ಕೇಂದ್ರದ ವಿರುದ್ಧ ಆಶಾ ಕಾರ್ಯಕರ್ತರ ಆಕ್ರೋಶ
ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಅಗತ್ಯ ವಸ್ತುಗಳ ಬೆಲೆಗಳನ್ನು ನಿಯಂತ್ರಿಸಬೇಕು.
Team Udayavani, Mar 30, 2022, 6:00 PM IST
ಗದಗ: ಕೇಂದ್ರ ಸರಕಾರದ ಕಾರ್ಮಿಕ ಮತ್ತು ಜನ ವಿರೋಧಿ ನೀತಿ ಖಂಡಿಸಿ ಕಾರ್ಮಿಕರ ಸಂಘಟನೆಗಳ ಜಂಟಿ ಸಮಿತಿ ಜೆಸಿಟಿಯು ನೇತೃತ್ವದಲ್ಲಿ ನಗರದಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಯಿತು. ನಗರದ ಮುನ್ಸಿಪಲ್ ಆವರಣದಿಂದ ಆರಂಭಗೊಂಡ ಪ್ರತಿಭಟನಾ ರ್ಯಾಲಿಯಲ್ಲಿ ನೂರಾರು ಆಶಾ ಕಾರ್ಯಕರ್ತರು, ಅಂಗನವಾಡಿ ನೌಕರರು ಭಾಗವಹಿಸಿದ್ದರು. ಗಾಂಧಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಕೆಲಕಾಲ ರಸ್ತೆ ತಡೆ ನಡೆಸಿದರು. ನಂತರ ಮಹೇಂದ್ರಕರ ಸರ್ಕಲ್ ಹಾಗೂ ಮುಳಗುಂದ ನಾಕಾ ಮಾರ್ಗವಾಗಿ ಜಿಲ್ಲಾ ಧಿಕಾರಿಗಳ ಕಚೇರಿ ವರೆಗೆ ಪ್ರತಿಭಟನೆ ನಡೆಸಿ, ಜಿಲ್ಲಾ ಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಈ ವೇಳೆ ಜಿಲ್ಲಾ ಕಾರ್ಮಿಕ ಮುಖಂಡ ಮಾರುತಿ ಚಿಟಗಿ ಮಾತನಾಡಿ, ಇಂದಿನ ಮುಷ್ಕರ ಯಶಸ್ವಿಯಾಗಿದ್ದು, ದೇಶದ ಜನತೆ ಕೇಂದ್ರದ ನೀತಿಗಳಿಂದ ಬೇಸತ್ತಿದ್ದಾರೆ. ತಕ್ಷಣವೇ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಅಗತ್ಯ ವಸ್ತುಗಳ ಬೆಲೆಗಳನ್ನು ನಿಯಂತ್ರಿಸಬೇಕು. ಇಂಧನಗಳ ಮೇಲೆ ಅಬಕಾರಿ ಸುಂಕ ಕಡಿಮೆ ಮಾಡಬೇಕು. ಆದಾಯ ತೆರಿಗೆ ವ್ಯಾಪ್ತಿಗೆ ಒಳಪಡದ ಪ್ರತಿ ಕುಟುಂಬಕ್ಕೂ ಮಾಸಿಕ 10 ಸಾವಿರ ರೂ. ನೇರ ನಗದು ವರ್ಗಾವಣೆ ಮಾಡಬೇಕೆಂದು ಆಗ್ರಹಿಸಿದರು.
ಸಿಐಟಿಯು ಜಿಲ್ಲಾಧ್ಯಕ್ಷ ಮಹೇಶ ಹಿರೇಮಠ ಮಾತನಾಡಿ, ಪ್ರತಿ ವ್ಯಕ್ತಿಗೆ ತಲಾ 10 ಕೆಜಿ ಆಹಾರ ಧಾನ್ಯಗಳನ್ನು ನೀಡಬೇಕು. ಕಾರ್ಪೊರೇಟ್, ಬಂಡವಾಳ ಪರ ರೂಪಿಸಿರುವ 4 ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಬೇಕು. ವಿದ್ಯುತ್ ತಿದ್ದುಪಡಿ ಮಸೂದೆ ವಾಪಸ್ ಪಡೆಯಬೇಕು.
ಬೆಂಬಲ ಬೆಲೆ ಕಾಯ್ದೆ ರೂಪಿಸಬೇಕು. ಖಾಸಗೀಕರಣ ನಿಲ್ಲಿಸಬೇಕು. ಹಮಾಲಿ ಕಾರ್ಮಿಕರು, ಬೀದಿಬದಿ ವ್ಯಾಪಾರಿಗಳು ಸೇರಿದಂತೆ ಇತರೆ ವಸತಿ ರಹಿತ ಕಾರ್ಮಿಕರಿಗೆ ಉಚಿತ ವಸತಿ ಯೋಜನೆ ಜಾರಿ, ಅಂಗನವಾಡಿ, ಆಶಾ, ಬಿಸಿಯೂಟ ಮತ್ತು ಇತರೆ ಸ್ಕೀಂ ನೌಕರರಿಗೆ ಶಾಸನಬದ್ಧ ಕನಿಷ್ಟ ವೇತನ ಮತ್ತು ಸಾಮಾಜಿಕ ಭದ್ರತೆ ಜಾರಿ ಮಾಡಬೇಕೆಂದು ಆಗ್ರಹಿಸಿದರು.
ಸಿಪಿಐ ಮುಖಂಡ ಎಂ.ಎಸ್.ಹಡಪದ ಮಾತನಾಡಿ, ಕೋವಿಡ್ ಎದುರಿಸಲು ಕೆಲಸ ಮಾಡುತ್ತಿರುವ ಮುಂಚೂಣಿ ಕಾರ್ಮಿಕರಿಗೆ ಸೂಕ್ತ ರಕ್ಷಣೆ ಮತ್ತು ವಿಮಾ ಸೌಲಭ್ಯ ಒದಗಿಸಬೇಕು. ಅಲ್ಲದೇ, ಮತ್ತಿತರ ಬೇಡಿಕೆಗಳನ್ನು ಈಡೇರಿಸಬೇಕೆಂದು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳಿಗೆ ಮನವಿ ಮಾಡಿದರು. ವಿವಿಧ ಕಾರ್ಮಿಕ ಸಂಘಟನೆಗಳ ಪ್ರಮುಖರಾದ ಎಂ.ಐ. ನವಲೂರ, ಯೇಸು ಜಾನಶೌರಿ, ಶಾಂತಣ್ಣ ಮುಳವಾಡ, ಬಾಲು ರಾಠೊಡ, ಪೀರು ರಾಠೊಡ, ಜಿ.ಎಸ್.ತಳವಾರ, ಎಫ್.ಎಸ್. ಸಿಂದಗಿ, ಹನಮೇಶ, ಮೆಹಬೂಬ ಹವಾಲ್ದಾರ, ಪರಶುರಾಮ ಲಕ್ಕುಂಡಿ, ಯಶೋಧಾ ಬೆಟಗೇರಿ, ವೀರನಗೌಡ ಪಾಟೀಲ, ಪುಷ್ಪಾ ಚವ್ಹಾಣ, ದುಂಡಮ್ಮ ಬಳಿಗಾರ, ಸಾವಿತ್ರಿ ಸಬನೀಸ್, ರುದ್ರಗೌಡ ಸಂಕನಗೌಡ್ರ, ರುದ್ರಪ್ಪ ಕಂದಗಲ್ಲ, ಈಶ್ವರ ಲಕ್ಷೆ ¾àಶ್ವರ, ಮುತ್ತಣ್ಣ ಚಲವಾದಿ, ಅಂದಪ್ಪ ಕರಿ, ಯಮುನಾ ಗೋಟೂರ, ಬಸವರಾಜ ಮಂತೂರು ಸೇರಿದಂತೆ ನೂರಾರು ಮಹಿಳಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್ಒ ವಿರುದ್ಧ ಕ್ರಮಕ್ಕೆ ಒತ್ತಾಯ
Sullia: ಕನಕಮಜಲು; ಅಂಗಡಿ, ಹೊಟೇಲ್ನಿಂದ ಕಳವು
KFD Vaccine: ಮುಂಬರುವ ನವೆಂಬರ್ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.