Vande Bharath: ಪ್ರಾಯೋಗಿಕ ಸಂಚಾರ: ಬೆಂಗಳೂರು-ಹೈದರಾಬಾದ್ ರೈಲಿಗೆ ರವಿವಾರ ಮೋದಿ ಚಾಲನೆ
Team Udayavani, Sep 22, 2023, 12:15 AM IST
ಹೈದರಾಬಾದ್: ಕರ್ನಾಟಕ ರಾಜಧಾನಿ ಬೆಂಗಳೂರು ಮತ್ತು ತೆಲಂಗಾಣ ರಾಜಧಾನಿ ಹೈದರಾಬಾದ್ ನಡುವಿನ ನೂತನ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಸೆ.24ರಂದು ಹಸುರು ನಿಶಾನೆ ಸಿಗಲಿದೆ. ಇದಕ್ಕೆ ಪೂರ್ವಭಾವಿಯಾಗಿ ಗುರುವಾರ ಈ ಮಾರ್ಗದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಯಶಸ್ವಿಯಾಗಿ ಪ್ರಾಯೋಗಿಕ ಸಂಚಾರ ನಡೆಸಿತು.
ಬೆಂಗಳೂರು ಮತ್ತು ಹೈದರಾಬಾದ್ ನಡುವಿನ 610 ಕಿ.ಮೀ. ಮಾರ್ಗವನ್ನು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಕೇವಲ 8 ಗಂಟೆ 30 ನಿಮಿಷಗಳಲ್ಲಿ ಕ್ರಮಿಸಲಿದೆ. ಇದೇ ರವಿವಾರ ನೂತನ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ವರ್ಚುವಲ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ. ಈ ಮೂಲಕ ಕರ್ನಾಟಕಕ್ಕೆ ಮೂರು ವಂದೇ ಭಾರತ್ ರೈಲುಗಳು ಸಿಕ್ಕಿದಂತಾಗಲಿದೆ.
ಎಷ್ಟು ಗಂಟೆಗೆ ಹೊರಡಲಿದೆ?: ಹೈದರಾಬಾದ್‌ನ ಕಾಚಿಗುಡ ರೈಲು ನಿಲ್ದಾಣದಿಂದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಮುಂಜಾನೆ 5.30ಕ್ಕೆ ಹೊರಟು ಮಧ್ಯಾಹ್ನ 2 ಗಂಟೆಗೆ ಯಶವಂತಪುರ ರೈಲು ನಿಲ್ದಾಣ ತಲುಪಲಿದೆ. ಇದೇ ರೀತಿ ಯಶವಂತಪುರ ರೈಲು ನಿಲ್ದಾಣದಿಂದ ಮಧ್ಯಾಹ್ನ 2.45ಕ್ಕೆ ರೈಲು ಹೊರಟು ರಾತ್ರಿ 11.15ಕ್ಕೆ ಕಾಚಿಗುಡ ರೈಲು ನಿಲ್ದಾಣ ತಲುಪಲಿದೆ.
ಎಲ್ಲೆಲ್ಲಿ ನಿಲುಗಡೆ: ಬುಧವಾರ ಹೊರತುಪಡಿಸಿ, ಎಲ್ಲ ದಿನಗಳಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಈ ಮಾರ್ಗದಲ್ಲಿ ಸಂಚರಿಸಲಿದೆ. ಧರ್ಮಾವರಂ, ಡೋನ್, ಅನಂತಪುರ, ಕರ್ನೂಲ್ ನಗರ ಮತ್ತು ಮೆಹಬೂಬನಗರ ರೈಲು ನಿಲ್ದಾಣಗಳಲ್ಲಿ ರೈಲು ನಿಲುಗಡೆ ನೀಡಲಿದೆ.
8 ಗಂಟೆ 30 ನಿಮಿಷಗಳ ಪ್ರಯಾಣ: ಬೆಂಗಳೂರಿನಿಂದ ಕಾಚೆಗುಡಕ್ಕೆ ಪ್ರಸ್ತುತ 20 ರೈಲುಗಳು ಸಂಚರಿಸುತ್ತಿವೆ. ಈ ರೈಲುಗಳ ಸರಾಸರಿ ಪ್ರಯಾಣ ಸಮಯ 12 ಗಂಟೆಗಳು. ಆದರೆ ವಂದೇ ಭಾರತ್ ರೈಲು ಈ ದೂರವನ್ನು ಕೇವಲ 8 ಗಂಟೆ 30 ನಿಮಿಷಗಳಲ್ಲಿ ಕ್ರಮಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.