ಕಸ್ತೂರಿ ರಂಗನ್ ವರದಿ ಜಾರಿ: ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಜೊತೆ ಯಡಿಯೂರಪ್ಪ ಚರ್ಚೆ
Team Udayavani, May 21, 2020, 5:35 PM IST
ಬೆಂಗಳೂರು: ಕಸ್ತೂರಿ ರಂಗನ್ ವರದಿ ಜಾರಿ ಕುರಿತಂತೆ ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ್ ಜಾವ್ಡೇಕರ್ ಅವರು ನಡೆಸಿದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಗವಹಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಪಶ್ಚಿಮ ಘಟ್ಟವನ್ನು ಸೂಕ್ಷ್ಮ ಪರಿಸರ ಪ್ರದೇಶವೆಂದು ಘೋಷಿಸುವ ಕುರಿತು ಚರ್ಚಿಸಿದರು.
ಈ ಕುರಿತು ರಾಜ್ಯದ ಅಭಿಪ್ರಾಯವನ್ನು ವ್ಯಕ್ತಪಡಿಸಿದ ಮುಖ್ಯಮಂತ್ರಿಯವರು, ರಾಜ್ಯದಲ್ಲಿ ಗ್ರಾಮ ಪಂಚಾಯಿತಿಗಳು, ತಾಲ್ಲೂಕು ಪಂಚಾಯಿತಿಗಳು, ಜಿಲ್ಲಾ ಪಂಚಾಯಿತಿಗಳು, ವಿವಿಧ ಹಂತಗಳ ಜನಪ್ರತಿನಿಧಿಗಳು ಹಾಗೂ ಸಚಿವ ಸಂಪುಟವು ಕಸ್ತೂರಿ ರಂಗನ್ ವರದಿಯ ಕರಡು ಅಧಿಸೂಚನೆಯನ್ನು ಈಗಿರುವ ಸ್ವರೂಪದಲ್ಲಿ ತಿರಸ್ಕರಿಸಿದೆ. ಅದರಲ್ಲೂ ಸೂಕ್ಷ್ಮ ಪರಿಸರ ಪ್ರದೇಶ ಎಂದು ಘೋಷಿಸಿದ್ದನ್ನು ತಿರಸ್ಕರಿಸಿದ್ದಾರೆ.
ಪ್ರತಿ ರಾಜ್ಯದ ಸಮಸ್ಯೆಗಳು, ಸವಾಲುಗಳು ಭಿನ್ನವಾಗಿರುವುದರಿಂದ ಭಾರತ ಸರ್ಕಾರವು ಎಲ್ಲ ರಾಜ್ಯಗಳಿಗೆ ಏಕ ರೂಪದ ಅಧಿಸೂಚನೆ ಹೊರಡಿಸುವುದು ಸರಿಯಲ್ಲ ಎಂದು ತಿಳಿಸಿದರು.
ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರು ಇದಕ್ಕೆ ಸಹಮತ ವ್ಯಕ್ತ ಪಡಿಸಿ, ಪ್ರತಿ ರಾಜ್ಯಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರತ್ಯೇಕವಾಗಿ ಚರ್ಚಿಸುವುದಾಗಿ ತಿಳಿಸಿದರು.
ರಾಜ್ಯದ ಅರಣ್ಯ ಸಚಿವ ಆನಂದ್ ಸಿಂಗ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಅರಣ್ಯ ಇಲಾಖೆ ಅಪರಮುಖ್ಯ ಕಾರ್ಯದರ್ಶಿ ಸಂದೀಪ್ ದವೆ, ಮಹಾರಾಷ್ಟ್ರ, ಕೇರಳ, ಗೋವಾ, ತಮಿಳುನಾಡು ಮತ್ತು ಗುಜರಾತ್ ರಾಜ್ಯದ ಮುಖ್ಯಮಂತ್ರಿಗಳು/ ಸಚಿವರು, ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.