ಮಕ್ಕಳಿಗಾಗಿ ಆಸ್ತಿ ಮಾಡಬೇಡಿ ಮಕ್ಕಳನ್ನೇ ಆಸ್ತಿಯಾಗಿಸಿ


Team Udayavani, Jun 12, 2020, 3:42 PM IST

ಮಕ್ಕಳಿಗಾಗಿ ಆಸ್ತಿ ಮಾಡಬೇಡಿ ಮಕ್ಕಳನ್ನೇ ಆಸ್ತಿಯಾಗಿಸಿ

ಸಾಂದರ್ಭಿಕ ಚಿತ್ರ

ಹೆತ್ತವರು ತುಂಬಾ ಪ್ರೀತಿಯಿಂದ ಸಾಕುವ ಮಕ್ಕಳು ಕೆಲವೊಮ್ಮೆ ಅವರಿಗೆ ಮುಳುವಾಗಿ ಬಿಡುತ್ತಾರೆ. ಇಂದಿನ ಆಧುನಿಕ ಯುಗದಲ್ಲಿ ಮನುಷ್ಯ ಸ್ವಾರ್ಥ ಮನೋಭಾವವೇ ಇದಕ್ಕೆ ಕಾರಣ. ಹೆತ್ತವರು ಮಕ್ಕಳ ಮೇಲಿರುವ ಕಾಳಜಿಯಿಂದ ಬೆಳೆಸಿ ಮುಂದೆ ನಮಗೆ ವಯಸ್ಸಾದಾಗ ನೋಡಿಕೊಳ್ಳುತ್ತಾರೆ ಎಂಬ ಸಹಜ ಆಕಾಂಕ್ಷೆ ಇರುತ್ತದೆ. ಆದರೆ ಮಕ್ಕಳು ಸ್ವಾರ್ಥಿಗಳಾಗಿ ಹೆತ್ತವರನ್ನು ಬೀದಿಗೆ ತಳ್ಳುವ ಅದೆಷ್ಟೋ ಸಂಗತಿಗಳನ್ನು ನೋಡಿದ್ದೇವೆ, ಕೇಳಿದ್ದೇವೆ.

ತಂದೆ ತಾಯಿಗಳು ತಮ್ಮ ಮಕ್ಕಳ ಭವಿಷ್ಯಕ್ಕಾಗಿ ಅದೆಷ್ಟೋ ಕನಸುಗಳನ್ನು ಹೆಣೆದಿರುತ್ತಾರೆ. ವಿದ್ಯಾಭ್ಯಾಸ ವಿಚಾ ರದಲ್ಲಿ ತಂದೆ-ತಾಯಿ ತೆಗೆದುಕೊಳ್ಳುವ ನಿರ್ಧಾರಗಳು ಮಕ್ಕಳ ಜೀವನವನ್ನೇ ರೂಪಿ ಸುತ್ತವೆ. ಅದೆಷ್ಟೋ ತಂದೆ ತಾಯಂದಿರು ತಮ್ಮ ಹೊಟ್ಟೆಗೆ ಅನ್ನ ಇಲ್ಲದಿದ್ದರೂ ಮಕ್ಕಳ ಹೊಟ್ಟೆಗೆ ಅನ್ನ ನೀಡಬೇಕೆಂದು ಶ್ರಮಿಸುತ್ತಾರೆ. ಎಲ್ಲೋ ಕೇಳಿದ ಮಾತು. “ಜೀವನದಲ್ಲಿ ಆಸ್ತಿ ಮಾಡಿ. ಆದರೆ ನಿಮ್ಮ ಕೊನೆಗಾಲದಲ್ಲಿ ನಿಮ್ಮ ಮಕ್ಕಳು ಡಾಕ್ಟರ್‌ಗೆ ಫೋನ್‌ ಮಾಡುವ ಬದಲು, ಲಾಯರ್‌ಗೆ ಫೋನ್‌ ಮಾಡುವಷ್ಟು ಆಸ್ತಿ ಮಾಡಬೇಡಿ.’ ಇದು ಸತ್ಯ.

ಮಕ್ಕಳ ವಿದ್ಯಾಭ್ಯಾಸದಿಂದ ಹಿಡಿದು ಕೆಲಸ ಸಿಗುವವರೆಗೂ ಬೆನ್ನೆಲುಬಾಗಿ ನಿಲ್ಲುವ ಹೆತ್ತವರು ಅದೆಷ್ಟೋ ನೋವನ್ನು ಅನುಭವಿಸಿ, ಆ ನೋವು ನಮ್ಮ ಮಕ್ಕಳಿಗೆ ಬಾರದಿರಲಿ ಅನ್ನುವ ಉದ್ದೇಶದಿಂದ ಹಗಲು ರಾತ್ರಿಯೆನ್ನದೆ ಕಷ್ಟ ಪಡುತ್ತಾರೆ. ಆದರೆ ನಾವು ಅಮ್ಮ ನೀನು ಮಾಡಿದ ಅಡುಗೆ ಚೆನ್ನಾಗಿಲ್ಲ, ಅಪ್ಪ ನೀನು ತಂದ ಬಟ್ಟೆ ಚೆನ್ನಾಗಿಲ್ಲ, ಅಂತ ಸಣ್ಣ ಪುಟ್ಟ ವಿಚಾರಕ್ಕೆ ಹೆತ್ತವರನ್ನು ದೂರುತ್ತೇವೆ.

ಪರೀಕ್ಷೆ ಸಮಯದಲ್ಲಿ ಮಕ್ಕಳು ನಿದ್ದೆ ಬಿಡುವುಕ್ಕಿಂತ ಹೆಚ್ಚು ಹೆತ್ತವರು ನಿದ್ದೆ ಬಿಡುತ್ತಾರೆ. ಪರೀಕ್ಷೆ ಫ‌ಲಿ ತಾಂಶ ದಿನದಂದು ಮಕ್ಕಳಿಗಿಂತ ಹೆಚ್ಚು ಹೆತ್ತವರು ಆತಂಕಪಡುತ್ತಾರೆ. ಇಷ್ಟೆಲ್ಲಾ ಕರುಣೆ ತೋರಿದ ಹೆತ್ತವರನ್ನ ಕೊನೆಗಾಲದಲ್ಲಿ ಆಶ್ರಮಕ್ಕೆ ಸೇರಿಸುವ ಮಕ್ಕಳಿದ್ದಾರೆ. ಮಕ್ಕಳ ಬದುಕನ್ನು ರೂಪಿಸುವ ಹೆತ್ತವರನ್ನು ಸ್ಮರಿಸೋಣ. ಹೆತ್ತವರು ಮಕ್ಕಳಿಗಾಗಿ ಆಸ್ತಿ ಮಾಡದೆ ಮಕ್ಕಳನ್ನೇ ಆಸ್ತಿಯಾಗಿಸಿ… ಜೀವನವನ್ನು ಹಸನಾಗಿಸೋಣ.

ಭರತ್‌ ಕುಮಾರ್‌ ಶೆಟ್ಟಿ,  ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರ, ತುಮಕೂರು.

ಟಾಪ್ ನ್ಯೂಸ್

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

16-digital-arrest

Digital Arrest: ಡಿಜಿಟಲ್‌ ಅರೆಸ್ಟ್‌ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು

17-bus

Emotions: ಭಾವನೆಗಳ ಬಸ್‌ ನಿಲ್ದಾಣ

14-uv-fusion

Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ

12-uv-fusion

Success: ಯಶಸ್ವಿ ಜೀವನಕ್ಕೆ ಸೂತ್ರಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.