Vijayapura: ಅರ್ಜುಣಗಿ ಬಳಿ ಭೀಕರ ಅಪಘಾತ, ನಾಲ್ವರು ಸ್ಥಳದಲ್ಲೇ ಸಾವು
Team Udayavani, Apr 13, 2024, 9:30 AM IST
ವಿಜಯಪುರ : ಜಿಲ್ಲೆಯ ಬಬಲೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ಬೆಳಿಗ್ಗೆ ಕಾರು-ಸಿಮೆಂಟ್ ಲಾರಿ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಜರುಗಿದೆ.
ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದ ಬಳಿ ಸಿಮೆಂಟ್ ಸಾಗಿಸುತ್ತಿದ್ದ ಲಾರಿ ಹಾಗೂ ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದೆ.
ಘಟನೆಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವಿಜಯಪುರ ನಗರದ 32 ವರ್ಷದ ಅರ್ಜುನ ಕುಶಾಲಸಿಂಗ್ ರಜಪೂತ, 12 ವರ್ಷದ ಮೇಘರಾಜ ಅರ್ಜುನ ರಜಪೂತ, 52 ವರ್ಷದ ರವಿನಾಥ ಸನಿಲಾಲ್ ಪತ್ತಾರ, 40 ವರ್ಷದ ಪುಷ್ಪಾ ರವಿನಾಥ ಪತ್ತಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ವಿಜಯಪುರ ನಗರದಿಂದ ಕೆಎ28- ಡಿ1021 ಸಂಖ್ಯೆಯ ಕಾರಿನಲ್ಲಿ ಜಮಖಂಡಿ ದೇವಸ್ಥಾನಕ್ಕೆ ಹೊರಟಿದ್ದಾಗ ಜಮಖಂಡಿಯಿಂದ ಸಿಮೆಂಟ್ ತುಂಬಿಕೊಂಡು ವಿಜಯಪುರ ನಗರದತ್ತ ಬರುತ್ತಿದ್ದ ಕೆಎ16- ಬಿ6472 ನೋಂದಣಿಯ ಲಾರಿ ಮುಖಾಮುಖಿ ಡಿಕ್ಕಿಯಾಗಿವೆ.
ಅಪಘಾತದ ರಭಸಕ್ಕೆ ವಾಹನಗಳಲ್ಲಿ ಸಿಲುಕಿದ್ದ ಶವಗಳನ್ನು ಪೊಲೀಸರು ಪ್ರಯಾಸದಿಂದ ಹೊರತೆಗೆದಿದ್ದಾರೆ.
ಘಟನೆಯ ಸುದ್ದಿ ತಿಳಿಯುತ್ತಲೇ ಎಸ್ಪಿ ಋಷಿಕೇಶ ಭಗವಾನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಧಾವಿಸಿರುವ ಬಬಲೇಶ್ವರ ಠಾಣೆ ಪೊಲೀಸರು ಪ್ರಜರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.