Ramalinga Reddy: ಸುಮಲತಾ, ಸಿ.ಟಿ.ರವಿ ಸಹ ಕೇಸ್‌ ವಾಪಸ್‌ ಫ‌ಲಾನುಭವಿಗಳು

ಬಿಜೆಪಿ ಅವಧಿಯಲ್ಲಿ 385 ಪ್ರಕರಣಗಳ ವಾಪಸ್‌

Team Udayavani, Oct 16, 2024, 6:45 AM IST

Ramalinga Reddy: ಸುಮಲತಾ, ಸಿ.ಟಿ.ರವಿ ಸಹ ಕೇಸ್‌ ವಾಪಸ್‌ ಫ‌ಲಾನುಭವಿಗಳು

ಬೆಂಗಳೂರು: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್‌ ಪಡೆದಿರುವುದನ್ನು ಸಮರ್ಥಿಸಿಕೊಂಡ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಬಿಜೆಪಿ ತನ್ನ ಆಡಳಿತಾವಧಿಯಲ್ಲಿ ಕೋಮುದ್ವೇಷ ಸೇರಿ 182 ಗಂಭೀರ ಪ್ರಕರಣಗಳನ್ನು ವಾಪಸ್‌ ಪಡೆದಿತ್ತು. ಮಾಜಿ ಸಂಸದೆ ಸುಮಲತಾ ಅಂಬರೀಶ್‌, ಸಿ.ಟಿ. ರವಿ ಸೇರಿದಂತೆ ಹಲವರು ಇದರ ಫ‌ಲಾನುಭವಿಗಳಾಗಿದ್ದಾರೆ ಎಂದು ತಿರುಗೇಟು ನೀಡಿದರು.

ಇತ್ತೀಚೆಗೆ ನಡೆದ ಸಚಿವ ಸಂಪುಟದಲ್ಲಿ 43 ಪ್ರಕರಣಗಳನ್ನು ವಾಪಸ್‌ ಪಡೆಯಲಾಗಿದೆ. ಇದರಲ್ಲಿ ಹಳೇಹುಬ್ಬಳ್ಳಿ ಪ್ರಕರಣವೂ ಒಂದಾಗಿದೆ. ಆದರೆ, ಬಿಜೆಪಿಯವರು ಸತ್ಯಹರಿಶ್ಚಂದ್ರರಂತೆ ಬಿಂಬಿಸಿಕೊಳ್ಳುತ್ತಿದ್ದಾರೆ.ಅವರ ಅಧಿಕಾರವಧಿಯಲ್ಲಿ ಒಟ್ಟಾರೆ 385 ಪ್ರಕರಣಗಳನ್ನು ಹಿಂಪಡೆದಿದ್ದು, ಅದರಲ್ಲಿ 182 ಪ್ರಕರಣಗಳು ಕೋಮುದ್ವೇಷ, ಅನೈತಿಕ ಪೊಲೀಸ್‌ಗಿರಿ, ಪಬ್‌ ದಾಳಿಯಂತಹ ಗಂಭೀರ ಪ್ರಕರಣಗಳೂ ಸೇರಿವೆ. ಇದರಿಂದ 2 ಸಾವಿರಕ್ಕೂ ಅಧಿಕ ಆರೋಪಿಗಳ ಮೇಲಿನ ಪ್ರಕರಣಗಳು ಇಲ್ಲವಾಗಿವೆ. ರಮೇಶ್‌ ಜಾರಕಿಹೊಳಿ, ಸಿ.ಟಿ. ರವಿ, ಸುಮಲತಾ ಅಂಬರೀಶ್‌, ಪ್ರತಾಪ್‌ಸಿಂಹ, ಜೆ.ಸಿ. ಮಾಧುಸ್ವಾಮಿ ಮತ್ತಿತರರು ಅದರ ಫ‌ಲಾನುಭವಿಗಳಾಗಿದ್ದಾರೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

ಹೆಣ ಬಿದ್ದರೆ ಸಾಕು, ಬಿಜೆಪಿಯವರು ರಣಹದ್ದುಗಳಂತೆ ಕಾಯುತ್ತಿರುತ್ತಾರೆ. ಹೆಣದ ಮೇಲಿನ ರಾಜಕೀಯದ ಬಗ್ಗೆ ಪುಸ್ತಕವಿದ್ದು ಅದನ್ನು ಮತ್ತೂಮ್ಮೆ ಮುದ್ರಿಸಲಾಗುವುದು. ಬಿಜೆಪಿ ಅವಧಿಯಲ್ಲಿ ಕೇಸ್‌ ಹಿಂಪಡೆದಿದ್ದರಿಂದ ಲಾಭ ಪಡೆದವರ ಪಟ್ಟಿಯಲ್ಲಿ ಶ್ರೀರಾಮ ಸೇನೆ, ಭಜರಂಗದಳ, ಹಿಂದೂ ಜಾಗರ ವೇದಿಕೆ ಸದಸ್ಯರೂ ಪಡೆದಿದ್ದಾರೆ. 2018 ರಿಂದ 2020ನೇ ಸಾಲಿನಲ್ಲಿ 127 ಕೇಸ್‌ಗಳನ್ನು ಬಿಜೆಪಿ ಹಿಂಪಡೆದಿದೆ. ಇದರ ಫ‌ಲಾನುಭವಿಗಳು ಪಿಎಫ್ಐ, ಎಸ್‌ಡಿಪಿಐ ಕೂಡ ಆಗಿವೆ ಎಂದು ದೂರಿದರು.

ಕ್ರಿಮಿನಲ್‌ ಪ್ರಕ್ರಿಯೆ ಸಂಹಿತೆ ಕಲಂ 321ರಡಿ ರಾಜ್ಯದ ಯಾವುದೇ ಪೊಲೀಸ್‌ ಠಾಣೆಯಲ್ಲಿ ಎಫ್ಐಆರ್‌ ದಾಖಲಾಗಿದ್ದರೂ, ವಾಪಸ್‌ ಪಡೆಯುವ ಅಧಿಕಾರ ದೇಶದ ಎಲ್ಲ ರಾಜ್ಯ ಸರ್ಕಾರಗಳಿಗಿದೆ. ಗೃಹ ಇಲಾಖೆಗೆ ಕೇಸ್‌ಗೆ ಸಂಬಂಧ ಪಟ್ಟವರು ವಾಪಸ್‌ ಪಡೆಯಬೇಕು ಎಂದು ಮನವಿ ಸಲ್ಲಿಸಿರುತ್ತಾರೆ. ಇದರ ಆಧಾರದ ಮೇಲೆ ಕ್ರಮ ತೆಗೆದುಕೊಳ್ಳಲಾಗುತ್ತದೆ. ಅನೇಕ ಬಾರಿ ದುರುದ್ದೇಶಪೂರಿತವಾಗಿ ಕೇಸ್‌ ದಾಖಲಿಸಲಾಗಿರುತ್ತದೆ. ರೈತರ ಪರ, ಭಾಷೆ, ಜಲವಿವಾದ ಸೇರಿದಂತೆ ಅನೇಕ ಸಂಘಟನೆಗಳು ಹೋರಾಟ ನಡೆಸಿರುತ್ತವೆ ಎಂದು ಹಿಂಪಡೆದಿದ್ದಕ್ಕೆ ಸಮಜಾಯಿಷಿ ನೀಡಿದರು.

ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್‌ ಬಾಬು ಮಾತನಾಡಿ, ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆಯುವಂತೆ ದಲಿತ ಸಂಘಟನೆಗಳ ಒಕ್ಕೂಟದ ಡಿ.ಬಿ. ಚಲವಾದಿ ಅವರು ರಾಜ್ಯ ಸರ್ಕಾರಕ್ಕೆ ಮನವಿ ಕೊಟ್ಟ ಆಧಾರದ ಮೇಲೆ ಅದನ್ನು ಗೃಹ ಇಲಾಖೆಗೆ ಕಳುಹಿಸಲಾಗಿತ್ತು. ಅವರು ಉಪ ಸಮಿತಿಗೆ ಕಳುಹಿಸಿದ್ದರು, ಈ ಸಮಿತಿಯ ವರದಿ ಅಧಾರದ ಮೇಲೆ ಕೇಸ್‌ ನಂಬರ್‌ 63/ 2022 ಹಳೇಹುಬ್ಬಳ್ಳಿ ಪ್ರಕರಣ ಹಿಂಪಡೆಯಲಾಗಿದೆ. ಸಾರ್ವಜನಿಕ ಹಿತಾಸಕ್ತಿಯನ್ನು ಗಮನಿಸಿ ಕೇಸ್‌ ವಾಪಸ್‌ ಪಡೆಯಲು ಅವಕಾಶವಿದೆ ಎಂದು ಸಮರ್ಥಿಸಿಕೊಂಡರು.

ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್‌ ಮಾಜಿ ಸದಸ್ಯ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ನಾರಾಯಣಸ್ವಾಮಿ, ಮೈಸೂರು ಎಲೆಕ್ಟ್ರಿಕಲ್‌ ಇಂಡಸ್ಟ್ರೀಸ್‌ ಲಿಮಿಟೆಡ್‌ ಅಧ್ಯಕ್ಷ ಎಸ್‌. ಮನೋಹರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

money

Agriculture: ಕೃಷಿಗೆ ಶೂನ್ಯ ಬಡ್ಡಿ ಸಾಲಕ್ಕೆ ಬೇಕಿದೆ ಮಾರ್ಗೋಪಾಯ

Dinesh-Gundurao

Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್‌

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

money

Agriculture: ಕೃಷಿಗೆ ಶೂನ್ಯ ಬಡ್ಡಿ ಸಾಲಕ್ಕೆ ಬೇಕಿದೆ ಮಾರ್ಗೋಪಾಯ

udupi

udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ

Dinesh-Gundurao

Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್‌

CN-Manjunath

Mysuru: ಕೋವಿಡ್‌ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್‌.ಮಂಜುನಾಥ್‌

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

money

Agriculture: ಕೃಷಿಗೆ ಶೂನ್ಯ ಬಡ್ಡಿ ಸಾಲಕ್ಕೆ ಬೇಕಿದೆ ಮಾರ್ಗೋಪಾಯ

udupi

udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ

Dinesh-Gundurao

Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್‌

CN-Manjunath

Mysuru: ಕೋವಿಡ್‌ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್‌.ಮಂಜುನಾಥ್‌

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.