UV Fusion: ಸಂಭ್ರಮದ ಹಬ್ಬಕ್ಕೆ ಬಾಂಧವ್ಯವೇ ಬೆಸುಗೆ


Team Udayavani, Oct 30, 2024, 3:25 PM IST

10

ದೇಶದಲ್ಲಿ ನವರಾತ್ರಿ ಅಥವಾ ದಸರಾ ಹಬ್ಬಕ್ಕೆ ತನ್ನದೇ ಆದ ಮಹತ್ವ, ಪೌರಾಣಿಕ ಹಿನ್ನೆಲೆ ಇದೆ.

ದಸರಾ ಹಬ್ಬವನ್ನು ತುಂಬಾ ಉತ್ಸಾಹದಿಂದ ವಿಜೃಂಭಣೆಯಿಂದ ಆಚರಿಸುತ್ತಾರೆ.

ನವರಾತ್ರಿಯ ಕುರಿತು ಪುರಾಣಗಳಲ್ಲಿ ಹಲವು ಉಲ್ಲೇಖಗಳಿವೆ. ಹಲವು ಕಥೆಗಳಿವೆ. ನವರಾತ್ರಿಯಲ್ಲಿ ಚಾಮುಂಡೇಶ್ವರಿ / ದುರ್ಗದೇವಿಯು ಮಹಿಷಾಸುರ ಮರ್ಧಿನಿಯಾಗಿ ಮಹಿಷಾಸುರ ಎಂಬ ರಾಕ್ಷಸನನ್ನು ಸಂಹಾರ ಮಾಡಿದಳು. ನವರಾತ್ರಿಯೆಂದರೆ ಒಂಭತ್ತು ದಿನಗಳಿಗೆ ಸೀಮಿತವಾಗಿದ್ದರೂ ಹತ್ತನೇ ದಿನ ವಿಜಯದಶಮಿ. ಮಹಾದುರ್ಗೆ ರಾಕ್ಷಸರನ್ನು ಸಂಹರಿಸಿ ವಿಜಯವನ್ನು ಸಾಧಿಸಿದ ದಿನ.

ತ್ರೇತಾಯುಗದಲ್ಲಿ ಶ್ರೀರಾಮನು ರಾವಣನನ್ನು ಸಂಹಾರ ಮಾಡಿದನು. ಅದು ವಿಜಯದಶಮಿಯ ದಿನ ಎಂಬ ನಂಬಿಕೆ ಇದೆ. ದ್ವಾಪರಾಯುಗದಲ್ಲಿ ಪಾಂಡವರು ಒಂದು ವರ್ಷ ಅಜ್ಞಾತವಾಸ ಮಾಡುವಾಗ ತಮ್ಮ ಆಯುಧಗಳನ್ನು ಬನ್ನಿ ಮರದಲ್ಲಿ ಮುಚ್ಚಿಟ್ಟಿದ್ದರು. ದಶಮಿಯ ದಿನಕ್ಕೆ ಅಜ್ಞಾತವಾಸ ಮುಗಿದು, ಅವರು ಬನ್ನಿ ಮರದಿಂದ ತಮ್ಮ ಆಯುಧಗಳನ್ನು ವಾಪಸ್ಸು ಪಡೆದು ಕುರುಕ್ಷೇತ್ರ ಯುದ್ಧದಲ್ಲಿ ಕೌರವರನ್ನು ಸೋಲಿಸಿ ವಿಜಯಸಾಧಿಸಿದರು ಎಂದು ಹೇಳುತ್ತಾರೆ. ಹೀಗಾಗಿ ಈ ದಶಮಿಯನ್ನು ವಿಜಯದಶಮಿ ಎಂದು ಕರೆಯುತ್ತಾರೆ ಆದ್ದರಿಂದ ಇವರೆಲ್ಲರ ವಿಜಯದ ಸಂಕೇತವಾಗಿ ಈ ದಿನವನ್ನು ವಿಜಯದಶಮಿ ಎಂದು ಆಚರಿಸುವುದು ಸಂಪ್ರದಾಯ.

ಆಧ್ಯಾತ್ಮಿಕ ಮಹತ್ವ

ಮಹಿಷಾಸುರನ ನಾಶಕ್ಕಾಗಿ ಅವತಾರ ತಾಳಿದ ಶ್ರೀ ದೇವಿಯ ಉತ್ಸವ ಎಂದರೆ ನವರಾತ್ರಿ. ನವರಾತ್ರಿಯಲ್ಲಿ ಶ್ರೀ ದೇವಿಯ ಉಪಾಸನೆಯನ್ನು ಭಕ್ತಿ ಶ್ರದ್ಧೆಯಿಟ್ಟು ಮಾಡುವುದರಿಂದ ದೇವಿತಣ್ತೀದ ಲಾಭವಾಗುತ್ತದೆ. ಹಿಂದೂ ಧರ್ಮದಲ್ಲಿ ಭಗವತೀ ದೇವಿಯ ವಿಶೇಷ ಆರಾಧನೆಯನ್ನು ವರ್ಷದಲ್ಲಿ ವಾಸಂತಿಕ ನವರಾತ್ರಿ ಮತ್ತು ಶಾರದೀಯ ನವರಾತ್ರಿ ಈ ಎರಡು ಸಮಯದಲ್ಲಿ ಮಾಡುತ್ತಾರೆ. ಶರದ್‌ ಋತುವಿನಲ್ಲಿನ ಪೂಜೆಗೆ ಅಕಾಲ ಪೂಜೆ ಮತ್ತು ವಾಸಂತಿಕ ಪೂಜೆಗೆ ಸಕಾಲ ಪೂಜೆಯೆಂದು ಹೇಳುತ್ತಾರೆ. ಶರದ್‌ ಋತುವಿನಲ್ಲಿ ದೇವರಾತ್ರಿಗಳಿರುತ್ತವೆ; ಆದುದರಿಂದ ಈ ಕಾಲದಲ್ಲಿನ ಪೂಜೆಗೆ ಅಕಾಲ ಪೂಜೆಯೆಂದು ಹೇಳುತ್ತಾರೆ. ತಾಂತ್ರಿಕ ಸಾಧಕರ ದೃಷ್ಟಿಯಲ್ಲಿ ಈ ರಾತ್ರಿಗಳು ಮಹತ್ವಪೂರ್ಣವಾಗಿರುತ್ತವೆ. ಹೀಗೆ ಬಹಳಷ್ಟು ರೀತಿಯ ರಾತ್ರಿಗಳಿರುತ್ತವೆ. ಉದಾ. ಕಾಲರಾತ್ರಿ, ಶಿವರಾತ್ರಿ, ಮೋಹರಾತ್ರಿ, ವೀರರಾತ್ರಿ, ದಿವ್ಯರಾತ್ರಿ, ದೇವರಾತ್ರಿ ಇತ್ಯಾದಿ. ಇವುಗಳಲ್ಲಿ ಭಗವತಿಯನ್ನು ಜಾಗೃತಗೊಳಿಸಬೇಕಾಗುತ್ತದೆ; ಆದರೆ ವಾಸಂತಿಕ ಪೂಜೆಯಲ್ಲಿ ಜಾಗೃತಗೊಳಿಸುವ ಆವಶ್ಯಕತಯಿರುವುದಿಲ್ಲ. ಒಂದು ಅಭಿಮತಕ್ಕನುಸಾರ ನವರಾತ್ರಿಯಲ್ಲಿನ ಮೊದಲ ಮೂರು ದಿನಗಳಂದು ತಮೋಗುಣವನ್ನು ಕಡಿಮೆ ಮಾಡಲು ತಮೋಗುಣಿ ಮಹಾಕಾಳಿಯ, ನಂತರದ ಮೂರು ದಿನಗಳಂದು ರಜೋಗುಣವನ್ನು ವೃದ್ಧಿಸಲು ಮಹಾಕ್ಷ್ಮೀಯ ಮತ್ತು ಕೊನೆಯ ಮೂರು ದಿನಗಳಂದು ಸಾಧನೆಯನ್ನು ತೀವ್ರವಾಗಿ ಮಾಡಲು ಸಣ್ತೀಗುಣಿ ಮಹಾಸರಸ್ವತಿಯ ಪೂಜೆಯನ್ನು ಮಾಡುತ್ತಾರೆ. ಹಾಗಾದರೆ ಬನ್ನಿ, ನಾವು ಈ ದಸರಾ ಹಬ್ಬದ ಆಧ್ಯಾತ್ಮಿಕ ಹಿನ್ನೆಲೆಯನ್ನು ತಿಳಿದು, ಪರಸ್ಪರರಲ್ಲಿ ಸ್ನೇಹ ಆತ್ಮೀಯತೆಯನ್ನು ಬೆಳೆಸಿ, ಈ ಸಂಭ್ರಮದ ಹಬ್ಬವನ್ನು ಬಾಂಧವ್ಯದ ಬಂಧನದಿಂದ ವಿಶ್ವಶಾಂತಿಯ ಉಗಮಕ್ಕೆ ನಾಂದಿಯನ್ನು ಹಾಡಿ ಉತ್ಸಾಹದಿಂದ ಆಚರಿಸೋಣ.

- ಸಂಪೂ ಕಿಚಡಿ

ಕಲಘಟಗಿ ತಾಲೂಕು ಧಾರವಾಡ ಜಿಲ್ಲೆ

ಟಾಪ್ ನ್ಯೂಸ್

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

Border Gavaskar Trophy: India ready for Kangaroo Challenge; What is the team’s strength?

Border Gavaskar Trophy: ಕಾಂಗರೂ ಚಾಲೆಂಜ್‌ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

isrel netanyahu

Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-uv-fusion

UV Fusion: ಒಂದು ಪುಟ್ಟ ಸಹಾಯ ಒಬ್ಬರ ಬದುಕನ್ನೇ ಬದಲಾಯಿಸಬಹುದು…

14-uv-fusion

UV Fusion: ಮೊದಲ ಬಾರಿ ಲೇಖನಿ ಹಿಡಿದ ಅನುಭವ

13–uv-fusion

UV Fusion: ಹೃದಯದಲ್ಲಿ ಬಾಲ್ಯದ ಮಿಡಿತ

12-uv-fusion

UV Fusion: ಇನ್ನಾದರು ಎಚ್ಚೆತ್ತುಕೊಂಡು ಕನ್ನಡ ಶಾಲೆ ರಕ್ಷಿಸಿ

11-uv-fusion

UV Fusion: ಕುಟುಂಬ ಎಂಬ ಬೆಚ್ಚಗಿನ ರಕ್ಷಾ ಕವಚ

MUST WATCH

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

ಹೊಸ ಸೇರ್ಪಡೆ

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Belagavi: Let there be a full discussion of issues in the plenary session: Dr. Prabhakar Kore

Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್‌ ಕೋರೆ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.