Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ
Team Udayavani, Nov 29, 2024, 1:34 AM IST
ಹಾಸನ: ನಗರದ ಗುಂಡೇಗೌಡನ ಕೊಪ್ಪಲು ನಿವಾಸಿ, ಗಾರೆ ಕೆಲಸ ಮಾಡುವ ಕಾರ್ಮಿಕನೊಬ್ಬನ ಅಂಗಾಂಗಗಳನ್ನು ಅವರ ಕುಟುಂಬದವರು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕ್ಯ ಮೆರೆದಿದ್ದಾರೆ.
ನಗರದ ವಿದ್ಯಾನಗರ ನಿವಾಸಿ, ಜಿ.ಪಂ. ಮಾಜಿ ಸದಸ್ಯ ರಾಮಶೆಟ್ಟಿ ಅವರ ಮಗ ಮಧು (47) ನ. 22ರಂದು ರಾಜಘಟ್ಟದಲ್ಲಿ ಕೆಲಸ ಮಾಡುವಾಗ ಜಾರಿ ಬಿದ್ದು ಮೆದುಳಿಗೆ ಗಂಭೀರ ಪೆಟ್ಟಾಗಿತ್ತು. ಆರೋಗ್ಯ ಸ್ಥಿತಿ ವಿಷಮಿಸಿದ್ದರಿಂದ ಬದುಕುವುದು ಕಷ್ಟ ಎಂದು ಅರಿತ ವೈದ್ಯರು ಕುಟುಂಬಿಕರಿಗೆ ವಿಷಯ ತಿಳಿಸಿದ್ದರು. ಜತೆಗೆ ಆತನ ಅಂಗಾಂಗ ದಾನ ಮಾಡಬಹುದು ಎಂದೂ ಸಲಹೆ ನೀಡಿದ್ದರು.
5 ಅಂಗಗಳ ದಾನ
ನ. 26ರಂದು ಮಧು ಮೃತಪಟ್ಟಿದ್ದು, ಮಗನ ಅಂಗಾಂಗ ದಾನ ಮಾಡುವ ನಿರ್ಧಾರವನ್ನು ರಾಮ ಶೆಟ್ಟಿ ಅವರು ವೈದ್ಯರಿಗೆ ತಿಳಿಸಿದರು. ಅದರಂತೆ ಹೃದಯ, ಕಿಡ್ನಿ, ಕಣ್ಣು, ಲಿವರ್ ಮತ್ತು ಚರ್ಮವನ್ನು ವೈದ್ಯರು ಪಡೆದು ಬೇರೊಬ್ಬರಿಗೆ ಅಳವಡಿಸಿದ್ದಾರೆ.
ನೋವಿನಲ್ಲೂ ತುಸು ಸಮಾಧಾನ
ಬೆಂಕಿಯಲ್ಲಿ ಸುಟ್ಟುಹೋಗಲಿದ್ದ ಅಂಗಾಂಗಗಳನ್ನು ಬೇರೊಬ್ಬರಿಗೆ ದಾನ ಮಾಡಿದ್ದು, ನೋವಿನಲ್ಲೂ ತುಸು ಸಮಾಧಾನ ತರಿಸಿದೆ ಎಂದು ಮಧು ಅವರ ತಂದೆ ರಾಮ ಶೆಟ್ಟಿ ಹೇಳಿ ಗದ್ಗದಿತರಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.