Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್‌ ಮೂಲದವರು


Team Udayavani, Dec 24, 2024, 12:57 AM IST

1-sham

ಹೊಸದಿಲ್ಲಿ: ಭಾರತದಲ್ಲಿ ಸಾಮಾಜಿಕ ಕಳಕಳಿ ಯುಳ್ಳ ಸಿನಿಮಾಗಳ ಪ್ರವರ್ತಕ ಎಂದೇ ಖ್ಯಾತಿ ಪಡೆದುಕೊಂ ಡಿದ್ದ ಖ್ಯಾತ ಸಿನೆಮಾ ನಿರ್ದೇ ಶಕ ಶ್ಯಾಂ ಬೆನಗಲ್‌(90) ಅವರು ಸೋಮವಾರ ಮುಂ­ಬಯಿಯಲ್ಲಿ ವಿಧಿವಶರಾಗಿದ್ದಾರೆ.
ಮೂತ್ರಪಿಂಡ ಸೋಂಕಿ­ನಿಂದ ಬಳಲುತ್ತಿದ್ದ ಅವರನ್ನು ಕೆಲದಿನಗಳ ಹಿಂದೆ ವೋ ಕಾರ್ಡ್‌ ಆಸ್ಪತ್ರೆಗೆ ದಾಖಲಿಸ ಲಾಗಿತ್ತು. ಡಿ. 14­ರಂದು ಅವರು ತಮ್ಮ 90ನೇ ಜನ್ಮದಿನವನ್ನು ಆಚರಿಸಿಕೊಂಡಿದ್ದರು ಎಂದು ಅವರ ಪುತ್ರಿ ಪಿಯಾ ಬೆನೆಗಲ್‌ ಅವರು ಹೇಳಿದ್ದಾರೆ.

1934ರಲ್ಲಿ ಅಂದಿನ ಹೈದರಾಬಾದ್‌ ಪ್ರಾಂತ್ಯದ ತಿರುಮಲಗಿರಿಯಲ್ಲಿ ಅವರು ಜನಿಸಿದ್ದರು. ಕಾಪಿರೈಟರ್‌ ಆಗಿ ವೃತ್ತಿಜೀವನ ಆರಂಭಿಸಿದ ಅವರು, ಗುಜರಾತಿಯಲ್ಲಿ ಮೊದಲ ಸಾಕ್ಷ್ಯಚಿತ್ರ “ಘೇರ್‌ ಬೇತಾ ಗಂಗಾ’ವನ್ನು 1962ರಲ್ಲಿ ನಿರ್ಮಿಸಿದರು. ಅಲ್ಲದೆ 1980ರಿಂದ 1986ರವರೆಗೆ ರಾಷ್ಟ್ರೀಯ ಚಲನಚಿತ್ರ ಅಭಿವೃದ್ಧಿ ಮಂಡಳಿ ನಿರ್ದೇಶಕರಾ­ಗಿಯೂ ಸೇವೆ ಸಲ್ಲಿಸಿದ್ದಾರೆ. ಅವರ ಮಂಡಿ ಸಿನಿಮಾ ರಾಜಕೀಯ ಮತ್ತು ವೇಶ್ಯಾವಾಟಿಕೆ ವಿಷಯಗಳಿಗೆ ಸಂಬಂಧಿಸಿದ ಕಥಾಹಂದರವನ್ನು ಒಳಗೊಂಡಿದೆ.

18 ರಾಷ್ಟ್ರೀಯ ಪ್ರಶಸ್ತಿಗಳು: ನೈಜವಾಗಿ ಕಥೆ ಹೇಳುವಿಕೆ ಮತ್ತು ಸಾಮಾಜಿಕ ಒಳನೋಟ ಗಳನ್ನೊಳಗೊಂಡ ಸಿನೆಮಾಗಳನ್ನು ನಿರ್ಮಾಣ ಮಾಡುವ ಮೂಲಕ ಶ್ಯಾಂ ಬೆನೆಗಲ್‌ ಅವರು ಹೆಸರುವಾಸಿಯಾಗಿದ್ದರು. ಇದಕ್ಕಾಗಿ ಇವರು 18 ರಾಷ್ಟ್ರೀಯ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಅಲ್ಲದೇ 1976ರಲ್ಲಿ ಪದ್ಮಶ್ರೀ, 1991ರಲ್ಲಿ ಪದ್ಮ ಭೂಷಣ ಪ್ರಶಸ್ತಿಗಳನ್ನು ನೀಡಿ ಭಾರತ ಸರಕಾರ ಅವರನ್ನು ಗೌರವಿಸಿದೆ. 2005ರಲ್ಲಿ ಅವರಿಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ ಸಿಕ್ಕಿದೆ. ಶ್ಯಾಂ ಬೆನೆಗಲ್‌ ಅವರು ಅಂಕುರ್‌, ನಿಶಾಂತ್‌, ಮಂಥನ್‌, ಭೂಮಿಕಾ, ಮಮ್ಮೋ, ಸರ್ದಾರಿ ಬೇಗಂ ಮತ್ತು ಜುಬೇದಾ ಸಿನೆಮಾಗಳಿಗಾಗಿ ಅವರು ಹೆಸರುವಾಸಿಯಾಗಿದ್ದಾರೆ.

ಗಣ್ಯರ ಕಂಬನಿ: ಶ್ಯಾಂ ಬೆನೆಗಲ್‌ ಅವರ ನಿಧನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಜಗದೀಪ್ ಧನ್ಖರ್,   ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ನವೀನ್‌ ಪಟ್ನಾಯಕ್‌ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.

“ಪಂಡಿತ್‌ ನೆಹರು ಅವರ ಡಿಸ್ಕವರಿ ಆಫ್ ಇಂಡಿಯಾ ಆಧರಿತ ಭಾರತ್‌ ಏಕ್‌ ಕೋಜ್‌ ಮತ್ತು ಸಂವಿಧಾನ್‌ನಂತಹ ಚಿತ್ರಗಳ ಮೂಲಕ ಅವರು ಅಜರಾಮರಾಗಿದ್ದಾರೆ ಎಂದು ಮಲ್ಲಿಕಾರ್ಜುನ್‌ ಖರ್ಗೆ ಹೇಳಿದ್ದಾರೆ.

ಉಡುಪಿಯ ಬೆನಗಲ್‌ ಮೂಲದ ಶ್ಯಾಮ್‌


ಉಡುಪಿ/ಬ್ರಹ್ಮಾವರ: ಶ್ಯಾಮ್‌ ಬೆನಗಲ್‌ ಅವರ ತಂದೆ ಶ್ರೀಧರ ಬಿ. ಬೆನಗಲ್‌ ಅವರು ಬ್ರಹ್ಮಾವರ ಕೊಕ್ಕರ್ಣೆ ಸಮೀಪದ ಬೆನಗಲ್‌ನವರು. ಚಿತ್ರಾಪುರ ಸಾರಸ್ವತ ಬ್ರಾಹ್ಮಣ ಸಮುದಾಯಕ್ಕೆ ಸೇರಿದ ಇವರ ಮೂಲ ನಾಗಬನ ಬೆನಗಲ್‌ನಲ್ಲಿದೆ. ಇಂದಿಗೂ ಶ್ಯಾಮ್‌ ಬೆನಗಲ್‌ ಕುಟುಂಬಸ್ಥರು ಮೂಲಸ್ಥಾನಕ್ಕೆ ಆಗಮಿಸಿ ಸೇವೆ ಸಲ್ಲಿಸುತ್ತಿದ್ದಾರೆ. ಹತ್ತಾರು ವರ್ಷಗಳ ಹಿಂದೆ ಶ್ಯಾಮ್‌ ಬೆನಗಲ್‌ ಇಲ್ಲಿಗೆ ಆಗಮಿಸಿದ್ದರು ಎಂದು ಸ್ಥಳೀಯರು ನೆನಪಿಸುತ್ತಾರೆ.
ಹಲವು ವರ್ಷಗಳ ಹಿಂದೆ ಅನಾರೋಗ್ಯ ಕಾಣಿಸಿಕೊಂಡಾಗ ಪ್ರಶ್ನಾಚಿಂತನೆಯಂತೆ ಬೆನಗಲ್‌ ಅವರು ಕುಟುಂಬದವರ ಜತೆ ತಮ್ಮ ಮೂಲ ನಾಗಬನಕ್ಕೆ ಆಗಮಿಸಿ ಆಶ್ಲೇಷಾ ಸೇವೆ ಸಲ್ಲಿಸಿದ್ದರು. ಅನಂತರದಿಂದ ಪ್ರತೀ ವರ್ಷ ಕುಟುಂಬದವರಿಂದ ಸೇವೆ ನಡೆಯುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಗಿರೀಶ್‌ ಕಾರ್ನಾಡ್‌ ಅವರು ನಿರ್ದೇಶನದ ಹಿಂದಿ ಚಿತ್ರವೊಂದರ ಚಿತ್ರೀಕರಣ ಉಡುಪಿ/ ಕುಂದಾಪುರದಲ್ಲಿ ನಡೆದಿತ್ತು. ಆ ವೇಳೆ ಶ್ಯಾಮ್‌ ಬೆನಗಲ್‌ ಅವರು ಉಡುಪಿಗೆ ಬಂದಿದ್ದರು. 1984ರ ಉತ್ಸವ್‌ ಸಿನೆಮಾದ ಚಿತ್ರೀಕರಣದ ಸಂದರ್ಭ ಬಂದಿದ್ದಾರೆ ಎನ್ನಲಾಗಿದೆಯಾದರೂ ಈ ಬಗ್ಗೆ ಯಾರಲ್ಲೂ ಖಚಿತವಾದ ಮಾಹಿತಿ ಇಲ್ಲ.

ಅನಂತ್‌ ನಾಗ್‌ ಜೊತೆ ಹಿಂದಿ ಸಿನೆಮಾ
ಕನ್ನಡದ ಹಿರಿಯ ನಟ ಅನಂತ್‌ನಾಗ್‌‍ ಅಭಿನಯದಲ್ಲಿ ಹಲವು ಚಿತ್ರಗಳ ನಿರ್ದೇಶನ ಮಾಡುವ ಮೂಲಕ ಅನಂತ್‌ನಾಗ್‌ ಅವರನ್ನು ಹಿಂದಿಯಲ್ಲಿ ಪರಿಚಯಿಸಿದ ಖ್ಯಾತಿ ಕೂಡಾ ಬೆನಗಲ್‌ ಅವರದ್ದು. ಅಂಕುರ್‌, ನಿಶಾಂತ್‌‍, ಮಂಥನ್‌‍, ಭೂಮಿಕಾ, ಕೊಂಡೂರಾ, ಕಲಿಯುಗ್‌‍ ಮುಂತಾದ ಶ್ಯಾಮ್‌‍ ಬೆನೆಗಲ್‌‍ ನಿರ್ದೇಶನದ ಚಿತ್ರಗಳಲ್ಲಿ ಅನಂತ್‌ ನಾಗ್‌‍ ಅಭಿನಯಿಸಿದ್ದಾರೆ. ಅನಂತ್‌ನಾಗ್‌ ಅವರ ಮೊದಲ ಹಿಂದಿ ಚಿತ್ರ ಅಂದಿನ ಕಾಲಕ್ಕೆ ಸಾಕಷ್ಟು ಬೋಲ್ಡ್ ದೃಶ್ಯಗಳನ್ನು ಹೊಂದಿ, ಆ ಕಾಲಕ್ಕೆ “ಮುಂದುವರಿದ ಚಿತ್ರ’ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು. ಈ ಚಿತ್ರ 3 ರಾಷ್ಟ್ರ ಪ್ರಶಸ್ತಿಯನ್ನು ಪಡೆದಿದೆ. ಅನಂತ್‌ ನಾಗ್‌ ಹಾಗೂ ಬೆನಗಲ್‌ ಜೋಡಿಯ ಕೊನೆಯ ಚಿತ್ರ “ಕಲಿಯುಗ್‌’. ಈ ಸಿನೆಮಾ ಮಹಾಭಾರತದ ಆಧುನಿಕ ರೂಪವಾಗಿತ್ತು. ಹಾಲಿನ ಕ್ರಾಂತಿ ಕುರಿತಾದ ಮಂಥನ ಚಿತ್ರ ಮೊದಲು ಸಾಕ್ಷ್ಯ ಚಿತ್ರವಾಗಿತ್ತು. ಗುಜರಾತ್‌ ಹಾಲು ಉತ್ಪಾದಕರ ಸಂಘದ 5 ಲಕ್ಷ ಮಂದಿ ಸದಸ್ಯರು 2 ರೂಪಾಯಿಯಂತೆ ಹಾಕುವ ಮೂಲಕ ನಿರ್ಮಾಣಕ್ಕೆ ಸಾಥ್‌ ನೀಡಿದರು.

ಶ್ಯಾಮ್‌ ಬೆನಗಲ್‌ ಅವರ ನಿಧನದಿಂದಾಗಿ, ಒಬ್ಬ ಸೃಜನಶೀಲ ಕಲಾವಿದರ ಅಂತ್ಯವಾಗಿದೆ. ನಾನು ಅವರ ಸ್ಮತಿಗೆ ಗೌರವ ಸಲ್ಲಿಸುತ್ತೇನೆ ಮತ್ತು ಅವರ ಕುಟುಂಬ ಮತ್ತು ಪ್ರಿಯಜನರಿಗೆ ನನ್ನ ಹೃತೂ³ರ್ವಕ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಅಗಲಿದ ಆತ್ಮಕ್ಕೆ ದೇವರು ಮೋಕ್ಷ ನೀಡಲಿ ಎಂದು ಪ್ರಾರ್ಥನೆ.
ದತ್ತಾತ್ರೇಯ ಹೊಸಬಾಳೆ, ಆರೆಸ್ಸೆಸ್‌ಸರಕಾರ್ಯವಾಹ

ಟಾಪ್ ನ್ಯೂಸ್

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

Rajbhavana

Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್‌- ಸಿ.ಟಿ.ರವಿ ವಾಗ್ವಾದ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqew

Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು

1-koteshwara

Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?

puttige-6-

Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು

1-traa

Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್‌ ಜಾಮ್‌

police

Udupi: ಕೋಳಿ ಅಂಕಕ್ಕೆ ದಾಳಿ; 9 ಕೋಳಿ ಸಹಿತ ನಾಲ್ವರ ವಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.