UV Fusion: ಸಮಸ್ಯೆಗಳ ಕುರಿತು ಸದಾ ಜಾಗರೂಕರಾಗಿರೋಣ

Team Udayavani, Feb 20, 2024, 1:25 PM IST

10-uv-fusion

ಮನುಷ್ಯನು ಜೀವನದಲ್ಲಿ ಖುಷಿಯಾಗಿರುವುದನ್ನೇ ಇಷ್ಟ ಪಡುತ್ತಾನೆ. ಅಚಾನಕ್ಕಾಗಿ ಏನಾದರೂ ಸಹಿಸಲು ಸಾಧ್ಯವಾಗದಂತಹ ತೊಂದರೆ ಅಥವಾ ಸಮಸ್ಯೆ ಬಂದಲ್ಲಿ ತತ್‌ಕ್ಷಣ ಅದರಿಂದ ವಿಚಲಿತನಾಗಿ ಅದರಿಂದ ಹೊರಬರಲು ಪ್ರಯತ್ನಿಸುತ್ತಾನೆ. ಆದರೆ ಅದೇ ಸಮಸ್ಯೆ ತೀರಾ ನಿಧಾನಗತಿಯಲ್ಲಿ ಬಂದಾಗ ಆತ ಸಮಸ್ಯೆಯಿಂದ ಹೊಬರಲು ಪ್ರಯತ್ನಿಸದೇ ಆ ಸಮಸ್ಯೆಗೆ ನಿಧಾನವಾಗಿ ಹೊಂದಿಕೊಡು ಹೋಗಿ ಕೊನೆಗೊಂದು ದಿನ ಆ ಸಮಸ್ಯೆಯ ಸುಳಿಯಲ್ಲಿ ಸಿಲುಕಿಕೊಂಡು ಅದರಲ್ಲೇ ತನ್ನ ಪ್ರಾಣವನ್ನು ಬಿಡುತ್ತಾನೆ. ಇದಕ್ಕೆ ಉದಾಹರಣೆಯಾಗಿ ಕಥೆಯೊಂದಿದೆ.

ಒಂದು ಜೀವಂತ ಕಪ್ಪೆಯನ್ನು ಇದ್ದಕ್ಕಿದ್ದಂತೆ ಕೊತ ಕೊತ ಕುದಿಯುತ್ತಿರುವ ನೀರಿಗೆ ಹಾಕಿದರೆ ಅದು ತತ್‌ಕ್ಷಣವೇ ಅದರಿಂದ ಹಾರಿ ಹೊರಗೆ ಹೋಗುತ್ತದೆ ಅಥವಾ ನೀರು ತೀರಾ ಬಿಸಿಯಾಗಿದ್ದರೆ ಅದರಿಂದ ಹೊರಬರಲು ಪ್ರಯತ್ನಿಸಿ ವಿಫ‌ಲವಾಗಿ ಅಲ್ಲೇ ಸಾಯುತ್ತದೆ. ಆದರೆ ಅದೇ ಕಪ್ಪೆಯನ್ನು ಶುದ್ಧವಾದ ಮತ್ತು ತಣ್ಣನೆಯ ನೀರಿರುವ ಪಾತ್ರೆಯಲ್ಲಿ ಹಾಕಿದರೆ ಅದು ಅದರೊ ಳಗೆಯೇ ಹಾಯಾಗಿ ಇರುತ್ತದೆ. ಯಾಕೆಂದರೆ ಕಪ್ಪೆಯ ಅವಸ ಸ್ಥಾನ ನೀರು, ನೆಲವಾದ್ದರಿಂದ ಅಲ್ಲಿ ಖುಷಿಯಾಗಿ ಇರುತ್ತದೆ.

ಈಗ ಅದೇ ನೀರಿನ ಪಾತ್ರೆಯನ್ನು ಬೆಂಕಿಯಲ್ಲಿಟ್ಟು ನಿಧಾನವಾಗಿ ಕುದಿಸಿದರೆ ಅದು ತತ್‌ಕ್ಷಣಕ್ಕೆ ಹಾರಿ ಹೋಗುವುದಿಲ್ಲ. ಅದು ತನಗೆ ಬಂದೊದಗಿರುವ ಅಪಾಯವನ್ನು ತತ್‌ಕ್ಷಣಕ್ಕೆ ಗ್ರಹಿಸುವುದಿಲ್ಲ ಮತ್ತು ನೀರಿನ ಬಿಸಿಗೆ ನಿಧಾನವಾಗಿ ಹೊಂದಿ ಕೊಳ್ಳುತ್ತಾ ಹೋಗುತ್ತದೆ. ಅದೇ ನೀರು ಇನ್ನಷ್ಟು ಬಿಸಿಯಾಗುತ್ತಾ ಹೋಗಿ ಕುದಿಯುವ ಬಿಂದು ತಲುಪಿದಾಗಲೂ ಕಪ್ಪೆಯ ಹೊಂದಿಕೊಡು ಹೋಗುವ ಮನಃಸ್ಥಿತಿಯ ಕಾರಣದಿಂದ ತನ್ನ ಪ್ರಾಣಕ್ಕೆ ಅಪಾಯ ಇದೆ ಎನ್ನುವುದು ಅದಕ್ಕೆ ಅರಿವಾದಾಗ ಕೊನೆಯ ಕ್ಷಣದಲ್ಲಿ ಪಾತ್ರೆಯಿಂದ ಹೊರಕ್ಕೆ ಬರಲಾರದೇ ಅಲ್ಲೇ ಉಳಿದು ಸಾಯುತ್ತದೆ. ಏಕೆಂದರೆ ಕಪ್ಪೆಯು ತಾನಿರುವ ತಣ್ಣನೆಯ ನೀರಿನ ಪಾತ್ರೆಯು ನಿಧಾನವಾಗಿ ಬಿಸಿ ಆಗುತ್ತಿದೆ, ಇದು ಮುಂದಕ್ಕೆ ತನ್ನ ಜೀವಕ್ಕೆ ಗಂಡಾತರ ಬರುತ್ತದೆ ಎನ್ನುವುದನ್ನು ಪ್ರಾರಂಭದಲ್ಲೇ ಗ್ರಹಿಸುವುದಿಲ್ಲ.

ಮನುಷ್ಯನೂ ಸದಾ ಕಪ್ಪೆಯ ಮನಸ್ಥಿತಿಯ ರೀತಿಯಲ್ಲೇ ಎಲ್ಲ ಪರಿಸ್ಥಿತಿಗಳಲ್ಲೂ ಹಾಯಾ ಗಿಯೇ ಇರುತ್ತಾನೆ. ವಿವಿಧ ಹಂತಗಳಲ್ಲಿ ತನ್ನತ್ತ ನಿಧಾನವಾಗಿ ಬರುತ್ತಿರುವ ಬಹುದೊಡ್ಡ ಗಂಡಾಂತರಗಳನ್ನು ಪ್ರಾರಂಭಿಕ ಹಂತದಲ್ಲೇ ಗುರುತಿಸುವಲ್ಲಿ ವಿಫ‌ಲನಾಗಿ ಆ ಸಮಸ್ಯೆಯು ಬೃಹದಾಕಾರಕ್ಕೆ ಬೆಳೆದು ಅದು ಆತನ ಜೀವಕ್ಕೇ ಅಥವಾ ಆತನ ವ್ಯವಸ್ಥೆಗೇ ಕುತ್ತಾಗುತ್ತದೆ.

ಆದರೆ ಅದೇ ಸಮಸ್ಯೆಯನ್ನು ಸಮಸ್ಯೆ ಉದ್ಭವವಾಗುವ ಪ್ರಾರಂಭಿಕ ಹಂತದಲ್ಲೇ ಗುರುತಿಸಿ ಅದರಿಂದ ಹೊರಬರಲು ಪ್ರಯತ್ನಿಸಿದಾತ ಅಥವಾ ಪರಿಹರಿಸಿಕೊಂಡಾತ ಸಮಸ್ಯೆಯ ಸುಳಿಯಲ್ಲಿ ಸಿಲುಕಿ ಸಾಯಲಾರ. ಕಪ್ಪೆಯ ಕಥೆಯಂತೆ ಸಮಸ್ಯೆಯು ಬಂದಿದೆ ಆದರೆ ಅದು ಗಂಭೀರವಲ್ಲ ಎನ್ನುವ ಮನಃಸ್ಥಿತಿಗೆ ಯಾವಾಗ ಬಂದು ಬಿಡುತ್ತೇವೋ ಅಂತಹ ಸಂದರ್ಭದಲ್ಲಿ ಸಮಸ್ಯೆ ಗಂಭೀರ ಸ್ಥಿತಿಗೆ ತಲುಪಿ ಅದಕ್ಕೆ ಪರಿಹಾರವನ್ನು ಕಂಡುಕೊಳ್ಳಲು ಆಗದೆ ಅದರೊಳಗೇ ಸಿಲುಕಿ ಸಾಯುವ ಪರಿಸ್ಥಿತಿ ಬರುತ್ತದೆ. ಕುದಿಯುವ ನೀರಿ ನಲ್ಲಿ ಇರುವ ಕಪ್ಪೆಯ ಸ್ಥಿತಿಯ ಕಥೆಯನ್ನು ಸಾಮಾನ್ಯವಾಗಿ ಮನುಷ್ಯನ ಜೀವನದಲ್ಲಿ ಬಂದೊದಗುವ ವಿವಿಧ ಸನ್ನಿವೇಷಗಳು ಮತ್ತು ಅವುಗಳನ್ನು ಎದುರಿಸುವ ಗುಣಕ್ಕೆ ಉದಾಹರಣೆಯಾಗಿದೆ.

ಸಮಸ್ಯೆಗಳಿಗೆ ಹೊಂದಿಕೊಡು ಸಾಗುವಂತಹ ಗುಣವು ಅಭಿವೃದ್ಧಿಯ ಪಥದೆಡೆಗೆ ಸಾಗುವ ಮನೋಭಾವ ಇರುವ ವ್ಯಕ್ತಿಯ ದೃಷ್ಟಿಯಿಂದ ಒಳ್ಳೆಯದಲ್ಲ. ಸಮಸ್ಯೆ ಬರಬಹುದು ಎಂಬ ಸುಳಿವು ದೊರೆತ ತತ್‌ಕ್ಷಣ ಅದನ್ನು ಗುರುತಿಸಿ ಪರಿಹಾರ ಮಾಡಿಕೊಂಡರೆ ಬಾಳು ಬಂಗಾರ ಆಗುತ್ತದೆ. ನಿಧಾನವಾಗಿ ಬರುವ ಅಪಾಯಗಳಿಗೆ ಹೊಂದಿಕೊಡು ಹೋಗುವ ಗುಣವು ನಮ್ಮಲ್ಲೂ ಇದ್ದು, ನಿಧಾನವಾಗಿ ನಮ್ಮ ಅರಿವಿಗೇ ಬಾರದಂತೆ ಆಗುವ ಬದಲಾವಣೆಗಳಿಂದ ಅನಪೇಕ್ಷಿತ ಪರಿಣಾಮಗಳು ಆಗದಂತೆ ಎಚ್ಚರದಿಂದರಬೇಕು.

ಸಂತೋಷ್‌ ರಾವ್‌ ಪೆರ್ಮುಡ

ಬೆಳ್ತಂಗಡಿ

ಟಾಪ್ ನ್ಯೂಸ್

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

16-digital-arrest

Digital Arrest: ಡಿಜಿಟಲ್‌ ಅರೆಸ್ಟ್‌ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು

17-bus

Emotions: ಭಾವನೆಗಳ ಬಸ್‌ ನಿಲ್ದಾಣ

14-uv-fusion

Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ

12-uv-fusion

Success: ಯಶಸ್ವಿ ಜೀವನಕ್ಕೆ ಸೂತ್ರಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.