Udupi: ಜ.1-15 : ರಾಜಾಂಗಣದಲ್ಲಿ ಕೈಮಗ್ಗ ಸೀರೆಗಳ ಪ್ರದರ್ಶನ, ಮಾರಾಟ ಮೇಳ
Team Udayavani, Dec 31, 2024, 7:35 PM IST
ಉಡುಪಿ: ಶ್ರೀ ಕೃಷ್ಣಮಠ ಪರ್ಯಾಯ ಶ್ರೀ ಪುತ್ತಿಗೆ ಮಠದ ಆಶ್ರಯದಲ್ಲಿ ರಾಜಮಾತೆ ಅಹಲ್ಯಾಬಾೖ ಹೋಳ್ಕರ್ ಜನ್ಮತ್ರಿಶತಾಬ್ಧಿ ಆಚರಣೆ ಸಮಿತಿ ಹಾಗೂ ಉಡುಪಿ ಪದ್ಮಶಾಲಿ ನೇಕಾರ ಪ್ರತಿಷ್ಠಾನದ ಸಹಭಾಗಿತ್ವದಲ್ಲಿ ರಾಜಾಂಗಣದಲ್ಲಿ ಜ.1ರಿಂದ 15ರವರೆಗೆ ಕೈಮಗ್ಗ ಸೀರೆಗಳ ಪ್ರದರ್ಶನ ಮತ್ತು ಮಾರಾಟ ಮೇಳ ಹಮ್ಮಿಕೊಳ್ಳಲಾಗಿದೆ.
ಜ.1ರ ಬೆಳಗ್ಗೆ 10ಕ್ಕೆ ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮೇಳ ಉದ್ಘಾಟಿಸಲಿದ್ದಾರೆ. ಶಾಸಕ ಯಶ್ಪಾಲ್ ಸುವರ್ಣ, ಕೆಂಎಸಿ ಮಕ್ಕಳ ತಜ್ಞವೈದ್ಯೆ ಡಾ| ಪುಷ್ಪಾ ಕಿಣಿ ಭಾಗವಹಿಸಲಿದ್ದಾರೆ.
ರಾಜಮಾತೆ ಅಹಲ್ಯಾಬಾಯಿ ಹೋಳ್ಕರ್ ಅವರಿಂದ ಏಳ್ಗೆ ಕಂಡ ಮಾಹೇಶ್ವರಿ ಸೀರೆಗಳು ಈ ಮೇಳದ ವಿಶೇಷ ಆಕರ್ಷಣೆಯಾಗಿದೆ.
ಜತೆಗೆ ಉಡುಪಿ, ಇಳಕಲ್, ಕೋಲ್ಕತ್ತಾ, ವೆಂಕಟಗಿರಿ, ಮಧುಬನಿ, ಬಿಹಾರದ ಕಸೂತಿ, ಕೈ ನೇಯ್ಗೆ, ಸುಜನಿ ಮೊದಲಾದ ಸೀರೆಗಳು, ನಾನಾ ಬಗೆಯ ದಿರಿಸುಗಳು ಪ್ರದರ್ಶನದಲ್ಲಿ ಇರಲಿದೆ ಎಂದು ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.