Union Budget 2024: ರಾಮನಗರಕ್ಕೆ ಈ ಬಾರಿಯಾದರೂ ದೊರೆತೀತೆ ಅನುದಾನ
Team Udayavani, Jan 30, 2024, 5:55 PM IST
ಉದಯವಾಣಿ ಸಮಾಚಾರ
ರಾಮನಗರ: ಕೆಲ ಸಣ್ಣ ಪುಟ್ಟ ಕಾರ್ಯ ಕ್ರಮಗಳನ್ನು ಹೊರತುಪಡಿಸಿದರೆ, ಕಳೆದ 5 ವರ್ಷಗಳ ಅವಧಿಯಲ್ಲಿ ರಾಮನಗರ ಜಿಲ್ಲೆಗೆ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ದೊರೆತಿರುವ ಮಹ ತ್ವದ ಕೊಡುಗೆಗಳ್ಯಾವುವೂ ಇಲ್ಲವಾಗಿದೆ. ಇದೀಗ ತನ್ನ ಕೊನೆಯ ಬಜೆಟ್‌ನಲ್ಲಾದರೂ ಕೇಂದ್ರ ವಿತ್ತ ಸಚಿವರು ರೇಷ್ಮೆನಾಡಿಗೆ ಮಹತ್ತರ ಕೊಡುಗೆ ನೀಡುವರೇ ಎಂಬ ನಿರೀಕ್ಷೆಯಲ್ಲಿ ಜಿಲ್ಲೆಯ ಜನತೆ ಕೇಂದ್ರ ಬಜೆಟ್‌ನತ್ತ ನಿರೀಕ್ಕೆ ಇಟ್ಟಿದ್ದಾರೆ.
ಬೆಂಗಳೂರು ನಗರಕ್ಕೆ ಹೊಂದಿಕೊಂಡಂತೆ ಇರುವ ರಾಮನಗರ ಜಿಲ್ಲೆಯ ಅಭಿವೃದ್ಧಿಗೆ ಕೇಂದ್ರದಿಂದ ಸಾಕಷ್ಟು ನೆರವು ನಿರೀಕ್ಷಿಸಿದೆ. ನರೇಗಾ, ಜಲಜೀವನ್ ಮಿಷನ್, ಕಿಸಾನ್ ಸಮ್ಮಾನ್ ಮೊದಲಾದ ಸಾರ್ವತ್ರಿಕ ಯೋಜನೆಗಳನ್ನು ಹೊರತುಪಡಿಸಿದರೆ ಜಿಲ್ಲೆಗಾಗಿ ಕೇಂದ್ರ ಸರ್ಕಾರ ನೀಡಿದ ಪ್ರತ್ಯೇಕ ಯೊಜನೆಗಳು ಯಾವುವೂ ಇಲ್ಲವಾಗಿವೆ.
ಈ ಬಾರಿ ಹಲವು ನಿರೀಕ್ಷೆ: ಕೇಂದ್ರ ವಿತ್ತಸಚಿವ ನಿರ್ಮಲಾ ಸೀತಾರಾಮ್ ತನ್ನ ಕೊನೆಯ ಬಜೆಟ್ ನಲ್ಲಿ ಮಹತ್ವದ ಕೊಡುಗೆಗಳನ್ನು ಜಿಲ್ಲೆಗೆ ನೀಡಬಹುದೇ ಎಂಬ ನಿರೀಕ್ಷೆ ಜನತೆಯಲ್ಲಿ ಗರಿಗೆದರಿದೆ. ಕೇಂದ್ರ ಸಚಿವರು ಜಿಲ್ಲೆಗೆ ಈ ಬಾರಿಯಾದರೂ ಬಜೆಟ್‌ನಲ್ಲಿ ಮಹತ್ವದ ಕೊಡುಗೆಗಳನ್ನು ನೀಡಲಿ ಎಂದು ಜಿಲ್ಲೆಯ ಜನತೆ ಬಯಸುತ್ತಿದ್ದಾರೆ.
ದೇಶಿ ಆಟಿಕೆ ಉದ್ಯಮಕ್ಕೆ ಉತ್ತೇಜನ ನೀಡುವುದಾಗಿ ಕೇಂದ್ರ ಸರ್ಕಾರ ಹಲ ವಾರು ಬಾರಿ ಹೇಳುತ್ತಾ ಬಂದಿದ್ದು, ಕೋವಿಡ್-19 ಬಳಿಕ ಸಂಕಷ್ಟಕ್ಕೆ ಸಿಲುಕಿ ರುವ ಚನ್ನಪಟ್ಟಣದ ಕರಕುಶಲ ಉದ್ಯಮಕ್ಕೆ ಉತ್ತೇಜನ ನೀಡುವ ಕೆಲಸ ಈ ಬಜೆಟ್‌ನಲ್ಲಾದರೂ ಆಗಲಿ, ಚನ್ನಪಟ್ಟಣದಲ್ಲಿ ಕೇಂದ್ರ ಸರ್ಕಾರ ಆಟಿಕೆಗಳ ನಿರ್ಮಾಣದ ಕ್ಲಸ್ಟರ್ ತೆರೆದು ಸಾಂಪ್ರದಾಯಿಕ ಬೊಂಬೆಗಳ ಉದ್ಯಮಕ್ಕೆ ಚೈತನ್ಯ ನೀಡಲಿ ಎಂದು ಜನತೆ ನಿರೀಕ್ಷಿಸುತ್ತಿದ್ದಾರೆ.
ಇದರೊಂದಿಗೆ ರಾಮನಗರ ಚನ್ನಪಟ್ಟಣ ಮಾರ್ಗದಲ್ಲಿ ಪ್ರತಿನಿತ್ಯ 15 ಸಾವಿ ರಕ್ಕೂ ಹೆಚ್ಚು ಮಂದಿ ಕಾರ್ಮಿಕರು, ನೌಕರರು ರೈಲಿನ ಮೂಲಕ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದು, ಇವರ ಅನುಕೂಲಕ್ಕಾಗಿ ಹೆಚ್ಚುವರಿ ರೈಲು ಸೇವೆ. ರೈಲು ನಿಲ್ದಾಣಗಳ ಅಭಿವೃದ್ಧಿಗೆ ಕೇಂದ್ರ ಬಜೆಟ್‌ನಲ್ಲಿ ವಿತ್ತ ಸಚಿವರು ಚಿತ್ತೈಸ ಬೇಕಿದೆ.
ಸುಸಜ್ಜಿತ ಇಎಸ್‌ಐ ಆಸ್ಪತ್ರೆ ಬೇಕು: ರಾಮನಗರ ಜಿಲ್ಲೆಯಲ್ಲಿ ಬಿಡದಿ, ಹಾರೋಹಳ್ಳಿ ಕೈಗಾರಿಕಾ ಪ್ರದೇಶದ ಜೊತೆಗೆ ಸಣ್ಣ ಪುಟ್ಟ ಕೈಗಾರಿಕೆಗಳು ಇದ್ದು, ಹತ್ತಾರು ಸಾವಿರ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಕಾರ್ಮಿಕರ ಹಿತದೃಷ್ಟಿಯಿಂದ ಜಿಲ್ಲೆಗೆ ಸುಸಜ್ಜಿತ ಇಎಸ್‌ಐ ಆಸ್ಪತ್ರೆ ಅತ್ಯವಶ್ಯಕ ವಾಗಿದೆ. ಕೇಂದ್ರ ಸರ್ಕಾರ ಈ ಬಜೆಟ್‌ನಲ್ಲಾದರೂ ಸುಸಜ್ಜಿತ ಇಎಸ್‌ಐ ಆಸ್ಪತ್ರೆಗೆ ಅನುಮೋದನೆ ನೀಡಿದ್ದೇ ಆದಲ್ಲಿ ಹತ್ತಾರು ಸಾವಿರ ಕಾರ್ಮಿಕ ಕುಟುಂಬಗಳಿಗೆ ನೆರವಾಗಲಿದೆ.
ಕನಕಪುರ-ಚಾಮರಾಜನಗರ ರೈಲ್ವೆಗೆ ಸಿಗುತ್ತ ಅನುಮೋದನೆ
ಜಿಲ್ಲೆಯ ಹಲವು ದಿನಗಳ ಬೇಡಿಕೆಯಾಗಿರುವ ಹೆಜ್ಜಾಲ ಮೂಲಕ ಕನಕಪುರ, ಮಳವಳ್ಳಿ, ಕೊಳ್ಳೇಗಾಲ ಮೂಲಕ ಚಾಮರಾಜನಗರಕ್ಕೆ ಸಂಪರ್ಕ ಕಲ್ಪಿಸುವ ಹೊಸ ರೈಲ್ವೆ ಮಾರ್ಗ ಹತ್ತಾರು ವರ್ಷಗಳಿಂದ ಕೇವಲ ದಾಖಲೆಯಲ್ಲೇ ಉಳಿದಿದ್ದು, ಈ ಯೋಜನೆಗೆ ಈ ಬಾರಿಯ ಬಜೆಟ್‌ನಲ್ಲಾದರೂ ಕೇಂದ್ರ ಸರ್ಕಾರ ಅನುಮೋದನೆ ನೀಡುವುದೇ ಎಂಬುದು ಜನರ ನಿರೀಕ್ಷೆಯಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಿರುವ ಕಾರಣ ಟ್ರಾಮಾ ಸೆಂಟರ್, ಬಿಡದಿಯವರೆಗೆ ಸಬ್‌ಅರ್ಬನ್ ರೈಲ್ವೆ ಯೋಜನೆ ವಿಸ್ತರಣೆ, ಕೇಂದ್ರ ಸರ್ಕಾರದಿಂದ ಜಿಲ್ಲೆಯಲ್ಲಿ ರೇಷ್ಮೆ ಉದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಜವಳಿ ಪಾರ್ಕ್ ನಿರ್ಮಾಣ, ಬೆಂ-ಮೈ ಎಕ್ಸ್‌ಪ್ರೆಸ್ ವೇನಲ್ಲಿ ಕೆಫೆಟೇರಿಯಾ ನಿರ್ಮಾಣ ಸೇರಿದಂತೆ ಹಲವು ಯೋಜನೆಗಳಿಗೆ ಈ ಬಾರಿಯ ಬಜೆಟ್‌ನಲ್ಲಿ ಕೇಂದ್ರದ ಅನುಮೋದನೆ ದೊರೆತೀತೆ ಕಾಯ್ದು ನೋಡಬೇಕಿದೆ.
■ ಸು.ನಾ.ನಂದಕುಮಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್‌ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.