ವಿಶೇಷ ಚೇತನರ ಆರೋಗ್ಯಕ್ಕಾಗಿ ವಿಶೇಷ ವಿಮಾ ಯೋಜನೆ: ಸಿಎಂ ಬೊಮ್ಮಾಯಿ ಘೋಷಣೆ


Team Udayavani, Dec 3, 2022, 4:40 PM IST

ವಿಶೇಷ ಚೇತನರ ಆರೋಗ್ಯಕ್ಕಾಗಿ ವಿಶೇಷ ವಿಮಾ ಯೋಜನೆ: ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು: ಅಂಗವಿಕಲರ ಆರೋಗ್ಯಕ್ಕಾಗಿ ವಿಶೇಷ ವಿಮಾ ಯೋಜನೆ ರೂಪಿಸಿ, ಐದು ಲಕ್ಷದವರೆಗಿನ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುವ ಯೋಜನೆ ಪ್ರಾರಂಭಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯದ ವತಿಯಿಂದ ಆಯೋಜಿಸಿದ್ದ ವಿಶ್ವ ವಿಕಲಚೇತನರ ದಿನಾಚರಣೆ -2022ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಶೇ.3 ರಷ್ಟು ಮೀಸಲಾತಿ: ವಿಕಲಚೇತನರು ದೈರ್ಯದಿಂದ ಯಶಸ್ವಿಯಾಗಿ ‌ಬದುಕು ನಡೆಸಲು ಸರ್ಕಾರ ಎಲ್ಲ ಸಹಕಾರವನ್ನು ನೀಡಲಿದೆ. ಸರ್ಕಾರ ನಿರ್ಮಿಸುವ ಮನೆಗಳಲ್ಲಿ ಅಂಗವಿಕಲರಿಗೆ ನೀಡುವಲ್ಲಿ ಶೇ.3 ರಷ್ಟು ಮೀಸಲಾತಿಯನ್ನು ನೀಡಲಾಗುವುದು. ಬುದ್ಧಿಮಾಂದ್ಯ ಮಕ್ಕಳಿಗೆ ಶೆಲ್ಟರ್ಡ್ ವರ್ಕ್ ಶಾಪ್ ಸ್ಥಾಪಿಸಲು ತೀರ್ಮಾನಿಸಲಾಗಿದೆ ಎಂದರು.

2 ಸಾವಿರ ಟ್ರೈ ಸೈಕಲ್: ಸರ್ಕಾರದ ವತಿಯಿಂದ ಅಂಗವಿಕಲಿಗೆ ಪವರ್ಡ್ ಟ್ರೈಸೈಕಲ್ ನೀಡಲಾಗುತ್ತಿದೆ. ಈ ವರ್ಷ ಈ ಯೋಜನೆಗೆ 25 ಕೋಟಿ ರೂ.ಗಳನ್ನು ನೀಡಿ 2 ಸಾವಿರ ಟ್ರೈ ಸೈಕಲ್ ಗಳನ್ನು ಮಾರ್ಚ್ 31ರೊಳಗೆ ನೀಡಲು ತೀರ್ಮಾನಿಸಿರುವುದಾಗಿ ತಿಳಿಸಿದರು.

ವಿದ್ಯಾಭ್ಯಾಸಕ್ಕಾಗಿ ವಿಶೇಷ ಅನುದಾನ: ವಸತಿ ಶಾಲೆಗಳಲ್ಲಿ ಬುದ್ದಿಮಾಂದ್ಯ ಮಕ್ಕಳಿಗೆ ನೀಡಲಾಗುತ್ತಿದ್ದ 6800 ರೂ.ಗಳನ್ನು 10200 ರೂ.ಗಳಿಗೆ ಹೆಚ್ಚಿಸಲಾಗಿದೆ. ಬುದ್ಧಿಮಾಂದ್ಯ ಮಕ್ಕಳ ವಸತಿರಹಿತ ಶಾಲೆಗಳಲ್ಲಿ ನೀಡಲಾಗುತ್ತಿದ್ದ 6000 ರೂ.ಗಳನ್ನು 9000 ರೂ.ಹೆಚ್ಚಿಸಿ ನೀಡಲಾಗುತ್ತಿದೆ. ಅಂಧಕಿವುಡ ಮಕ್ಕಳ ವಸತಿ ಶಾಲೆಗಳಲ್ಲಿರುವವರಿಗೆ 9300 ರೂ.ಗಳನ್ನು, ವಸತಿರಹಿತ ಶಾಲೆಗಳ ಅಂಧಕಿವುಡ ಮಕ್ಕಳಿಗೆ 7800 ರೂ.ಗಳನ್ನು ,ಹಗಲುಸೇವೆ ಯೋಗಕ್ಷೇಮ ಕೇಂದ್ರಗಳಿಗೆ 15000 ರೂ.ಗಳನ್ನು, ವೃದ್ಧಾಶ್ರಮ ಕೇಂದ್ರಗಳ ನಿರ್ವಹಣೆಗೆ 12 ಲಕ್ಷ ರೂ. ನೀಡಲಾಗುತ್ತಿದೆ. ಮುಖ್ಯಮಂತ್ರಿಯಾದ ತಕ್ಷಣ ವಿಕಲಚೇತನರ ಮಾಸಾಶನವನ್ನು ಹೆಚ್ಚಿಸಲಾಗಿದೆ. ಮುಂದಿನ ದಿನಗಳಲ್ಲಿ ಈ ಸವಲತ್ತುಗಳನ್ನು ಹೆಚ್ಚಿಸಲಾಗುವುದು. ಆಸಿಡ್ ದಾಳಿಯಿಂದ ಬಳಲುವ ಹೆಣ್ಣು ಮಕ್ಕಳಿಗೆ 3000 ರೂ. ದಿಂದ 10000 ರೂ.ಗಳಿಗೆ ಹೆಚ್ಚಳ ಮಾಡಲಾಗಿದೆ. ವಿಕಲಚೇತನರ ವಿದ್ಯಾಭ್ಯಾಸಕ್ಕಾಗಿ ಮುಂದಿನ ಬಜೆಟ್ ನಲ್ಲಿ ವಿಶೇಷ ಅನುದಾನವನ್ನು ಮೀಸಲಿರಿಸಲಾಗುವುದು ಎಂದರು.

ದೇವರ ಮಕ್ಕಳು: ದೇವರು ಸೃಷ್ಟಿ ಮಾಡುವಾಗ ಹಲವಾರು ಸವಾಲುಗಳನ್ನು ಮನುಷ್ಯನಿಗೆ ಇಟ್ಟಿರುತ್ತಾನೆ. ಎಲ್ಲ ಅಂಗ ಇದ್ದವರಿಗೂ ದೇವರು ಸವಾಲು ಇಟ್ಡಿರುತ್ತಾನೆ‌. ಅಂಗಾಂಗಳ ಕೊರತೆ ಇದೆಯೆಂಬ ಕೀಳರಿಮೆ ಬೇಡ. ವಿಕಲಚೇತನರು ವಿಶೇಷವಾದ ದೇವರ ಮಕ್ಕಳು. ಸವಾಲುಗಳನ್ನು ಎದುರಿಸುವ ವಿಶೇಷ ಶಕ್ತಿಯನ್ನು ಹಾಗೂ ಮನೋಸ್ಥೈರ್ಯವನ್ನು ದೇವರು ನಿಮಗೆ ನೀಡಿದ್ದಾನೆ. ನೀವು ಆತ್ಮ ವಿಶ್ವಾಸದಿಂದ ಇರಬೇಕು. ನಾವೂ ಇತರರಂತೆ ಬದುಕಿ ತೋರಿಸುತ್ತೇವೆ ಎಂಬ ಛಲ ಮತ್ತು ನಂಬಿಕೆ ಇರಬೇಕು. ನಿಮಗೆ ಅನುಕಂಪದ ಅವಶ್ಯಕತೆ ಇಲ್ಲ. ವಿಕಲಚೇತನರನ್ನು ಸಶಕ್ತಗೊಳಿಸುವ ಸಮಾಜದ ಅವಶ್ಯಕತೆ ಇದೆ. ಕೆಳಗೆ ಬೀಳುವ ವ್ಯಕ್ತಿಯನ್ನು ಮೇಲೆತ್ತುವುದು ಮಾನವ ಧರ್ಮ, ಅದನ್ನು ಮನುಷ್ಯರು ಮರೆಯದೇ ನೆರವು ನೀಡಬೇಕು. ಇದು ವಿಶ್ವ ಮಾನವ ಸಮಾಜ. ಒಬ್ಬರಿಗೊಬ್ಬರು ಕೈ ಹಿಡಿದು ನಡೆಯುವ ಮಾನವೀಯ ಗುಣವನ್ನು ಎಲ್ಲರೂ ಪಾಲಿಸಬೇಕು ಎಂದರು.

ಇದನ್ನೂ ಓದಿ:ನ್ಯಾಯಾಲಯದ ಕಚೇರಿಯೊಳಗೆ ಜಡ್ಜ್ ರಾಸಲೀಲೆ?; ಹೈಕೋರ್ಟ್ ರಿಜಿಸ್ಟ್ರಾರ್ ಗೆ ಆಯೋಗ ದೂರು

ಎಲ್ಲ ಅಂಗಾಂಗಳು ಸರಿಯಿದ್ದವರಿಗೂ ಸಮಾಧಾನ ಇರುವುದಿಲ್ಲ. ಪರೋಪಕಾರದ ಗುಣವನ್ನು ಬೆಳೆಸಿಕೊಂಡರೆ ಮಾತ್ರ ಸಮಾಧಾನ ದೊರೆಯುತ್ತದೆ. ಸಶಕ್ತರಾಗಿರುವವರು ದಿವ್ಯಾಂಗ ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸಿ, ಸಹಾಯ ಮಾಡಬೇಕು. ರಾಜ್ಯದಲ್ಲಿ ಸುಮಾರು 40 ರಿಂದ 50 ಲಕ್ಷ ದಿವ್ಯಾಂಗ ಮಕ್ಕಳಿದ್ದು, ಅವರ ಬೆಳವಣಿಗೆಗೆ ಏಳು ಕೊಟಿ ಕನ್ನಡಿಗರು ಸಹಾಯ ಮಾಡುವ ಹೃದಯಶ್ರೀಮಂತಿಕೆಯನ್ನು ಬೆಳೆಸಿಕೊಳ್ಳಬೇಕು. ದೇವರ ಮಕ್ಕಳಿಗೆ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆಯಬೇಕು.ದಿವ್ಯಾಂಗ ಮಕ್ಕಳನ್ನು ಬೆಳೆಸುವ ಪ್ರತಿಜ್ಞೆ ತೆಗೆದುಕೊಳ್ಳಬೇಕು ಎಂದು ಕನ್ನಡ ಜನತೆಗೆ ಕರೆ ನೀಡಿದರು.

ಟಾಪ್ ನ್ಯೂಸ್

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Congress is taking revenge by forming SIT: Araga Jnanendra

Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

1-qweqwe

Mangaluru: ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

1-ssss

J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

1-qweqwe

Mangaluru: ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

1-ssss

J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.