State budget 2024; ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್, ಗ್ರ್ಯಾಚ್ಯುಟಿ ಸವಲತ್ತು

ಮಹಿಳಾ - ಮಕ್ಕಳ ಅಭಿವೃದ್ಧಿ ಕ್ಷೇತ್ರಕ್ಕೆ ಬಜೆಟ್ ಕೊಡುಗೆಯೇನು?

Team Udayavani, Feb 16, 2024, 12:59 PM IST

State budget 2024; ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್, ಗ್ರ್ಯಾಚ್ಯುಟಿ ಸವಲತ್ತು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ರ ಆಯವ್ಯಯ ಪಟ್ಟಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಘೋಷಿಸಿದರು.

ಮಹಿಳೆಯರ ಆರ್ಥಿಕ ಸ್ವಾತಂತ್ರ್ಯಕ್ಕೆ ಬೆಂಬಲ ನೀಡುವ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2,000 ರೂ. ನೀಡಲಾಗುತ್ತಿದೆ. ಕುಟುಂಬ ದತ್ತಾಂಶದನ್ವಯ 1.33 ಕೋಟಿ APL, BPL, AAY ಪಡಿತರ ಚೀಟಿ ಹೊಂದಿರುವ ಯಜಮಾನಿ ಮಹಿಳೆಯರನ್ನು ಅರ್ಹ ಫಲಾನುಭವಿಗಳೆಂದು ಗುರುತಿಸಲಾಗಿದೆ. ಜನವರಿ ಅಂತ್ಯದವರೆಗೆ 1.17 ಕೋಟಿ ಮಹಿಳೆಯರು ಯೋಜನೆಯಡಿ ನೋಂದಾಯಿಸಿಕೊಂಡಿದ್ದು, ಈವರೆಗೆ 11,726 ಕೋಟಿ ರೂ.ಗಳನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾಯಿಸಲಾಗಿದೆ. 2024-25ನೇ ಸಾಲಿನಲ್ಲಿ 28,608 ಕೋಟಿ ರೂ. ಒದಗಿಸಲಾಗಿದೆ. ಇದರಿಂದ ಕುಟುಂಬ ನಿರ್ವಹಣೆಯ ಜೊತೆಗೆ ಆದಾಯೋತ್ಪನ್ನ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಮಹಿಳೆಯರಿಗೆ ಈ ಯೋಜನೆ ಅವಕಾಶ ಕಲ್ಪಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ರಾಜ್ಯ ಬಜೆಟ್ 2024: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ

ಮಕ್ಕಳ ಪ್ರಾರಂಭಿಕ ಶಿಕ್ಷಣ ಮತ್ತು ಆರೈಕೆಯಲ್ಲಿ ಸಾಮರ್ಥ್ಯ ಅಭಿವೃದ್ಧಿಗೆ 20,000 ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ತರಬೇತಿ ಕಾರ್ಯಾಗಾರಗಳನ್ನು ಆಯೋಜಿಸಲು 10 ಕೋಟಿ ರೂ. ಗಳನ್ನು ಒದಗಿಸಲಾಗುವುದು.

ಅಂಗನವಾಡಿ ಮೂಲಕ ಕೈಗೊಳ್ಳುವ ಚಟುವಟಿಕೆಗಳನ್ನು ಸುಗಮಗೊಳಿಸಲು 90 ಕೋಟಿ ರೂ. ವೆಚ್ಚದಲ್ಲಿ 75,938 ಸ್ಮಾರ್ಟ್ ಫೋನ್‌ಗಳನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಮೇಲ್ವಿಚಾರಕಿಯರಿಗೆ ಒದಗಿಸಲಾಗುವುದು.

ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 1,000 ಅಂಗನವಾಡಿಗಳಿಗೆ ಸ್ವಂತ ಕಟ್ಟಡಗಳನ್ನು 200 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗುವುದು.

ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಗ್ರ್ಯಾಚ್ಯುಟಿ ಸವಲತ್ತುಗಳನ್ನು ನೀಡಲಾಗುವುದು.

Cerebral Palsy, Muscular Dystrophy, Parkinsons ಮತ್ತು Multiple Sclerosis ಕಾಯಿಲೆಗಳಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ಪ್ರತಿ ತಿಂಗಳು1,000 ಪ್ರೋತ್ಸಾಹಧನವನ್ನು ನೀಡಲಾಗುವುದು.

ಆರೋಗ್ಯ ಇಲಾಖೆಯೊಂದಿಗೆ ಸಮನ್ವಯಿಸಿ ಎಲ್ಲಾ ತಾಲ್ಲೂಕುಗಳಲ್ಲಿ ಹಿರಿಯ ನಾಗರಿಕರಿಗೆ ಪ್ರತಿ ವರ್ಷ ಎರಡು Cataract ಶಸ್ತ್ರಚಿಕಿತ್ಸೆ ಶಿಬಿರಗಳನ್ನು ಆಯೋಜಿಸಲಾಗುವುದು.

ನಿರಾಶ್ರಿತ ಬೌದ್ಧಿಕ ವಿಕಲಚೇತನರ ಆರೈಕೆ ಮತ್ತು ಸಂರಕ್ಷಣೆಗಾಗಿ 4 ಅನುಪಾಲನಾ ಗೃಹಗಳನ್ನು ಎರಡು ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುವುದು.

ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ಒದಗಿಸಲು ಇನ್ನೂ ಬಾಕಿಯಿರುವ 1,500 ವಿಶೇಷಚೇತನರಿಗೆ 2024-25ನೇ ಸಾಲಿನಲ್ಲಿ ದ್ವಿಚಕ್ರ ವಾಹನಗಳನ್ನು ವಿತರಿಸಲಾಗುವುದು

ಲಿಂಗತ್ವ ಅಲ್ಪಸಂಖ್ಯಾತರ ಬದುಕನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಮೈತ್ರಿ ಯೋಜನೆಯಡಿ ನೀಡುವ ಮಾಸಾಶನವನ್ನು 800 ರೂ.ಗಳಿಂದ 1,200 ರೂ.ಗಳಿಗೆ ಹೆಚ್ಚಿಸಲಾಗುವುದು. ಜೊತೆಗೆ ಗುರುತಿಸುವಿಕೆ ಹಾಗೂ ಗುರುತಿನ ಚೀಟಿ ವಿತರಣೆಯ ಪ್ರಕ್ರಿಯೆಗಳನ್ನು ಸರಳಗೊಳಿಸಲಾಗುವುದು.

ಮಾಜಿ ದೇವದಾಸಿಯರ ಕಲ್ಯಾಣಕ್ಕಾಗಿ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುವುದು;

1) ಪ್ರಸ್ತುತ ನೀಡುತ್ತಿರುವ ಮಾಸಾಶನವನ್ನು 1500 ರೂ.ಗಳಿಂದ 2000 ರೂ.ಗಳಿಗೆ ಹೆಚ್ಚಿಸಲಾಗುವುದು.

2) ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ವಿಶೇಷ ಪ್ಯಾಕೇಜ್ ಅನ್ನು ನೀಡಲಾಗುವುದು.

3) ನಿವೇಶನ ಹೊಂದಿರುವ ವಸತಿರಹಿತರಿಗೆ ರಾಜೀವ್ ಗಾಂಧಿ ವಸತಿ ನಿಗಮದಿಂದ ವಸತಿ ಸೌಲಭ್ಯ ಕಲ್ಪಿಸಲಾಗುವುದು.

4) ಅವರ ಸಾಮಾಜಿಕ, ಆರ್ಥಿಕ ಸ್ಥಿತಿಗತಿ ಕುರಿತಂತೆ ನಿಖರ ಮಾಹಿತಿ ಸಂಗ್ರಹಿಸಿ, ಪುನರ್ವಸತಿ ಕಲ್ಪಿಸಲು ಮರುಸಮೀಕ್ಷೆ ನಡೆಸಲಾಗುವುದು.

ಇದನ್ನೂ ಓದಿ:Budget:ಧಾರ್ಮಿಕ ದತ್ತಿ ಇಲಾಖೆಗೆ ಸಿಕ್ಕಿದ್ದೇನು-ತಸ್ತಿಕ್‌ ಮೊತ್ತ ಅರ್ಚಕರ ಬ್ಯಾಂಕ್‌ ಖಾತೆಗೆ

2024-25ನೇ ಸಾಲಿನಲ್ಲಿ ಮಹಿಳಾ ಉದ್ದೇಶಿತ ಯೋಜನೆಗಳಿಗೆ 86,423 ಕೋಟಿ ರೂ.ಗಳನ್ನು ಒದಗಿಸಲಾಗುವುದು.

ಮಕ್ಕಳ ಉದ್ದೇಶಿತ ಯೋಜನೆಗಳಿಗೆ 2024-25ನೇ ಸಾಲಿನಲ್ಲಿ 54,617 ಕೋಟಿ ರೂ.ಗಳನ್ನು ಒದಗಿಸಲಾಗುವುದು.

ಟಾಪ್ ನ್ಯೂಸ್

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

CM Siddu

Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.