ಸಂಸ್ಕೃತ ಕಾಲೇಜಿನ 120ರ ಸಂಭ್ರಮದಲ್ಲಿ ಹಳೆ ವಿದ್ಯಾರ್ಥಿಗಳು ಒಟ್ಟಾಗಲಿ: ವಿ| ಪ್ರಸನ್ನಾಚಾರ್ಯ
Team Udayavani, Dec 31, 2024, 7:50 PM IST
ಉಡುಪಿ: ಸಂಸ್ಕೃತ ಕಾಲೇಜು 120 ವರ್ಷಗಳ ಇತಿಹಾಸ ಹೊಂದಿದದ್ದು ಕಾಲೇಜಿ ವಾರ್ಷಿಕೋತ್ಸವದೊಂದಿಗೆ ಸಂಸ್ಕೃತೋತ್ಸವ ನಡೆಸಿರುವುದು ಶ್ಲಾಘನೀಯ. ಇಷ್ಟೊಂದು ದೀರ್ಘ ಇತಿಹಾಸದ ಸಂಸ್ಥೆಗಳು ಸಿಗುವುದೇ ಅತ್ಯಂತ ವಿರಳ. ಹೀಗಿರುವಾಗ ದೇಶಕ್ಕೆ ಅನೇಕ ಮಹಾಮಹಿಮ ಯತಿಗಳನ್ನು, ಪಂಡಿತರನ್ನು, ಸಂಸ್ಕೃತ ಅಧ್ಯಾಪಕರನ್ನು ನೀಡಿದ ಈ ಸಂಸ್ಥೆಯ 120ನೇ ವರ್ಷದ ಆಚರಣೆಯನ್ನು ವಿಶಿಷ್ಟವಾಗಿ ಆಚರಿಸಬೇಕು. ಇದಕ್ಕಾಗಿ ಪರ್ಯಾಯ ಶ್ರೀಮಠದ ಎಲ್ಲ ಸಹಕಾರವಿದೆ.
ಸಂಸ್ಥೆಯ ಹಳೆ ವಿದ್ಯಾರ್ಥಿಗಳೂ ಕೈ ಜೋಡಿಸಿ ಕಾರ್ಯಕ್ರಮವನ್ನು ರೂಪಿಸಬೇಕಾಗಿದೆ ಎಂದು ಪರ್ಯಾಯ ಶ್ರೀ ಪುತ್ತಿಗೆ ಮಠದ ಅಂತಾರಾಷ್ಟ್ರೀಯ ಕಾರ್ಯದರ್ಶಿ ವಿ| ಪ್ರಸನ್ನಾಚಾರ್ಯ ಹೇಳಿದರು.
ಸಂಸ್ಕೃತ ಕಾಲೇಜಿನಲ್ಲಿ ಸಂಸ್ಕೃತೋತ್ಸವ ಪ್ರಯುಕ್ತ ಸಂಸ್ಕೃತ ಸ್ಪರ್ಧೆಗಳನ್ನು ಉದ್ಘಾಟಿಸಿ, ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಉತ್ಸಾಹದಿಂದ ಭಾಗವಹಿಸಿ ಸಂಸ್ಕೃತದ ಲಾಭ ಪಡೆದುಕೊಳ್ಳುವಂತಾಗಲಿ ಎಂದು ಶುಭಹಾರೈಸಿದರು.
ಪ್ರಾಂಶುಪಾಲ ಪ್ರೊ| ಸತ್ಯನಾರಾಯಣ ಆಚಾರ್ಯ ಸ್ವಾಗತಿಸಿ ಪ್ರಸ್ತಾವನೆಗೈದರು.ವಿ| ಅನಿಲ ಜೋಷಿ ವಂದಿಸಿ, ಡಾ| ಮಹೇಂದ್ರ ಸೋಮಯಾಜಿ ನಿರೂಪಿಸಿದರು. ವಿದ್ಯಾರ್ಥಿ ಶ್ರೀಕರ ಉಪಾಧ್ಯಾಯ ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.