಲು ನಿರ್ಧರಿಸಿರುವುದು ಸರಿಯಲ್ಲ; ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ, ಕಾನೂನು ಸುವ್ಯವಸ್ಥೆ ಸೇರಿದಂತೆ ವಿವಿಧ ವಿಚಾರಗಳ ಚರ್ಚೆ ಇರುವುದರಿಂದ ಇನ್ನೂ 10 ದಿನಗಳವರೆಗೆ ವಿಸ್ತರಿಸಬೇಕು ಎಂದು ಶಾಸಕ ಯು.ಟಿ. ಖಾದರ್ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ.
ಕಾಟಾಚಾರಕ್ಕೆ ಎಂಬಂತೆ ಅಥವಾ ಮಸೂದೆ ಪಾಸ್ ಮಾಡುವ ಉದ್ದೇಶ ದಿಂದ ಮಾತ್ರ ಅಧಿವೇಶನ ನಡೆಸುವುದು ಸರಿಯಲ್ಲ. ಅಧ್ಯಾದೇಶವಾಗಿರುವ ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದಾಗುವ ಸಮಸ್ಯೆ, ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ಮುಂದೆ ಎದುರಾಗುವ ಸವಾಲು, ರಾಷ್ಟ್ರೀಯ ಶಿಕ್ಷಣ ನೀತಿ ಸೇರಿದಂತೆ ಹಲವಾರು ವಿಚಾರಗಳ ಬಗ್ಗೆ ಚರ್ಚೆ ಮಾಡಬೇಕಿದೆ. ಜತೆಗೆ ಪ್ರಕೃತಿ ವಿಕೋಪದಿಂದ ಸೂಕ್ತ ಪರಿಹಾರ ದೊರೆಯದ ವಿಚಾರ, ಶಾಸಕರ ಮನೆಗೆ ಬೆಂಕಿ ಇಟ್ಟ ವಿಚಾರ, ಪಡಿತರ ಸೇರಿದಂತೆ ಜನರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು ಇನ್ನೂ ಸಮಯಾವಕಾಶ ಬೇಕು ಎಂದರು.
ಡ್ರಗ್ಸ್; ರಾಜಕೀಯ ಬೇಡ
ಡ್ರಗ್ಸ್ ಪ್ರಕರಣದಲ್ಲಿ ಇದೀಗ ಕಾಂಗ್ರೆಸ್ ಹೆಸರು ಕೇಳಿಬರುತ್ತಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಖಾದರ್ ಅವರು, “ಡ್ರಗ್ಸ್ ವಿಚಾರದಲ್ಲಿ ರಾಜಕೀಯಕ್ಕೆ ಲಿಂಕ್ ಹಾಕುತ್ತಿರುವುದು ಯಾಕೆ? ಕಾನೂನುಬಾಹಿರ ಚಟುವಟಿಕೆಗೆ ಜಾತಿ, ಧರ್ಮ ವನ್ನು ಬೆಸೆಯುವುದು ಸರಿಯಲ್ಲ. ಬದಲಾಗಿ ಯಾರು ತಪ್ಪು ಮಾಡಿದ್ದಾರೋ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಿ. ಶ್ರೀಲಂಕಾಕ್ಕೆ ಕೆಲವರು ಹೋಗಿದ್ದಾರೆ
ಎಂಬ ಆರೋಪವಿದೆ. ಅವರಿಗೆ ವೀಸಾ ಕೊಟ್ಟಿದ್ದು ಅಥವಾ ಅಲ್ಲಿಗೆ ವಿಮಾನ ಸೇವೆ ವ್ಯವಸ್ಥೆ ಮಾಡುವುದು ಕೇಂದ್ರ ಸರಕಾರವಲ್ಲವೇ? ಹೀಗಾಗಿ ಈ ವಿಚಾರದಲ್ಲಿ ರಾಜಕೀಯ ಮಾತನಾಡುವ ಬದಲು ರಾಜ್ಯದಲ್ಲಿ, ದಕ್ಷಿಣ ಕನ್ನಡದಲ್ಲಿ ನಾರ್ಕೊಟಿಕ್ ಸೆಲ್ ಬಲಿಷ್ಠಗೊ ಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಿ ಎಂದರು.
ಮಂಗಳೂರು ತಾ.ಪಂ. ಅಧ್ಯಕ್ಷ ಮೊಹಮ್ಮದ್ ಮೋನು, ಕಾಂಗ್ರೆಸ್ ಮುಖಂಡ ಸದಾಶಿವ ಉಳ್ಳಾಲ ಮುಂತಾದವರು ಉಪಸ್ಥಿತರಿದ್ದರು.
ಮರಳು ಸಿಗದ ಪರಿಸ್ಥಿತಿ
ದ.ಕ. ಜಿಲ್ಲೆಯಲ್ಲಿ ಮರಳು ಸಮಸ್ಯೆ ಬಹುವಾಗಿ ಕಾಡುತ್ತಿದೆ. ಹೊಸ ಕಟ್ಟಡ ನಿರ್ಮಾಣಕ್ಕೆ ಮರಳು ಸಿಗುತ್ತಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಈ ವಿಚಾರದಲ್ಲಿ ಮಾತನಾಡುವುದೇ ಇಲ್ಲ. ಸ್ಯಾಂಡ್ ಬಜಾರ್ ಆ್ಯಪ್ ಜಾರಿಗೊಳಿಸಿದರೆ ಎಲ್ಲವೂ ಸರಿಯಾಗಲಿದೆ. ನಿಗದಿತ ಬೆಲೆ ಹಾಗೂ ನಿಗದಿತ ಸಮಯಕ್ಕೆ ಮರಳು ಸಿಗುವಂತೆ ಜಿಲ್ಲಾಡಳಿತ ಇನ್ನಾದರೂ ಕ್ರಮ ಕೈಗೊಳ್ಳಲಿ ಎಂದು ಶಾಸಕ ಯು.ಟಿ. ಖಾದರ್ ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
MUST WATCH
ಹೊಸ ಸೇರ್ಪಡೆ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.