ಇನ್ನಷ್ಟು ಉತ್ಸಾಹದಿಂದ ಕೆಲಸ: ಸಂಸದೆ ಶೋಭಾ ಕರಂದ್ಲಾಜೆ

Team Udayavani, May 28, 2019, 6:00 AM IST

w-14

ಪುತ್ತೂರು: ಪ್ರಗತಿಯ ಹರಿಕಾರ ನರೇಂದ್ರ ಮೋದಿ ಅವರ ಸರಕಾರ ಕೇಂದ್ರದಲ್ಲಿ ಬರಬೇಕು, ರಾಜ್ಯದಲ್ಲಿ ಅಭಿವೃದ್ಧಿ ವಿರೋಧಿ ನಿಲುವಿನ ಸರಕಾರ ಬೇಡ ಎಂಬ ಕಾರಣಕ್ಕೆ ಜನರು ಬಿಜೆಪಿಗೆ ಮತ ಚಲಾಯಿಸಿ ಅಭೂತಪೂರ್ವ ಗೆಲುವು ನೀಡಿದ್ದಾರೆ. ರಾಜ್ಯದ ಎಲ್ಲ 25 ಬಿಜೆಪಿ ಸಂಸದರು ಯೋಜನೆಗಳನ್ನು ಮಾಡಿಕೊಂಡು ರಾಜ್ಯದ ಅಭಿವೃದ್ಧಿಗೆ ಕಂಕಣ ತೊಡಲಿದ್ದಾರೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಸೋಮವಾರ ಪುತ್ತೂರು ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರು ಮತ್ತು ಪಕ್ಷದ ಪ್ರಮುಖರ ಸಭೆಯಲ್ಲಿ ಅವರು ಮಾತನಾಡಿದರು.

ಖರ್ಗೆ, ದೇವೇಗೌಡ ಅವರಂಥವರೇ ನಿರೀಕ್ಷೆಗೂ ಮೀರಿ ಸೋಲಿನ ಅಘಾತ ಅನುಭವಿಸಿದ್ದಾರೆ. ಸಮ್ಮಿಶ್ರ ಸರಕಾರದ ಜನ ವಿರೋಧಿ, ರೈತ ವಿರೋಧಿ ನಿಲುವಿಗೆ ಮತದಾರರು ನೀಡಿದ ಉತ್ತರವಿದು ಎಂದು ಹೇಳಿದ ಅವರು, ಕಳೆದ 5 ವರ್ಷ ಮಾಡಿದ ಕೆಲಸಕ್ಕಿಂತಲೂ ಇಮ್ಮಡಿಯಾಗಿ ಕೇಂದ್ರ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಮಾಡಲಿದೆ ಎಂದರು.

ರಾಜ್ಯ ರಸ್ತೆಗಳನ್ನು ಮೇಲ್ದರ್ಜೆಗೇರಿಸಿ ಅಭಿವೃದ್ಧಿಪಡಿಸುವುದು, ಕರಾವಳಿ ಜಿಲ್ಲೆಗಳಲ್ಲಿ ಸಮಸ್ಯೆಯಾಗಿರುವ ಅಡಿಕೆಗೆ ಸೂಕ್ತ ಬೆಲೆ ನೀಡುವ ನಿಟ್ಟಿನಲ್ಲಿ ಪ್ರಯತ್ನ ನಡೆಸಲಾಗುವುದು ಎಂದು ಶೋಭಾ ಕರಂದ್ಲಾಜೆ ಭರವಸೆ ನೀಡಿದರು. ಈ ನಿಟ್ಟಿನಲ್ಲಿ ಸಂಸದ ನಳಿನ್‌ ಕುಮಾರ್‌ ಜತೆ ಸೇರಿಕೊಂಡು ಕೆಲಸ ಮಾಡುವುದಾಗಿ ಹೇಳಿದರು.

ರೈಲ್ವೇ ಹಳಿ ದ್ವಿಗುಣ
ಕೊಂಕಣ ರೈಲ್ವೇ ಹಳಿಗಳನ್ನು ದ್ವಿಗುಣಗೊಳಿಸುವುದು ಮತ್ತು ವಿದ್ಯುದೀಕರಣಕ್ಕೆ ಆದ್ಯತೆ ನೀಡಿ ವಿದ್ಯುತ್‌ ಚಾಲಿತ ರೈಲು ಬಂಡಿಗಳ ಓಡಾಟಕ್ಕೆ ಯೋಜನೆ ಹಾಕಿಕೊಳ್ಳಲಾಗಿದೆ. ಮುಂಬಯಿಯಲ್ಲಿರುವ ಈ ಭಾಗದ ಜನತೆಯ ಬೇಡಿಕೆಯೂ ಇದೇ ಆಗಿದೆ. ನರೇಂದ್ರ ಮೋದಿ ನೇತೃತ್ವದ ಸರಕಾರವು ಕರಾವಳಿ ಮತ್ತು ಮುಂಬಯಿ ನಡುವಣ ರೈಲು ಪ್ರಯಾಣ ವ್ಯವಸ್ಥೆಯನ್ನು ಅಭಿವೃದ್ಧಿ ಪಡಿಸಲು ಅನುದಾನ ನೀಡಲಿದ್ದು, ಮುಂದಿನ ಮೂರು ವರ್ಷಗಳಲ್ಲಿ ಕೆಲಸ ಪೂರ್ಣಗೊಳ್ಳಲಿದೆ ಎಂದು ಹೇಳಿದರು.

ರಾಜ್ಯಕ್ಕೆ ಅನುದಾನ
ಕೇಂದ್ರ ಸರಕಾರವು ರಾಜ್ಯಕ್ಕೆ ಪ್ರಾಕೃತಿಕ ವಿಕೋಪ ಮತ್ತು ತುರ್ತು ಕಾಮಗಾರಿಗಳಿಗಾಗಿ ಕಳೆದ 5 ವರ್ಷಗಳ ಅವಧಿಯಲ್ಲಿ 7 ಸಾವಿರ ಕೋಟಿ ರೂ. ಅನುದಾನವನ್ನು ಮಂಜೂರು ಮಾಡಿದೆ. ಆದರೆ ಹಿಂದಿನ ಕಾಂಗ್ರೆಸ್‌ ಸರಕಾರ 10 ವರ್ಷಗಳಲ್ಲಿ ಕೇವಲ 4 ಸಾವಿರ ರೂ. ಅನುದಾನವನ್ನು ಮಾತ್ರ ನೀಡಿತ್ತು ಎಂದು ಆರೋಪಿಸಿದ ಅವರು, ನಗರಸಭೆ ಮತ್ತು ಗ್ರಾ.ಪಂ. ಹೆಚ್ಚಿನ ಅನುದಾನ ನೀಡಲು ಎಲ್ಲಾ ರೀತಿಯ ಪ್ರಯತ್ನ ನಡೆಸಲಾಗುವುದು ಎಂದು ಹೇಳಿದರು. ಪುತ್ತೂರು ನಗರ ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮದಾಸ್‌ ಹಾರಾಡಿ ಸ್ವಾಗತಿಸಿ, ನಗರ ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ವಿದ್ಯಾ ಆರ್‌. ಗೌರಿ ವಂದಿಸಿದರು.

ಸಚಿವರಾಗಲಿ
ಜಿಲ್ಲಾ ಬಿಜೆಪಿ ಅಧ್ಯ- ಹಾಗೂ ಪುತ್ತೂರು ಶಾಸಕ ಸಂಜೀವ ಮಠಂದೂರು ಮಾತನಾಡಿ, ಕರ್ನಾಟಕದಿಂದ ಆಯ್ಕೆಯಾದ 25 ಬಿಜೆಪಿ ಸಂಸದರಲ್ಲಿ ಮೂವರು ಪುತ್ತೂರು ತಾಲೂಕಿಗೆ ಸಂಬಂಧಿಸಿದವರು. ಈ ಮೂವರು ಕೇಂದ್ರದಲ್ಲಿ ಸಚಿವರಾಗಬೇಕು ಎಂಬ ಆಸೆ ಪುತ್ತೂರಿನ ಜನರಲ್ಲಿದೆ. ನರೇಂದ್ರ ಮೋದಿ ನೇತೃತ್ವದ ಸರಕಾರ ಇನ್ನಷ್ಟು ಅಭಿವೃದ್ಧಿ ಕಾರ್ಯವನ್ನು ಮಾಡಿ ಭಾರತದ ಗೌರವವನ್ನು ಜಗತ್ತಿನಲ್ಲೇ ಎತ್ತಿ ಹಿಡಿಯಲಿದೆ ಎಂದರು.

ಟಾಪ್ ನ್ಯೂಸ್

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

Ullala: ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1(3)

World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್‌ 17

1

Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

1(3)

World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್‌ 17

1

Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.