ಜನತೆಗೆ ಸಮರ್ಪಕವಾಗಿ ಪಡಿತರ ವಿತರಣೆ ಮಾಡಿ
ವಿವಿಧ ಗ್ರಾಮಗಳಲ್ಲಿ ಶಾಸಕ ಹಾಲಪ್ಪ ಆಚಾರ್ ಜಾಗೃತಿ
Team Udayavani, Apr 10, 2020, 3:12 PM IST
ಯಲಬುರ್ಗಾ: ಶಾಸಕ ಹಾಲಪ್ಪ ಆಚಾರ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಕೋವಿಡ್ ವೈರಸ್ ಜಾಗೃತಿ ಮೂಡಿಸಿದರು
ಯಲಬುರ್ಗಾ: ತಾಲೂಕಿನ ನ್ಯಾಯಬೆಲೆ ಅಂಗಡಿ ಮಾಲೀಕರು ಪಡಿತರದಾರರಿಗೆ ದವಸ ಧಾನ್ಯಗಳನ್ನು ತೊಂದರೆಯಾಗದಂತೆ ಉಚಿತವಾಗಿ ವಿತರಿಸಬೇಕು ಎಂದು ಶಾಸಕ ಹಾಲಪ್ಪ ಆಚಾರ್ ಹೇಳಿದರು.
ತಾಲೂಕಿನ ಬುಡಕುಂಟಿ, ಬುಕನಟ್ಟಿ, ಗುತ್ತೂರ, ವಣಗೇರಿ, ಚಿಕ್ಕವಂಕಲಕುಂಟಾ, ಉಪ್ಪಲದಿನ್ನಿ, ನಿಲೋಗಲ್, ಲಕಮನಗುಳೆ ಸೇರಿದಂತೆ ವಿವಿಧ ಗ್ರಾಮಗಳಿಗೆ ಗುರುವಾರ ಭೇಟಿ ನೀಡಿ ಕೋವಿಡ್ ವೈರಸ್ ಹಿನ್ನೆಲೆ ಆಯೋಜಿಸಿದ್ದ ಜನಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇನ್ನೂ ಪರವಾನಗಿ ಪಡೆದ ಕಿರಾಣಿ ಅಂಗಡಿಯವರು ಅಗತ್ಯ ವಸ್ತುಗಳನ್ನು ಜನರಿಗೆ ಹೆಚ್ಚಿನ ದರಕ್ಕೆ ಮಾರಾಟ ಮಾಡದಂತೆ ಜಾಗೃತಿ ವಹಿಸಬೇಕು. ಅಂತಹ ಪ್ರರಕರಣ ಕಂಡು ಬಂದರೆ ಅವರ ವಿರುದ್ಧ ಕ್ರಮಕೈಗೊಳ್ಳುವಂತೆ ತಹಶೀಲ್ದಾರ್‌ಗೆ ಸೂಚಿಸಲಾಗಿದೆ. ಪ್ರತಿ ಗ್ರಾಪಂ ವತಿಯಿಂದ ಜನರಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಹೆಚ್ಚಿನ ಕಾಳಜಿ ವಹಿಸಬೇಕು. ಗ್ರಾಮಗಳ ಎಲ್ಲ ಚರಂಡಿಗಳನ್ನು ಸ್ವಚ್ಛಗೊಳಿಸಿ ಎಲ್ಲ ವಾರ್ಡ್‌ಗಳಲ್ಲಿ ಫಾಗಿಂಗ್ ಹಾಗೂ ಔಷಧ ಸಿಂಪರಣೆಗೆ ಮುಂದಾಗಬೇಕು. ಎಲ್ಲ ಗ್ರಾಮಸ್ಥರ ಆರೋಗ್ಯದ ಮೇಲೆ ನಿಗಾ ವಹಿಸುವಂತೆ ಪಿಡಿಒಗೆ ಸೂಚಿಸಿದರು.
ಗ್ರಾಮದ ಪ್ರತಿಯೊಬ್ಬರು ಆರೋಗ್ಯ ಇಲಾಖೆಯವರಿಗೆ, ಆಶಾ ಕಾರ್ಯ ಕರ್ತೆಯರಿಗೆ, ಪೊಲೀಸರಿಗೆ ಸಹಕಾರ ನೀಡಬೇಕು. ಗ್ರಾಮಕ್ಕೆ ಹೊರ ರಾಜ್ಯ, ಜಿಲ್ಲೆಯಿಂದ ಯಾರೇ ಬಂದರೂ ತಕ್ಷಣ ಆರೋಗ್ಯ ಇಲಾಖೆಯವರು ಪರೀಕ್ಷೆ ನಡೆಸಿ ಅವರು ಮನೆಯಿಂದ ಹೊರಬರದಂತೆ ನೋಡಿಕೊಳ್ಳಬೇಕು. ಜನರು ಮನೆಯಿಂದ ಹೊರಗೆ ಬರದಂತೆ ಮನೆಯಲ್ಲಿ ಇದ್ದುಕೊಂಡು ಈ ವೈರಸ್ ತಡೆಗಟ್ಟಲು ಎಲ್ಲರೂ ಸ್ವಯಂ ಪ್ರೇರಿತರಾಗಿ ಮುಂದಾಗಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ullala; ನೇಮದ ಗದ್ದೆಯಲ್ಲಿ ತ್ಯಾಜ್ಯ ರಾಶಿ: ವೈದ್ಯನಾಥ ದೈವದ ಕೋಪಾವೇಶ
Security ನೀಡುವಂತೆ ಕೇಂದ್ರ ಸಚಿವರಿಗೆ ಸ್ನೇಹಮಯಿ ಪತ್ರ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ullala; ನೇಮದ ಗದ್ದೆಯಲ್ಲಿ ತ್ಯಾಜ್ಯ ರಾಶಿ: ವೈದ್ಯನಾಥ ದೈವದ ಕೋಪಾವೇಶ
Security ನೀಡುವಂತೆ ಕೇಂದ್ರ ಸಚಿವರಿಗೆ ಸ್ನೇಹಮಯಿ ಪತ್ರ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.