ನಗರದಲ್ಲಿ ಇಂದು, ನಾಳೆ ನೀರಿಲ್ಲ
ರೇಷನಿಂಗ್ ಮತ್ತೆ ಜಾರಿ
Team Udayavani, May 1, 2019, 6:28 AM IST
ಮಹಾನಗರ: ಮಂಗಳೂರಿಗೆ ನೀರುಣಿಸುವ ತುಂಬೆ ಡ್ಯಾಂನಲ್ಲಿ ದಿನದಿಂದ ದಿನಕ್ಕೆ ನೀರಿನ ಪ್ರಮಾಣ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ರೇಷನಿಂಗ್ ವ್ಯವಸ್ಥೆ ಮತ್ತೆ ಜಾರಿಗೆ ತರಲು ದ.ಕ. ಜಿಲ್ಲಾಡಳಿತ ತೀರ್ಮಾನಿಸಿದ್ದು, ಇದರಂತೆ ಬುಧವಾರ ಹಾಗೂ ಗುರುವಾರ (ಮೇ 1ರ ಬೆಳಗ್ಗೆ 6ರಿಂದ ಮೇ 2 ಪೂರ್ಣ )
ಮಂಗಳೂರಿನಲ್ಲಿ ನೀರು ಸರಬರಾಜು ಸ್ಥಗಿತವಾಗಲಿದೆ.
ಈ ಮೂಲಕ ಪಾಲಿಕೆ ವ್ಯಾಪ್ತಿಯಲ್ಲಿ ತಾತ್ಕಾಲಿಕವಾಗಿ ಸœಗಿತಗೊಂಡಿದ್ದ ನೀರು ರೇಷನಿಂಗ್ ಮೇ 1ರಿಂದ ಮತ್ತೆ ಜಾರಿಯಾಗಲಿದೆ. ತುಂಬೆ ವೆಂಟೆಡ್ ಡ್ಯಾಂನಲ್ಲಿ ನೀರು ಸಂಗ್ರಹದಲ್ಲಿ ಇಳಿಮುಖವಾಗುತ್ತಿದ್ದು ಹಾಲಿ ಸಂಗ್ರಹ ಇರುವ ನೀರನ್ನು ಜೂನ್ ಮೊದಲನೇ ವಾರದವರೆಗೆ ಸಮರ್ಪಕವಾಗಿ ವಿತರಣೆ ಮಾಡಬೇಕಾಗಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ 4 ದಿನಗಳ ಒಟ್ಟು 96 ಗಂಟೆಗಳ ಅವಧಿಯಲ್ಲಿ ಎಲ್ಲ ವಾರ್ಡ್‌ಗಳಿಗೆ ಹಾಲಿ ಪೂರೈಕೆ ಮಾಡುತ್ತಿರುವ ರೀತಿಯಲ್ಲಿ ನೀರನ್ನು ಸರಬರಾಜು ಮಾಡಲಾಗುವುದು.
ತದನಂತರ 48 ಗಂಟೆಗಳ ಅವಧಿಯಲ್ಲಿ ಸಂಪೂರ್ಣ ಸ್ಥಗಿತಗೊಳಿಸಲಾಗುವುದು ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ತುಂಬೆ ವೆಂಟೆಡ್ ಡ್ಯಾಮ್‌ನಲ್ಲಿ ನೀರಿನ ಮಟ್ಟ ಕಡಿಮೆಗೊಂಡ ಹಿನ್ನೆಲೆಯಲ್ಲಿ ಎ. 11ರಿಂದಲೇ ನೀರಿನ ರೇಷನಿಂಗ್ ನಡೆಸಲು ಜಿಲ್ಲಾಡಳಿತ/ ಮನಪಾ ನಿರ್ಧರಿಸಿತ್ತು. ಬಳಿಕ ನಿರ್ಧಾರ ಬದಲಿಸಿ ಚುನಾವಣೆ ಮುಗಿದ ಬಳಿಕ ರೇಷನಿಂಗ್‌ಗೆ ಉದ್ದೇಶಿಸಿದ ಹಿನ್ನೆಲೆಯಲ್ಲಿ ಎ. 18ರ ಸಂಜೆ 6 ಗಂಟೆಯಿಂದ ರೇಷನಿಂಗ್ ಆರಂಭಿಸಿತ್ತು. ಹೀಗಾಗಿ ಎ. 18ರಿಂದ 20ರ ಬೆಳಗ್ಗೆಯವರೆಗೆ ನೀರಿರಲಿಲ್ಲ. 20ರಂದು ಬೆಳಗ್ಗಿನಿಂದ ಮತ್ತೆ ನೀರು ಸರಬರಾಜು ಆರಂಭಿಸಿ ಎ. 24ರಂದು ಬೆಳಗ್ಗೆಯವರೆಗೆ ನೀರು ಹರಿಸಲು ಉದ್ದೇಶಿಸಿ ಎ. 24- ಎ. 25ಕ್ಕೆ ರೇಷನಿಂಗ್ ನಡೆಸಲು ನಿರ್ಧರಿಸಲಾಗಿತ್ತು. ಆದರೆ, ತುಂಬೆ ಡ್ಯಾಮ್‌ನಲ್ಲಿ ಆಗ ನೀರಿನ ಪ್ರಮಾಣದಲ್ಲಿ ಅಲ್ಪ ಪ್ರಮಾಣದಲ್ಲಿ ಏರಿಕೆ ಕಂಡುಬಂದ ಹಿನ್ನೆಲೆಯಲ್ಲಿ ಕಳೆದ ವಾರದ ರೇಷನಿಂಗ್ ಕೈಬಿಡಲಾಗಿತ್ತು.
ಈ ಮಧ್ಯೆ ಸಚಿವ ಖಾದರ್ ಎ. 28ರಂದು ತುಂಬೆ ಡ್ಯಾಂಗೆ ಭೇಟಿ ನೀಡಿ, ಮಳೆಯ ಸಾಧ್ಯತೆಯನ್ನು ಗಮನದಲ್ಲಿಟ್ಟು ಎ. 30ರವರೆಗಿನ ಪರಿಸ್ಥಿತಿ ಪರಿಶೀಲಿಸಿ ಮುಂದಿನ ಕ್ರಮದ ಬಗ್ಗೆ ಉಲ್ಲೇಖೀಸಿದ್ದರು. ಈಗ ಮಳೆಯ ಸಾಧ್ಯತೆ ಇಲ್ಲದಿರುವ ಹಿನ್ನೆಲೆಯಲ್ಲಿ ರೇಷನಿಂಗ್ ಮುಂದುವರಿಸುವ ಅನಿವಾರ್ಯತೆಯನ್ನು ಜಿಲ್ಲಾಡಳಿತ ಗಂಭೀರವಾಗಿ ಪರಗಣಿಸಿದೆ. ಇದರಂತೆ ಮೇ ತಿಂಗಳಿನಲ್ಲಿ ರೇಷನಿಂಗ್ ಮಾಡುವ ದಿನಾಂಕವನ್ನು ಪ್ರಕಟಿಸಿದೆ.
ಇಲ್ಲಿದೆ ರೇಷನಿಂಗ್ ಟೈಮಿಂಗ್
ಮಂಗಳೂರು ಪಾಲಿಕೆಯು ತಿಳಿಸಿರುವ ಪ್ರಕಾರ, ಮೇ 1ರ ಬೆಳಗ್ಗೆ 6 ಗಂಟೆಯಿಂದ ಮೇ 3ರ ಬೆಳಗ್ಗೆ 6 ಗಂಟೆಯವರೆಗೆ (48 ತಾಸುಗಳ ಅವಧಿ) ನೀರು ಸರಬರಾಜು ಸ್ಥಗಿತಗೊಳಿಸಲಾಗುತ್ತದೆ. ಬಳಿಕ ಮೇ 3ರ ಬೆಳಗ್ಗೆ 6 ಗಂಟೆಯಿಂದ ಮೇ 7ರ ಬೆಳಗ್ಗೆ 6 ಗಂಟೆಯವರೆಗೆ (96 ಗಂಟೆಗಳ ಕಾಲ) ನೀರು ಸರಬರಾಜು ಮಾಡಲಾಗುವುದು. ಬಳಿಕ ಮೇ 9 ರ ಬೆಳಗ್ಗೆ 6 ಗಂಟೆಯವರೆಗೆ ಪೂರೈಕೆ ಸ್ಥಗಿತಗೊಳಿಸಲಾಗುವುದು. ಮೇ 9 ರ ಬೆಳಗ್ಗೆ 6 ಗಂಟೆಯಿಂದ ಮೇ 13ರ ಬೆಳಗ್ಗೆ 6 ಗಂಟೆಯವರೆಗೆ 96 ತಾಸುಗಳ ಕಾಲ ಸರಬರಾಜು ಇರುತ್ತದೆ. ಬಳಿಕ ಮೇ15 ರ ಬೆಳಗ್ಗೆ 6 ಗಂಟೆಯವರೆಗೆ ಸ್ಥಗಿತಗೊಳ್ಳುತ್ತದೆ. ಮೇ 15 ರಂದು 6 ಗಂಟೆಯಿಂದ ಪ್ರಾರಂಭವಾಗುವ ಪೂರೈಕೆ ಮೇ19 ರ ಬೆಳಗ್ಗೆ 6 ಗಂಟೆಯವರೆಗೆ ಸರಬರಾಜು ಮಾಡಲಾಗುತ್ತದೆ. ಬಳಿಕ ಸ್ಥಗಿತಗೊಳ್ಳಲಿದ್ದು ಮೇ 21ರ ಬೆಳಗ್ಗೆ 6 ಗಂಟೆಗೆ ಪ್ರಾರಂಭಗೊಳ್ಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.