Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Team Udayavani, Nov 22, 2024, 3:59 PM IST
ಯಾದಗಿರಿ: ಕೆಡಿಪಿ ಸಭೆಯಲ್ಲಿ ಸಚಿವ ಶರಣಬಸಪ್ಪ ದರ್ಶನಾಪುರ ಹಾಗೂ ಶಾಸಕ ಶರಣಗೌಡ ಕಂದಕೂರು ನಡುವೆ ಟಾಕ್ ವಾರ್ ಜೋರಾಗಿಯೇ ನಡೆಯಿತು.
ನಗರದ ಜಿ.ಪಂ ಸಭಾಂಗಣದಲ್ಲಿ ಶುಕ್ರವಾರ (ನ.22) ಜರುಗಿದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಕ್ಷೇತ್ರದ ಅಭಿವೃದ್ಧಿ ವಿಚಾರವಾಗಿ ಶಾಸಕ ಶರಣಗೌಡ ಕಂದಕೂರು ಅವರು ಅಧಿಕಾರಿಗಳಿಗೆ ಪ್ರಶ್ನೆ ಕೇಳುತ್ತಾ, ಸರ್ಕಾರಕ್ಕೆ ನೀವು ಪ್ರಸ್ತಾವನೆಯನ್ನು ಸಲ್ಲಿಸಿರುವುದು ಕಾಗದ ರೂಪದಲ್ಲಿದೆ, ಪ್ರಸ್ತಾವನೆ ಎಲ್ಲಿಗೆ ಬಂತು ಎಂದು ಶಾಸಕರ ಪ್ರಶ್ನೆಗೆ ಕೆಂಡಾಮಂಡಲಗೊಂಡ ಸಚಿವ ಶರಣಬಸಪ್ಪ ದರ್ಶನಾಪುರ ಅವರು ಯಾವ ವಿಷಯ ಎಲ್ಲಿ ಕೇಳಬೇಕು ಅಲ್ಲಿಯೇ ಕೇಳಬೇಕು ಎಂದು ಕೋಪಗೊಂಡರು.
ಸರ್ಕಾರಕ್ಕೆ ಸಲ್ಲಿಸಿದ ಪ್ರಸ್ತಾವನೆಯನ್ನು ಸಂಪುಟದಲ್ಲಿ ಸಭೆಯಲ್ಲಿ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಪರಿಹಾರ ಒದಗಿಸುವುದು ಸಚಿವರು-ಶಾಸಕರಾದ ನಮ್ಮ ಕರ್ತವ್ಯವಾಗಿದೆ ಎಂದು ಸಚಿವ ದರ್ಶನಾಪುರ ಕೋಪದಿಂದ ಮಾತನಾಡಿದರು.
ತಕ್ಷಣ ಶಾಸಕ ಕಂದಕೂರು ಅವರು ಅಲ್ಲರಿ ಸಚಿವರೆ ನಾನು ಕೇಳುತ್ತಿರುವುದು ಪ್ರಸ್ತಾವನೆಯನ್ನು ನೀಡುದ್ದೇವೆ, ನಮ್ಮದು ಪ್ರಯತ್ನ ಇದೆ ಆದರೆ ಕೆಲಸ ಎಲ್ಲಿಗೆ ಬಂತು ಎಂದು ಸ್ಪಷ್ಟತೆ ನೀಡುಲು ಹೋದರು. ಆದರೆ ಸಚಿವ ದರ್ಶನಾಪುರ ಅವರು ಕೇಳುವವರಿಗೆ ನಿಮ್ಮ ಪ್ರಶ್ನೆಗಳನ್ನು ಕೇಳಿ ಎಂದರು.
ನಿಮ್ಮ ಪ್ರಸ್ತಾವನೆಯನ್ನು ಆಯಾ ಇಲಾಖೆ ಸಚಿವರೊಂದಿಗೆ ಸದನದಲ್ಲಿ ಚರ್ಚಿಸಿ, ಕೆಡಿಪಿ ಸಭೆಯಲ್ಲಿ ಯಾವ ಇಲಾಖೆಗೆ ಎಷ್ಟು ಅನುದಾನ ಬಂದಿದೆ. ಯಾವ ಕ್ಷೇತ್ರದಲ್ಲಿ ಅಭಿವೃದ್ಧಿ ಆಗಬೇಕು ಆ ವಿಚಾರ ಮಾತ್ರ ಚರ್ಚಿಸಿ ಎಂದು ಸಚಿವ ದರ್ಶನಾಪುರ ಅವರು ಶಾಸಕ ಕಂದಕೂರು ಅವರಿಗೆ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
MUST WATCH
ಹೊಸ ಸೇರ್ಪಡೆ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.