Budget 2024: 3 ಕೋಟಿ ಸ್ತ್ರೀಯರಿಗೆ ಸಿಗಲಿದೆ ‘ಲಕ್‌ಪತಿ ದೀದಿ’ ಯೋಜನೆಯ ಲಾಭ
Team Udayavani, Feb 1, 2024, 1:11 PM IST
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ ಸಂಸತ್ತಿನಲ್ಲಿ ಮಧ್ಯಂತರ ಬಜೆಟ್ ಮಂಡಿಸಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಿ ಮಹಿಳೆಯರಿಗಾಗಿ ಹಲವು ದೊಡ್ಡ ಘೋಷಣೆಗಳನ್ನು ಘೋಷಣೆ ಮಾಡಲಾಗಿದೆ.
ಅದರಂತೆ ಆಗಸ್ಟ್ 15, 2023 ರಂದು ಕೆಂಪು ಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಈ ಲಕ್ ಪತಿ ದೀದಿ ಯೋಜನೆಯನ್ನು ಪ್ರಾರಂಭಿಸಿದ್ದರು. ಆರಂಭದಲ್ಲಿ 2 ಕೋಟಿ ಮಹಿಳೆಯರಿಗೆ ನಿಗದಿಪಡಿಸಲಾಗಿದ್ದ ‘ಲಕ್ ಪತಿ ದೀದಿ’ ಯೋಜನೆಯ ಗುರಿಯನ್ನು 3 ಕೋಟಿ ಮಹಿಳೆಯರಿಗೆ ಹೆಚ್ಚಿಸಲಾಗಿದೆ ಎಂದು ಹಣಕಾಸು ಸಚಿವರು ಹೇಳಿದರು.
ಈ ಯೋಜನೆಯಡಿ ಮಹಿಳೆಯರಿಗೆ ಕೌಶಲ್ಯ ತರಬೇತಿ ನೀಡಲಾಗುತ್ತಿದ್ದು, ಇದರಿಂದ ಮಹಿಳಾ ಸ್ವ-ಸಹಾಯ ಗುಂಪುಗಳ ಮೂಲಕ ವರ್ಷಕ್ಕೆ 1 ಲಕ್ಷ ರೂಪಾಯಿ ಸಹಾಯಧನ ನೀಡಿ ಈ ಯೋಜನೆಯನ್ನು ಜಾರಿಗೊಳಿಸುವ ಉದ್ದೇಶ ಹೊಂದಲಾಗಿದೆ ಎಂದರು.
ದೇಶದ ಮಹಿಳೆಯರು ಆರ್ಥಿಕವಾಗಿ ಸಾಕ್ಷರರಾಗಲು ಸಾಧ್ಯವಾಗುತ್ತದೆ.ಈ ಯೋಜನೆಯ ಮೂಲಕ ಮಹಿಳೆಯರಿಗೆ ಕಾರ್ಯಾಗಾರಗಳನ್ನು ನಡೆಸಲಾಗುವುದು ಅದರಲ್ಲಿ ಅವರಿಗೆ ಹಣಕಾಸಿನ ವ್ಯವಹಾರಗಳ ಬಗ್ಗೆ ತಿಳಿಸಲಾಗುವುದು. ಮಹಿಳೆಯರ ಸಬಲೀಕರಣ ಈ ಯೋಜನೆಯ ಉದ್ದೇಶವಾಗಿದೆ. ಈ ಕಾರ್ಯಾಗಾರಗಳು ಬಜೆಟ್, ಉಳಿತಾಯ, ಹೂಡಿಕೆ ಮತ್ತು ಹಣಕಾಸು ಸಾಧನಗಳನ್ನು ಅರ್ಥಮಾಡಿಕೊಳ್ಳುವಂತಹ ವಿಷಯಗಳನ್ನು ಒಳಗೊಂಡಿದೆ.
ಲಕ್ ಪತಿ ದೀದಿ ಯೋಜನೆ ಅಡಿಯಲ್ಲಿ, ಉದ್ಯಮಶೀಲತೆ ಉದ್ಯಮ, ಶಿಕ್ಷಣ ಅಥವಾ ಇತರ ಅಗತ್ಯಗಳಿಗಾಗಿ ಮಹಿಳೆಯರಿಗೆ ಸಣ್ಣ ಸಾಲಗಳನ್ನು ನೀಡಲಾಗುತ್ತದೆ.
ಅಷ್ಟುಮಾತ್ರವಲ್ಲದೆ ಈ ಯೋಜನೆಯಡಿಯಲ್ಲಿ, ಡಿಜಿಟಲ್ ಬ್ಯಾಂಕಿಂಗ್ ಸೇವೆಗಳು, ಮೊಬೈಲ್ ವ್ಯಾಲೆಟ್‌ಗಳು ಮತ್ತು ಇತರ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳನ್ನು ಹೇಗೆ ಬಳಸುವುದು ಎಂಬುದನ್ನು ಕಲಿಯಲು ಮಹಿಳೆಯರನ್ನು ಪ್ರೋತ್ಸಾಹಿಸಲಾಗುತ್ತದೆ.
ಇದನ್ನೂ ಓದಿ: Budget 2024: ಎಲ್ಲ ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೂ ಆಯುಷ್ಮಾನ್ ಭಾರತ್ ಯೋಜನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.