Tamil Nadu ನೀರು ಬಿಡುವ ಮುನ್ನ ಸರ್ವಪಕ್ಷಗಳ ಸಲಹೆ ಕೇಳಬೇಕಿತ್ತು ಎಂದ ವಿಪಕ್ಷ

ಹರಿದ ನೀರು; ಸರಕಾರಕ್ಕೆ ವಿಪಕ್ಷ ತರಾಟೆ

Team Udayavani, Aug 24, 2023, 12:33 AM IST

Tamil Nadu ನೀರು ಬಿಡುವ ಮುನ್ನ ಸರ್ವಪಕ್ಷಗಳ ಸಲಹೆ ಕೇಳಬೇಕಿತ್ತು ಎಂದ ವಿಪಕ್ಷ

ಬೆಂಗಳೂರು: ತಮಿಳುನಾಡಿಗೆ ನೀರು ಬಿಟ್ಟ ಬಳಿಕ ಸರ್ವಪಕ್ಷ ಸಭೆ ಕರೆದಿದ್ದಕ್ಕೆ ವಿಪಕ್ಷಗಳು ಆಕ್ಷೇಪಿಸಿದ್ದು, ನಾಡಿನ ನೆಲ, ಜಲ, ಭಾಷೆ ವಿಚಾರದಲ್ಲಿ ಯಾವುದೇ ರಾಜಕೀಯ ಮಾಡದೆ ಸಹಕರಿಸಲು ನಾವು ತಯಾರಿದ್ದರೂ, ಸಲಹೆ ಪಡೆಯಲು ಸರಕಾರ ಸಿದ್ಧವಿಲ್ಲ ಎಂದು ವಿಪಕ್ಷ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಬೇಸರ ವ್ಯಕ್ತಪಡಿಸಿದರು.

ನಿಗದಿತ ಪ್ರಮಾಣದ ನೀರು ಬಿಟ್ಟಿಲ್ಲವೆಂದು ತಕರಾರು ತೆಗೆದಿರುವ ತಮಿಳುನಾಡು, ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿರುವ ಹಿನ್ನೆಲೆಯಲ್ಲಿ ಬುಧ ವಾರ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆ ಯಲ್ಲಿ ಸರ್ವಪಕ್ಷ ಸಭೆ ಕರೆಯ ಲಾಗಿತ್ತು. ಸಭೆಯಲ್ಲಿ ತಮ್ಮ ಅಭಿಪ್ರಾಯ ಗಳನ್ನು ಮಂಡಿಸಿದ ಬಿಜೆಪಿ ಮತ್ತು ಜೆಡಿಎಸ್‌ ನಾಯಕರು, ಸರಕಾರಕ್ಕೆ ಹಲವು ಸಲಹೆಗಳನ್ನು ಕೊಟ್ಟರಲ್ಲದೆ, ಶುಕ್ರವಾರ ಸುಪ್ರೀಂ ಕೋರ್ಟ್‌ನಲ್ಲಿ ರಾಜ್ಯದ ವಸ್ತುಸ್ಥಿತಿಯನ್ನು ಮನದಟ್ಟು ಮಾಡಿಸುವಂತೆ ಒತ್ತಿ ಹೇಳಿದರು.

ಮೊದಲ ಹಂತದಲ್ಲೇ ನೀವು
ಎಡವಿದ್ದೀರಿ; ಎಚ್ಚೆತ್ತುಕೊಳ್ಳಿ
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ರಾಜ್ಯ ಸರಕಾರ ಸುಪ್ರೀಂಕೋರ್ಟ್‌ನಲ್ಲಿ ಮಧ್ಯಾಂತರ ಅರ್ಜಿ ಸಲ್ಲಿಸದೆ, ರಾಜ್ಯದ ರೈತರಿಗೆ ನೀರು ಬಿಡದೇ ತಮಿಳುನಾಡಿಗೆ ಬಿಟ್ಟಿರುವುದು ಸರಿಯಲ್ಲ. ನಮ್ಮ ಆಕ್ಷೇಪವನ್ನು ಸರಕಾರ ಒಪ್ಪಲು ಸಿದ್ಧವಿಲ್ಲ. ನೆಲ, ಜಲ ವಿಚಾರದಲ್ಲಿ ನಮ್ಮ ರಾಜ್ಯದ ಹಿತರಕ್ಷಣೆ ಮಾಡುವುದರಲ್ಲಿ ನಾವು ಬೆಂಬಲ ಕೊಡುತ್ತೇವೆ. ಆದರೆ, ನೀವು ಮೊದಲ ಹಂತದಲ್ಲಿಯೇ ಎಡವಿದ್ದೀರಿ. ಸಿಡಬ್ಲ್ಯುಎಂಎನಲ್ಲಿ ಸರಿಯಾಗಿ ವಾದ ಮಾಡುವುದರಲ್ಲಿ ಮತ್ತು ಸುಪ್ರೀಂ ಕೋರ್ಟ್‌ಗೆ ಹೋಗದೆ ಇರುವುದರಲ್ಲಿ ಎಡವಿದ್ದೀರಿ. ತಮಿಳುನಾಡಿಗೆ 10 ಸಾವಿರ ಕ್ಯುಸೆಕ್‌ ನೀರು ಬಿಡುವ ಪರಿಸ್ಥಿತಿಯಲ್ಲಿಲ್ಲ. ನಮ್ಮ ರೈತರಿಗೆ ನೀರು ಬಿಡದೆ ತಮಿಳುನಾಡಿಗೆ ನೀರು ಬಿಡುವ ಪರಿಸ್ಥಿತಿ ಒದಗಿಸಿಕೊಂಡಿರುವುದು ಸರಿಯಲ್ಲ. ಸುಪ್ರೀಂಕೋರ್ಟ್‌ನಲ್ಲಿ ಇದರ ಬಗ್ಗೆ ಮನವರಿಕೆ ಮಾಡಿಕೊಟ್ಟು ನೀರು ಬಿಡದಂತೆ ನೋಡಿಕೊಳ್ಳುವುದು ಬಹಳ ಮುಖ್ಯ. ಎರಡು ತಿಂಗಳ ಅನಂತರ ಬೆಂಗಳೂರಿಗೂ ಸಂಕಷ್ಟವಾಗುತ್ತದೆ. ಇದನ್ನು ಸುಪ್ರೀಂ ಕೋರ್ಟ್‌ಗೆ ಮನವರಿಕೆ ಮಾಡಿಕೊಡಬೇಕು. ಮಹದಾಯಿ ವಿಚಾರದಲ್ಲಿ ಮೊದಲು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿ, ಅನಂತರ ಸರ್ವಪಕ್ಷ ನಿಯೋಗ ತೆಗೆದುಕೊಂಡು ಹೋಗುವ ಬಗ್ಗೆ ಆಲೋಚಿಸಿ ಎಂದು ಸಲಹೆ ನೀಡಿದರು.

ನಾಡಿನ ವಿಚಾರದಲ್ಲಿ ಮೌನ ಇಲ್ಲ
ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಮಾತನಾಡಿ, ನೆಲ, ಜಲ, ಭಾಷೆ ರಕ್ಷಣೆ ಹಾಗೂ ನಮ್ಮ ನೀರಿನ ಹಕ್ಕು, ರೈತರ ಪ್ರಶ್ನೆ ಬಂದಾಗ ವಿಪಕ್ಷಗಳು ಮಾತನಾಡದೆ ಮೌನವಾಗಿರಲು ಸಾಧ್ಯವಿಲ್ಲ. ಇಂತಹ ಸೂಕ್ಷ್ಮ ವಿಚಾರಗಳಲ್ಲಿ ಸರಕಾರವನ್ನು ಪ್ರಶ್ನಿಸಿದರೆ ಅದನ್ನೇ ರಾಜಕೀಯ ಎಂದು ಭಾವಿಸುವುದು ತಪ್ಪು. ನೀರು ಹರಿಸುವ ಮೊದಲೇ ಸರ್ವಪಕ್ಷ ಸಭೆ ಕರೆದಿದ್ದರೆ ಅದಕ್ಕೊಂದು ಅರ್ಥ ಇರುತ್ತಿತ್ತು. ಈಗ ನೀವು ತಮಿಳುನಾಡಿಗೆ ನೀರು ಹರಿಸುತ್ತಿದ್ದೀರಿ. ರೈತರು ಪ್ರತಿಭಟನೆ ಮಾಡುತ್ತಿ¨ªಾರೆ. ಅದಕ್ಕೆ ಈಗ ಏನು ಸಮಜಾಯಿಷಿ ನೀಡುತ್ತೀರಿ ಎಂದು ಪ್ರಶ್ನಿಸಿದರು.

ಮಹದಾಯಿ ಹೋರಾಟಗಾರರಿಂದ ಸಿಎಂ ಭೇಟಿ
ಸರ್ವಪಕ್ಷ ಸಭೆ ಮುಗಿಸಿ ಹೊರಬಂದ ಸಿಎಂ ಸಿದ್ದರಾಮಯ್ಯ ಅವರನ್ನು ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಲಿಫ್ಟ್ ಬಳಿ ಮುತ್ತಿಕೊಂಡ ಮಹದಾಯಿ ಹೋರಾಟಗಾರರು, ತಮಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿದರು. ರೈತ ಸಂಘಟನೆಗಳಿಂದ ಮನವಿ ಪತ್ರ ಸ್ವೀಕರಿಸಿದ ಸಿಎಂ, ಕೇಂದ್ರಕ್ಕೆ ಸರ್ವಪಕ್ಷಗಳ ನಿಯೋಗ ಹೋಗಿ ಮನವಿ ಮಾಡುವ ಭರವಸೆ ನೀಡಿದರು.

ನೀರು ಬೇಕಾದರೆ ರೈತರೇ ನ್ಯಾಯಾಲಯಕ್ಕೆ ಹೋಗಲಿ ಎನ್ನುವ ಜಲ ಸಂಪನ್ಮೂಲ ಸಚಿವರ ಹೇಳಿಕೆ ಸರಿ ಅಲ್ಲ. ರೈತರೇ ನ್ಯಾಯಾಲಯಕ್ಕೆ ಹೋಗುವುದಾದರೆ ಸರಕಾರ ಏಕೆ ಬೇಕು? ಇಷ್ಟೆÇÉಾ ವ್ಯವಸ್ಥೆ ಅಗತ್ಯ ಏನಿದೆ? ಈ ಬಗ್ಗೆ ತಪ್ಪು ತಿಳಿಯುವ ಅಗತ್ಯ ಇಲ್ಲ. ಪ್ರತಿಪಕ್ಷಗಳನ್ನು ರಾಜಕೀಯ ಮಾಡಬೇಡಿ ಎಂದು ಹೇಳುತ್ತೀರಿ, ಆದರೆ ಇಂಥ ಸೂಕ್ಷ¾ ವಿಷಯಗಳಲ್ಲಿ ನಿಮ್ಮ ಜವಾಬ್ದಾರಿ ಏನಿದೆ?
– ಎಚ್‌.ಡಿ. ಕುಮಾರಸ್ವಾಮಿ, ಮಾಜಿ ಸಿಎಂ

ಟಾಪ್ ನ್ಯೂಸ್

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

School bag

School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್‌ ಆಧಾರಿತ ಹಾಜರಾತಿ?

KUNDAPURA-BOA

Kundapura: ಮುಳುಗುತ್ತಿದ್ದ ಬೋಟ್‌ ರಕ್ಷಣೆ: 6 ಮೀನುಗಾರರು ಪಾರು

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

1-rrttt

Yakshagana;ಕಲೆ ಬದುಕಿನ ಸಂಪಾದನೆಗಲ್ಲ, ನಮ್ಮ ಸಂತೋಷಕ್ಕೆ:ಸಂಜೀವ ಸುವರ್ಣ

tirupati

Tirupati; ಶೀಘ್ರ ಕಲಬೆರಕೆ ಪತ್ತೆ ಯಂತ್ರ ಅಳವಡಿಸಲು ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

School bag

School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್‌ ಆಧಾರಿತ ಹಾಜರಾತಿ?

KUNDAPURA-BOA

Kundapura: ಮುಳುಗುತ್ತಿದ್ದ ಬೋಟ್‌ ರಕ್ಷಣೆ: 6 ಮೀನುಗಾರರು ಪಾರು

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

School bag

School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್‌ ಆಧಾರಿತ ಹಾಜರಾತಿ?

KUNDAPURA-BOA

Kundapura: ಮುಳುಗುತ್ತಿದ್ದ ಬೋಟ್‌ ರಕ್ಷಣೆ: 6 ಮೀನುಗಾರರು ಪಾರು

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.