ಕಾಲುವೆಗಳಿಗೆ ಹರಿಯುತ್ತಿದೆ ಶಾಸ್ತ್ರಿ ಜಲಾಶಯದ ನೀರು

Team Udayavani, Apr 24, 2022, 5:24 PM IST

20river

ಆಲಮಟ್ಟಿ: ಬೇಸಿಗೆಯ ಪ್ರಖರ ಬಿಸಿಲಿನ ತಾಪ ತಾಳದೇ ಜನಜಾನುವಾರುಗಳು ಕುಡಿಯುವ ನೀರಿಗಾಗಿ ಕಾಲುವೆಗಳ ಮೂಲಕ ಕೆರೆ ತುಂಬಿಸಲು ಕ್ರಮ ಕೈಗೊಂಡಿರುವುದು ಸ್ವಾಗತಾರ್ಹ. ಇದು ಅಖಂಡ ಕರ್ನಾಟಕ ರೈತ ಸಂಘ ನಡೆಸಿದ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಹೇಳಿದರು.

ಶನಿವಾರ ಆಲಮಟ್ಟಿ ಎಡದಂಡೆ ಶಾಖಾ ಕಾಲುವೆ ಮೂಲಕ ಕೆರೆ ತುಂಬಿಸಲು ಕೃಷ್ಣಾ ಭಾಗ್ಯ ಜಲ ನಿಗಮದ ಅಧಿಕಾರಿಗಳು ಚಾಲನೆ ನೀಡಿದ ನಂತರ ಮುಖ್ಯ ಸ್ಥಾವರದಲ್ಲಿ ವಿವಿಧ ರೈತ ಮುಖಂಡರುಗಳೊಂದಿಗೆ ಆಗಮಿಸಿ ಅವರು ಮಾತನಾಡಿದರು.

ಬೇಸಿಗೆಯಲ್ಲಿ ಜನ ಜಾನುವಾರುಗಳು ಕುಡಿಯುವ ನೀರಿಗಾಗಿ ಪರಿತಪಿಸದಂತೆ ಕಾಲುವೆಗಳ ಮೂಲಕ ಕೆರೆ ತುಂಬಿಸುವಂತೆ ಆಗ್ರಹಿಸಿ 5 ದಿನಗಳವರೆಗೆ ಅಹೋರಾತ್ರಿ ಧರಣಿ ಮತ್ತು 3 ದಿನಗಳ ಕಾಲ ಆಮರಣ ಉಪವಾಸ ಕೈಗೊಳ್ಳಲಾಗಿತ್ತು. ಇದರ ಪರಿಣಾಮ ಶಾಸ್ತ್ರಿ ಜಲಾಶಯ ವ್ಯಾಪ್ತಿಯ ಕೆರೆಗಳನ್ನು ತುಂಬಿಸಲು ಕಾಲುವೆಗಳ ಮೂಲಕ ಕೆರೆಗೆ ನೀರು ಹರಿಸಿರುವುದು ಅಖಂಡ ಕರ್ನಾಟಕ ರೈತ ಸಂಘಕ್ಕೆ ಸಂದ ಜಯ ಎಂದರು.

ಆಮರಣ ಉಪಾವಸ ಕೈಗೊಂಡಿದ್ದ ವೇಳೆ ಮಾಜಿ ಸಚಿವ ಎಸ್‌.ಕೆ.ಬೆಳ್ಳುಬ್ಬಿ ಮತ್ತು ಕೃಷ್ಣಾ ಕಾಡಾ ಮಾಜಿ ಅಧ್ಯಕ್ಷ ಬಸವರಾಜ ಕುಂಬಾರ ಅವರು ಧರಣಿ ಸ್ಥಳಕ್ಕೆ ಆಗಮಿಸಿ ಅಧಿಕಾರಿಗಳ ಪರವಾಗಿ ಭರವಸೆ ನೀಡಿ ಸೋಮವಾರದೊಳಗೆ ಕಾಲುವೆಗಳ ಮೂಲಕ ಕೆರೆಗಳನ್ನು ತುಂಬಿಸಲು ನೀರು ಬಿಡದಿದ್ದರೆ ತಾವೂ ಕೂಡ ಹೋರಾಟ ಮಾಡುವುದಾಗಿ ಭರವಸೆ ನೀಡಿದ್ದರು. ಭರವಸೆಯಂತೆ ಕೆಬಿಜೆನ್ನೆಲ್‌ ಮುಖ್ಯ ಅಭಿಯಂತರ, ಜಿಲ್ಲಾಧಿಕಾರಿಗಳು ಹಾಗೂ ಪ್ರಾದೇಶಿಕ ಆಯುಕ್ತರು ಜನತೆಯ ನೀರಿನ ದಾಹ ನೀಗಿಸಲು ರೈತರ ಪ್ರತಿನಿಧಿಯಾಗಿ ಹೋರಾಟ ಮಾಡಿದ ನಮ್ಮ ಸಂಘಟನೆಯ ಹೋರಾಟಕ್ಕೆ ಆದ್ಯತೆ ನೀಡಿ ಸಕಾಲಕ್ಕೆ ನೀರು ಹರಿಸಿರುವುದಕ್ಕೆ ಸರ್ಕಾರಕ್ಕೆ ಅಭಿನಂದನೆಗಳನ್ನು ಹೇಳಿದರು.

ಇದಕ್ಕೂ ಮೊದಲು ಮಾತನಾಡಿದ ಕೃಷ್ಣಾ ಕಾಡಾ ಮಾಜಿ ಅಧ್ಯಕ್ಷ ಬಸವರಾಜ ಕುಂಬಾರ, ಜನತೆಯ ಧ್ವನಿಯನ್ನು ಅರ್ಥೈಸಿಕೊಂಡ ಸರ್ಕಾರ ಬೇಸಿಗೆಯಲ್ಲಿ ಖಾಲಿಯಾಗುತ್ತಿರುವ ಕೆರೆಗಳನ್ನು ತುಂಬಿಸಲು ಆರಂಭ ಮಾಡಿದ್ದು ಸಂತಸದಾಯಕವಾಗಿದೆ ಎಂದರು.

ಸಂತೋಷ ಬಿರಾದಾರ, ಬಾಲಪ್ಪಗೌಡ ಲಿಂಗದಳ್ಳಿ, ಸಂಗನಗೌಡ ಕೊಳೂರ, ಬಸನಗೌಡ ಬಿರಾದಾರ, ಸಂತೋಷ ಕೊಣ್ಣೂರ, ಯಲ್ಲಾಲಿಂಗ ಹೂಗಾರ, ದೇವಪ್ಪ ವಾಲಿಕಾರ ಇದ್ದರು.

ಟಾಪ್ ನ್ಯೂಸ್

Mang-Airport

Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್‌ ವಾರಸುದಾರರಿಗೆ ಹಸ್ತಾಂತರ

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mang-Airport

Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್‌ ವಾರಸುದಾರರಿಗೆ ಹಸ್ತಾಂತರ

1-tanker

Mangaluru; ಟ್ಯಾಂಕರ್‌ ವ್ಯವಹಾರ: ನಕಲಿ ದಾಖಲೆ ಸೃಷ್ಟಿಸಿ ವಂಚನೆ

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mang-Airport

Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್‌ ವಾರಸುದಾರರಿಗೆ ಹಸ್ತಾಂತರ

1-tanker

Mangaluru; ಟ್ಯಾಂಕರ್‌ ವ್ಯವಹಾರ: ನಕಲಿ ದಾಖಲೆ ಸೃಷ್ಟಿಸಿ ವಂಚನೆ

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.