Malpe: ಏಕರೂಪದ ಮೀನುಗಾರಿಕೆಗೆ ಪ್ರಯತ್ನ
ಯಶ್‌ಪಾಲ್ ಸುವರ್ಣ ನೇತೃತ್ವದ ನಿಯೋಗಕ್ಕೆ ಗೋವಾ ಸಚಿವರ ಭರವಸೆ
Team Udayavani, Nov 30, 2024, 12:38 AM IST
ಮಲ್ಪೆ: ರಾಜ್ಯದ ಗಡಿ ಪ್ರದೇಶದಲ್ಲಿ ಮೀನುಗಾರರಿಗೆ ಎದುರಾ ಗುತ್ತಿರುವ ಸಮಸ್ಯೆಗಳ ಗೊಂದಲವನ್ನು ನಿವಾರಿಸಲು ದೇಶದ ಪಶ್ಚಿಮ ಕರಾವಳಿಗೆ ಏಕರೂಪ ಮೀನುಗಾರಿಕೆ ನೀತಿ ಜಾರಿ ಯಾದಲ್ಲಿ ಪರಿಹಾರ ಸಿಗಲಿದೆ.
ಈ ನಿಟ್ಟಿನಲ್ಲಿ ಶೀಘ್ರದಲ್ಲಿ ಪಶ್ಚಿಮ ಕರಾವಳಿ ರಾಜ್ಯಗಳ ಮೀನುಗಾರಿಕೆ ಸಚಿವರ ಸಭೆ ನಡೆಸಿ ಕೇಂದ್ರ ಸರಕಾರದ ಮೂಲಕ ಏಕರೂಪ ಮೀನುಗಾರಿಕೆ ನೀತಿ ಅನುಷ್ಠಾನಕ್ಕೆ ಪ್ರಯತ್ನಿಸಲಾಗುವುದು ಎಂದು ಗೋವಾ ಮೀನುಗಾರಿಕೆ ಸಚಿವ ನೀಲಕಂಠ ಹಲನ್ಕìರ್ ಹೇಳಿದರು.
ಅವರು ಗುರುವಾರ ಕರಾವಳಿ ಕರ್ನಾಟಕದ ಮೀನುಗಾರರು ರಾಜ್ಯದ ಗಡಿಭಾಗದಲ್ಲಿ ಮೀನುಗಾರಿಕೆ ನಡೆಸುವ ಸಂದರ್ಭದಲ್ಲಿ ಉಂಟಾಗುವ ಸಮಸ್ಯೆಗಳು, ದಂಡ ವಿಧಿಸುವ ಬಗ್ಗೆ ಉಂಟಾಗುತ್ತಿರುವ ಗೊಂದಲಗಳ ಬಗ್ಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಸಕ ಯಶ್‌ಪಾಲ್ ಸುವರ್ಣ ನೇತೃತ್ವದ ಮಲ್ಪೆ ಮೀನುಗಾರರ ಸಂಘದ ನಿಯೋಗವು ಗೋವಾದ ಮೀನುಗಾರಿಕೆ ಸಚಿವಾಲಯದ ಕಚೇರಿಯಲ್ಲಿ ಸಚಿವರನ್ನು ಭೇಟಿ ಮಾಡಿದ ಸಂದರ್ಭ ಈ ಭರವಸೆ ನೀಡಿದರು.
ಮಲ್ಪೆ ಮೀನುಗಾರ ಸಂಘದ ಅಧ್ಯಕ್ಷ ದಯಾನಂದ ಸುವರ್ಣ ಅವರು ಮೀನುಗಾರರ ಸಂಕಷ್ಟದ ಬಗ್ಗೆ ವಿವರಿಸಿದರು.
ಕರ್ನಾಟಕ ಸರಕಾರದ ಮೀನುಗಾರಿಕೆ ಇಲಾಖೆ ನಿರ್ದೇಶಕ ದಿನೇಶ್ ಕಲ್ಲೇರ್, ಮಲ್ಪೆ ಯಾಂತ್ರಿಕ ಟ್ರಾಲ್‌ದೋಣಿ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ರಾಮಚಂದ್ರ ಕುಂದರ್, ಉಪಾಧ್ಯಕ್ಷ ಪ್ರಕಾಶ್ ಬಂಗೇರ, ಮಲ್ಪೆ ಡೀಪ್ ಸೀ ಟ್ರಾಲ್ ಬೋಟ್ ಸಂಘದ ಅಧ್ಯಕ್ಷ ಸುಭಾಷ್ ಮೆಂಡನ್, 370 ಬೋಟ್ ಮೀನುಗಾರ ಸಂಘದ ಮಾಜಿ ಅಧ್ಯಕ್ಷ ಕಿಶೋರ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.
ನಾಟಿಕಲ್ ಮೈಲುಗಳ ಗೊಂದಲ
ಕರ್ನಾಟಕ -ಗೋವಾದ ಗಡಿ ಭಾಗದಲ್ಲಿ ಮೀನುಗಾರಿಕೆ ನಡೆಸುವಾಗ ನಾಟಿಕಲ್ ಮೈಲುಗಳ ವ್ಯಾಪ್ತಿ ವ್ಯತ್ಯಾಸದಿಂದ ಗೊಂದಲ ಹಾಗೂ ಮಾಹಿತಿ ಕೊರತೆಯಿಂದ ಗೋವಾ ಗಡಿಭಾಗ ಪ್ರವೇಶಿಸಿದಾಗ ಬೋಟ್‌ಗಳನ್ನು ವಶಪಡಿಸಿ ಕೊಂಡು ಭಾರೀ ದಂಡ ವಿಧಿಸಲಾಗುತ್ತಿದ್ದು, ಇದರಿಂದ ಮೀನುಗಾರರು ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಯಶ್‌ಪಾಲ್ ಸಚಿವರಿಗೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.