ಪ್ರಕರಣ ಹೆಚ್ಚಿದ್ದಲ್ಲಿ ಕಂಟೈನ್‌ಮೆಂಟ್ ವಲಯ
Team Udayavani, May 28, 2021, 9:17 PM IST
ಶಿವಮೊಗ್ಗ: ಕೊರೊನಾ ಪ್ರಕರಣಗಳು 10 ಕ್ಕಿಂತ ಹೆಚ್ಚು ಇರುವ ಪ್ರದೇಶಗಳನ್ನು ಕಡ್ಡಾಯವಾಗಿ ಕಂಟೈನ್‌ಮೆಂಟ್ ವಲಯವಾಗಿ ಗುರುತಿಸಿ ಅಲ್ಲಿನ ನಿವಾಸಿಗಳ ಸಂಚಾರಕ್ಕೆ ಸಂಪೂರ್ಣ ನಿಬಂìಧ ವಿ ಧಿಸಬೇಕು ಎಂದು ಜಿಲ್ಲಾ ಧಿಕಾರಿ ಕೆ.ಬಿ. ಶಿವಕುಮಾರ್ ಸೂಚನೆ ನೀಡಿದರು.
ಗುರುವಾರ ತಾಲೂಕು ಮಟ್ಟದ ಅ ಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಕೊರೊನಾ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಪರಿಶೀಲನೆ ನಡೆಸಿದ ಅವರು ಕೆಲ ಸಲಹೆ ಸೂಚನೆ ನೀಡಿದರು. ಕಂಟೈನ್‌ಮೆಂಟ್ ಪ್ರದೇಶದ ಪ್ರತಿ ಮನೆಗಳಿಗೆ ಆಶಾ ಕಾರ್ಯಕರ್ತೆಯರು ಪ್ರತಿದಿನ ಭೇಟಿ ನೀಡಿ ಆರೋಗ್ಯ ಸ್ಥಿತಿಗತಿ ಪರಿಶೀಲನೆ ನಡೆಸಬೇಕು.
ರೋಗ ಲಕ್ಷಣವಿರುವ ಪ್ರತಿಯೊಬ್ಬರಿಗೂ ಕೊರೊನಾ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಬೇಕು. ಅಗತ್ಯ ಸಾಮಗ್ರಿಗಳನ್ನು ಅಗತ್ಯವಿರುವವರಿಗೆ ಮನೆ ಬಾಗಿಲಿಗೆ ತಲುಪಿಸಬೇಕು. ಕಂಟೈನ್‌ಮೆಂಟ್ ನಿಯಮಗಳನ್ನು ಉಲ್ಲಂಘಿಸುವವರ ಮೇಲೆ ನಿಗಾ ಇರಿಸಲು ವಿವಿಧ ಇಲಾಖೆಗಳ ಅ ಧಿಕಾರಿಗಳನ್ನು ನಿಯೋಜಿಸಬೇಕು. ನಿಯಮ ಉಲ್ಲಂಘಿಸುವವರನ್ನು ಗುರುತಿಸಿ ಮೊಬೈಲ್‌ನಲ್ಲಿ ಛಾಯಾಚಿತ್ರ ಅಥವಾ ವಿಡಿಯೋ ತೆಗೆದು ಪೊಲೀಸರಿಗೆ ದೂರು ನೀಡಬೇಕು ಎಂದು ಹೇಳಿದರು.
ಹಾಟ್‌ಸ್ಪಾಟ್ ಗುರುತಿಸಿ: ಗ್ರಾಮೀಣ ಭಾಗದ ಕೆಲವು ಪ್ರದೇಶಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಿನ ಪ್ರಮಾಣದಲ್ಲಿ ವರದಿಯಾಗುತ್ತಿವೆ. ಗಡಿಭಾಗದ ಗ್ರಾಮಗಳಲ್ಲಿ ಇಂತಹ ಪ್ರಕರಣಗಳು ವರದಿಯಾಗುತ್ತಿವೆ. ಅಂತಹ ಹಾಟ್‌ಸ್ಪಾಟ್ ಗಳನ್ನು ಗುರುತಿಸಿ ಸೋಂಕು ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಅಂತಹ ಕಡೆಗಳಲ್ಲಿ ಸಂಚಾರಿ ವಾಹನಗಳ ಮೂಲಕ ಕೊರೊನಾ ಪರೀಕ್ಷೆ ನಡೆಸುವಂತೆ ತಹಶೀಲ್ದಾರ್‌ಗಳಿಗೆ ಸೂಚಿಸಿದರು.
ಗ್ರಾಮೀಣ ಪ್ರದೇಶಗಳಲ್ಲಿ ಮಾತ್ರವಲ್ಲದೆ ನಗರ ಪ್ರದೇಶಗಳಲ್ಲೂ ಕೊರೊನಾ ಪಾಸಿಟಿವ್ ಇರುವವರನ್ನು ಹೋಂ ಐಸೋಲೇಷನ್‌ಗೆ ಅವಕಾಶ ನೀಡದೆ, ಕೋವಿಡ್ ಕೇರ್ ಸೆಂಟರ್‌ನಲ್ಲಿ ದಾಖಲಿಸಬೇಕು. ಖಾಸಗಿ ಆಸ್ಪತ್ರೆ ಮತ್ತು ಕ್ಲಿನಿಕ್‌ಗಳಲ್ಲಿ ಚಿಕಿತ್ಸೆಗೆ ಆಗಮಿಸುವ ಕೊರೊನಾ ಲಕ್ಷಣವಿರುವ ವ್ಯಕ್ತಿಗಳ ವಿವರ ಕಡ್ಡಾಯವಾಗಿ ಪಡೆಯಬೇಕು. ಅಂತಹ ಮಾಹಿತಿಯನ್ನು ನಿಗದಿತ ನಮೂನೆಯಲ್ಲಿ ಒದಗಿಸಲು ವಿಫಲರಾಗುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇದೇ ರೀತಿ ಅಧಿಕೃತ ಪರವಾನಿಗೆ ಪಡೆಯದೆ ವೈದ್ಯಕೀಯ ಚಿಕಿತ್ಸೆ ನೀಡುವ ನಕಲಿ ವೈದ್ಯರ ವಿರುದ್ಧ ಕಾರ್ಯಾಚರಣೆ ನಡೆಸುವಂತೆ ಅವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಧಿಕಾರಿ ಎಂ.ಎಲ್. ವೈಶಾಲಿ, ಅಪರ ಜಿಲ್ಲಾ ಧಿಕಾರಿ ಜಿ.ಅನುರಾಧ, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ, ಯೋಜನಾ ನಿರ್ದೇಶಕ ನಾಗೇಂದ್ರ ಹೊನ್ನಳ್ಳಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ರಾಜೇಶ ಸುರಗಿಹಳ್ಳಿ, ಶಿಮ್ಸ್ ನಿರ್ದೇಶಕ ಡಾ| ಸಿದ್ದಪ್ಪ ಮತ್ತಿತರ ಅ ಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
40 percent commission ಸುಳ್ಳು ಸಾಬೀತು : ಕಾಂಗ್ರೆಸಿಗರಿಗೆ ತಾಕೀತು ಮಾಡಿದ ಯಡಿಯೂರಪ್ಪ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ
Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್‌ವೈ
Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.