ದ.ಕ. ಜಲಸಂಕಟ: ಇಂದು ಸಭೆ
Team Udayavani, May 20, 2019, 11:03 AM IST
ಮಂಗಳೂರು : ಮಂಗಳೂರು ನಗರ ಸಹಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉದ್ಭವಿಸಿರುವ ನೀರಿನ ಸಮಸ್ಯೆ ಬಗ್ಗೆ ಚರ್ಚಿಸಲು ಜಿಲ್ಲಾಡಳಿತದ ವತಿಯಿಂದ ಮೇ 20ರಂದು ಬೆಳಗ್ಗೆ 10 ಗಂಟೆಗೆ ಡಿಸಿ ಕಚೇರಿಯಲ್ಲಿ ಸಭೆ ಕರೆಯಲಾಗಿದೆ ಎಂದು ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳು ಮತ್ತು ವಿವಿಧ ಇಲಾಖೆ ಗಳ ಅಧಿಕಾರಿಗಳು, ಜನ ಪ್ರತಿನಿಧಿಗಳು ಭಾಗ ವಹಿಸುವರು. ನೀರಿನ ಸಮಸ್ಯೆಯ ಜತೆಗೆ ಸಂಭಾವ್ಯ ಅತಿವೃಷ್ಟಿ, ಅನಾವೃಷ್ಟಿ, ಕಡಲು ಕೊರೆತ ಸಮಸ್ಯೆ ಕುರಿತಾಗಿಯೂ ಚರ್ಚೆ ನಡೆಯಲಿದೆ ಎಂದವರು ರವಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಅಗತ್ಯ ಇರುವಲ್ಲಿಗೆ ಟ್ಯಾಂಕರ್ ನೀರು ಪೂರೈಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ನೀರಿನ ಮೂಲಕ್ಕಾಗಿ ಅಗತ್ಯ ಬಿದ್ದರೆ ಕೊಳವೆ ಬಾವಿ ನಿರ್ಮಿಸಲು ಮತ್ತು ಕೊಳವೆ ಬಾವಿಗಳಿಂದ ನೀರೆತ್ತಲು ಆದ್ಯತೆಯ ನೆಲೆಯಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಲು ಸೂಚಿಸಲಾಗಿದೆ ಎಂದರು.
ತುಂಬೆ ಡ್ಯಾಂ: ಹೂಳೆತ್ತಲು ಟೆಂಡರ್
ತುಂಬೆ ವೆಂಟೆಡ್ ಡ್ಯಾಮ್‌ನಿಂದ ಹೂಳೆತ್ತುವ ಕಾಮಗಾರಿಗೆ 3 ಕೋಟಿ ರೂ. ಮೊತ್ತಕ್ಕೆ ಟೆಂಡರ್ ವಹಿಸ ಲಾಗಿದ್ದು, ನಾಲ್ಕು ದಿನಗಳಲ್ಲಿ ಕೆಲಸ ಆರಂಭವಾಗಲಿದೆ ಎಂದು ಖಾದರ್ ತಿಳಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಹೆಗ್ಗಡೆ ದೂರದೃಷ್ಟಿ ಇರಿಸಿಕೊಂಡು ಕ್ಷೇತ್ರ ಸಂದರ್ಶನವನ್ನು ಮುಂದೂಡುವ ಬಗ್ಗೆ ಭಕ್ತರಿಗೆ ಮನವಿ ಮಾಡಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಖಾದರ್ ಉತ್ತರಿಸಿದರು.
ಬೇಸಗೆ ಮಳೆ ಕೊರತೆ ಸಮಸ್ಯೆಗೆ ಕಾರಣ
ಈ ವರ್ಷ ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಬೇಸಗೆ ಮಳೆ ಬಾರದಿರುವುದು ನೇತ್ರಾವತಿಯಲ್ಲಿ ನೀರು ಬತ್ತಲು ಕಾರಣ ಎಂದು ಸಚಿವರು ಅಭಿಪ್ರಾಯ ಪಟ್ಟರು. ಮಳೆ ಬಾರದಿರಲು ಮತ್ತು ನೀರಿನ ಸಮಸ್ಯೆಗೆ ಎತ್ತಿನಹೊಳೆ ಯೋಜನೆ ಕಾರಣ ಎಂಬ ಆರೋಪದ ಬಗ್ಗೆ ಪ್ರತಿಕ್ರಿಯಿಸಿ, ಈ ಬಗ್ಗೆ ಜಲ ತಜ್ಞರು ಮತ್ತು ಅಧಿಕಾರಿಗಳು ಚರ್ಚೆ ನಡೆಸಬೇಕಾಗುತ್ತದೆ. ಪಶ್ಚಿಮ ವಾಹಿನಿ ಮತ್ತು ಚೆಕ್ ಡ್ಯಾಂ ನಿರ್ಮಾಣ ಕಾಮ ಗಾರಿಗಳು ಟೆಂಡರ್ ಹಂತದಲ್ಲಿವೆ. ಉಪ್ಪು ನೀರು ಶುದ್ಧೀಕರಿಸುವ ಯೋಜನೆ ದುಬಾರಿ ಆಗಿರುವುದರಿಂದ ಸದ್ಯಕ್ಕೆ ಬಾಕಿ ಇರಿಸಲಾಗಿದೆ. ಬರ ಪೀಡಿತ ತಾಲೂಕುಗಳ ಘೋಷಣೆಯಂತೆ ಈಗಾಗಲೇ 5 ಕೋಟಿ ರೂ. ಒದಗಿಸಲಾಗಿದ್ದು, ಹೆಚ್ಚುವರಿ ಅನುದಾನದ ಬಗ್ಗೆ ಚರ್ಚಿಸಿ ವರದಿ ಸಲ್ಲಿಸಲಾಗುವುದು ಎಂದರು.
ತುಂಬೆ ಡ್ಯಾಂನಲ್ಲಿ 7 ಮೀ. ನೀರು ನಿಲ್ಲಿಸಿದರೆ ಮುಳುಗ ಬಹುದಾದ ಪ್ರದೇಶಗಳ ಬಗ್ಗೆ ಚರ್ಚೆ ಆಗಬೇಕಾಗಿದೆ. ಮುಳುಗಡೆ ಪ್ರದೇಶಗಳ ಜನರಿಗೆ ಪರಿಹಾರ ವಿತರಿಸಲು15 ಕೋಟಿ ರೂ. ಬಿಡುಗಡೆ ಆಗಿದೆ ಎಂದು ವಿವರಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಮತ್ತು ಇತರ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan; ಖರ್ಚು ಉಳಿಸಲು 6 ಸೋದರರಿಂದ 6 ಮಂದಿ ಸೋದರಿಯರ ವಿವಾಹ!
Team India; ದ್ರಾವಿಡ್ ಇದ್ದಾಗ ಎಲ್ಲ ಸರಿಯಿತ್ತು: ಹರ್ಭಜನ್
Team India; ಆಯ್ಕೆಗಾರರ ಕೈಯಲ್ಲಿ ರೋಹಿತ್, ವಿರಾಟ್ ಕೊಹ್ಲಿ ಭವಿಷ್ಯ: ಗಾವಸ್ಕರ್
Thalassery: ಸಿಪಿಎಂ ನಾಯಕನ ಹತ್ಯೆ ಪ್ರಕರಣ: ಆರೆಸ್ಸೆಸ್‌ನ 9 ಸದಸ್ಯರಿಗೆ ಜೀವಾವಧಿ ಶಿಕ್ಷೆ
EVM: ಮತಯಂತ್ರ ತಿರುಚಲು ಸಾಧ್ಯವಿಲ್ಲ, ಅವು ಸುರಕ್ಷಿತ: ರಾಜೀವ್‌ಕುಮಾರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Pakistan; ಖರ್ಚು ಉಳಿಸಲು 6 ಸೋದರರಿಂದ 6 ಮಂದಿ ಸೋದರಿಯರ ವಿವಾಹ!
Team India; ದ್ರಾವಿಡ್ ಇದ್ದಾಗ ಎಲ್ಲ ಸರಿಯಿತ್ತು: ಹರ್ಭಜನ್
Team India; ಆಯ್ಕೆಗಾರರ ಕೈಯಲ್ಲಿ ರೋಹಿತ್, ವಿರಾಟ್ ಕೊಹ್ಲಿ ಭವಿಷ್ಯ: ಗಾವಸ್ಕರ್
Thalassery: ಸಿಪಿಎಂ ನಾಯಕನ ಹತ್ಯೆ ಪ್ರಕರಣ: ಆರೆಸ್ಸೆಸ್‌ನ 9 ಸದಸ್ಯರಿಗೆ ಜೀವಾವಧಿ ಶಿಕ್ಷೆ
EVM: ಮತಯಂತ್ರ ತಿರುಚಲು ಸಾಧ್ಯವಿಲ್ಲ, ಅವು ಸುರಕ್ಷಿತ: ರಾಜೀವ್‌ಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.