Karnataka Budget 2024: ಬಜೆಟ್ ನಲ್ಲಿ ಇಂಧನ ಇಲಾಖೆಗೆ ಸಿಕ್ಕಿದ್ದೇನು ?
Team Udayavani, Feb 16, 2024, 1:35 PM IST
ಬೆಂಗಳೂರು: ಗೃಹ ವಿದ್ಯುತ್ ಬಳಕೆದಾರರಿಗೆ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಗ್ಯಾರಂಟಿ ಯೋಜನೆಯನ್ನು ಜುಲೈ 1 ರಿಂದ ಯೋಜನೆಯಡಿ ಅನ್ವಯವಾಗುವಂತೆ ಜಾರಿಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಯೋಜನೆಯಡಿ 1.65 ಕೋಟಿ ಗ್ರಾಹಕರು ನೋಂದಾವಣಿ ಮಾಡಿಕೊಂಡಿದ್ದು ಸುಮಾರು ಐದು ಕೋಟಿಯಷ್ಟು ಜನರು ಉಚಿತ ವಿದ್ಯುತ್ ಸೌಲಭ್ಯ ಪಡೆಯುತ್ತಿದ್ದಾರೆ ಎನ್ನಲಾಗಿದೆ.
ಇದರೊಂದಿಗೆ ಕುಟೀರ ಜ್ಯೋತಿ, ಭಾಗ್ಯ ಜ್ಯೋತಿ, ಅಮೃತ ಜ್ಯೋತಿ ಮೊದಲಾದ ಯೋಜನೆಗಳ ಫಲಾನುಭವಿಗಳನ್ನೂ ಸಹ ಗೃಹಜ್ಯೋತಿ ಯೋಜನೆಯ ವ್ಯಾಪ್ತಿಗೆ ಸೇರ್ಪಡೆಗೊಳಿಸಲಾಗಿದೆ. ಅಲ್ಲದೆ, 48 ಯುನಿಟ್ ಒಳಗಿನ ಸರಾಸರಿ ಬಳಕೆಗೆ ಶೇ.10ರಷ್ಟು ಹೆಚ್ಚುವರಿ ವಿದ್ಯುತ್ ಬದಲಿಗೆ 10 ಯುನಿಟ್‌ಗಳಷ್ಟು ಹೆಚ್ಚುವರಿ ವಿದ್ಯುತ್ ಒದಗಿಸಲು ತೀರ್ಮಾನಿಸಲಾಗಿದೆ. ಅಲ್ಲದೆ ರೈತರನ್ನು ಸ್ವಾವಲಂಬಿಗಳನ್ನಾಗಿ ಮಾಡಲು PM-KUSUM Component-B ಯೋಜನೆಯಡಿ 1,174 ಕೋಟಿ ರೂ. ಅಂದಾಜು ವೆಚ್ಚದಲ್ಲಿ 40,000 ಜಾಲ ಮುಕ್ತ (Off Grid) ಸೋಲಾರ್ ಪಂಪ್ ಸೆಟ್‌ಗಳನ್ನು ಸ್ಥಾಪಿಸಲಾಗುತ್ತಿದೆ. ಇದರಲ್ಲಿ ಕೇಂದ್ರ ಸರ್ಕಾರದ ಪಾಲು ಶೇ.30ರಷ್ಟಿದ್ದು, ರಾಜ್ಯ ಸರ್ಕಾರದ ವತಿಯಿಂದ ನೀಡುವ ಸಹಾಯಧನವನ್ನು ಶೇ.30ರಿಂದ ಶೇ.50ಕ್ಕೆ ಹೆಚ್ಚಿಸಲಾಗಿದೆ ಎಂದರು.
ಕರ್ನಾಟಕ ವಿದ್ಯುತ್ ನಿಗಮವು Tehri Hydro Development Corporation India Limited (THDCIL) ಸಹಯೋಗದೊಂದಿಗೆ ತೇಲುವ ಸೌರ ಮತ್ತು ಭೂಸ್ಥಾಪಿತ ಸೌರ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದೆ.
ಕೃಷಿ ಪಂಪ್‌ಸೆಟ್ ಫೀಡರ್ ಸೌರೀಕರಣ ಯೋಜನೆ ಹಂತ-I ಅಡಿಯಲ್ಲಿ 1,320 ಮೆಗಾ ವ್ಯಾಟ್ ವಿಕೇಂದ್ರೀಕೃತ ಉತ್ಪಾದನೆಗೆ ಕ್ರಮವಹಿಸಲಾಗಿದೆ. ಇದರಿಂದ 3.37 ಲಕ್ಷ ರೈತರಿಗೆ ಅನುಕೂಲವಾಗಲಿದೆ. ಇದಲ್ಲದೆ, ಹಂತ-II ಅಡಿಯಲ್ಲಿ 1,192 ಮೆಗಾ ವ್ಯಾಟ್ ಸೌರ ಯೋಜನೆಗಳನ್ನು ಅನುಷ್ಠಾನಗೊಳಿಸುವ ಮೂಲಕ 4.30 I ಲಕ್ಷ 8.2. ಸೆಟ್‌ಗಳನ್ನು ಸೌರೀಕರಣಗೊಳಿಸಲು ಉದ್ದೇಶಿಸಲಾಗಿದೆ ಎಂದರು.
ಗ್ರೀನ್ ಹೈಡೋಜನ್ ಭವಿಷ್ಯದ ಇಂಧನ. ಖಾಸಗಿ ಬಂಡವಾಳವನ್ನು ಈ ವಲಯಕ್ಕೆ ಆಕರ್ಷಿಸಲು 300 ಕಿಲೋ ವ್ಯಾಟ್ ಸಾಮರ್ಥ್ಯದ ಗ್ರೀನ್ ಹೈಡೋಜನ್ ಸ್ಥಾವರವನ್ನು ಪ್ರಾಯೋಗಿಕವಾಗಿ ಅಂದಾಜು 10 ಕೋಟಿ ರೂ. ವೆಚ್ಚದಲ್ಲಿ MNRE ನಿಧಿಯಿಂದ ಸ್ವಯಂ-ಸುಸ್ಥಿರ ಘಟಕದ ಆಧಾರದ ಮೇಲೆ KREDL ವತಿಯಿಂದ ಅನುಷ್ಠಾನಗೊಳಿಸಲಾಗುವುದು ಮತ್ತು ಗ್ರೀನ್ ಹೈಡೋಜನ್ ನೀತಿಯನ್ನು ರೂಪಿಸಲಾಗುವುದು ಎಂದರು.
ನವೀಕರಿಸಬಹುದಾದ ಇಂಧನವನ್ನು ಬೃಹತ್ ಪ್ರಮಾಣದಲ್ಲಿ ಉತ್ಪಾದಿಸಿ ಬೇಡಿಕೆ ಹೆಚ್ಚಿರುವ ಕೇಂದ್ರಗಳು ಮತ್ತು ಗ್ರೀನ್ ಹೈಡೋಜನ್ ಹಬ್ ಗಳಿಗೆ ರವಾನಿಸಲು 765 kV ಯ Ultra High Voltage (UHV) ಟ್ರಾನ್ಸ್‌ಮಿಷನ್ ಮಾರ್ಗಗಳನ್ನು ನಿರ್ಮಿಸಲು ಕ್ರಮ ವಹಿಸಲಾಗುವುದು ಎಂದರು.
ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಹುಮಹಡಿ ಕಟ್ಟಡಗಳ ಬೆಳವಣಿಗೆಯಿಂದಾಗಿ ಹೆಚ್ಚುತ್ತಿರುವ ವಿದ್ಯುತ್ ಬೇಡಿಕೆಯನ್ನು ನೀಗಿಸಲು, ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸಬ್‌ಸ್ಟೇಷನ್‌ಗಳನ್ನು ಉನ್ನತೀಕರಿಸಲಾಗುವುದು.
ವಿದ್ಯುತ್ ಚಾಲಿತ ವಾಹನಗಳಿಗೆ ಉತ್ತೇಜನ ನೀಡಲು 2,500 EV Charging ಕೇಂದ್ರಗಳನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗುವುದು. ಅಲ್ಲದೇ, ವಿದ್ಯುತ್ ಸರಬರಾಜು ಕಂಪನಿಗಳ ಮೂಲಕ 35 ಕೋಟಿ ರೂ. ವೆಚ್ಚದಲ್ಲಿ 100 ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.
ಇದನ್ನೂಓದಿ: Budget 2024: ಪ್ರವಾಸೋದ್ಯಮಕ್ಕೆ ಒತ್ತು- ಕೊಪ್ಪಳದ ಅಂಜನಾದ್ರಿ ಅಭಿವೃದ್ಧಿಗೆ 100 ಕೋಟಿ ರೂ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.