ಪರಿಸರ ರಕ್ಷಣೆ ನಮ್ಮ ಹೊಣೆ
Team Udayavani, Jun 5, 2020, 3:15 PM IST
ಸಾಂದರ್ಭಿಕ ಚಿತ್ರ
ಪ್ರತೀ ವರ್ಷವೂ ಜೂ. 5 ರಂದು ವಿಶ್ವ ಪರಿಸರ ದಿನವನ್ನು ಆಚರಿಸುತ್ತೇವೆ. ನಾವು ನಮ್ಮ ಪರಿಸರದ ಬಗ್ಗೆ ತಿಳಿಯುವ ಅದರ ಮಹತ್ವ ಅರಿಯುವ ಮತ್ತು ಇಂದು ಪರಿಸರಕ್ಕೆ ಆಗುತ್ತಿರುವ ಹಾನಿಯನ್ನು ಅರಿತು ಅದರ ಸಂರಕ್ಷಣೆಯ ಬಗ್ಗೆಯೂ ಆಲೋಚಿಸಬೇಕಾದ ಮಹತ್ವವಾದ ದಿನ ಇದು. ಮಾನವ ಪರಿಸರದ ಶಿಶು. ಪರಿಸರವಿಲ್ಲದೆ ಮಾನವನ ಜೀವನಕ್ಕೆ ಯಾವುದೇ ಬೆಲೆಯಿರುವುದಿಲ್ಲ. ಹಾಗಾಗಿ ಪ್ರತಿಯೊಬ್ಬರೂ ಪರಿಸರದ ಬಗ್ಗೆ ಕಾಳಜಿ ವಹಿಸಿಕೊಳ್ಳುವ ಆವಶ್ಯಕತೆಯಿದೆ.
ಆದರೆ ಪ್ರಸ್ತುತ ಜಗತ್ತಿನಲ್ಲಿ ಮಾನವನು ಅಭಿವೃದ್ಧಿ ಎಂಬ ಹೆಸರಿನಲ್ಲಿ ಪರಿಸರವನ್ನು ನಾಶ ಮಾಡುತ್ತಿದ್ದಾನೆ. ಇದರಿಂದ ಪ್ರಾಣಿಗಳ ಜೀವ ರಕ್ಷಣೆಗೆ ಹಾನಿಯುಂಟಾಗುತ್ತಿದೆ. ಜಲಮಾಲಿನ್ಯ, ವಾಯುಮಾಲಿನ್ಯ, ಮಣ್ಣಿನ ಮಾಲಿನ್ಯ, ಅರಣ್ಯನಾಶ ಹೀಗೆ ಹತ್ತು ಹಲವು ಸಮಸ್ಯೆಗಳು ಇಂದು ಪರಿಸರದಲ್ಲಿ ಉಂಟಾಗಿದೆ. ಇದಕ್ಕೆಲ್ಲ ಮೂಲ ಕಾರಣ ಅಧುನೀಕತೆ, ನಗರಗಳ ಬೆಳವಣಿಗೆ, ಹೆಚ್ಚುತ್ತಿರುವ ಕೈಗಾರಿಕೆಗಳು, ವಿಜ್ಞಾನ -ತಂತ್ರಜ್ಞಾನದ ಅಭಿವೃದ್ಧಿ ಎಂಬ ಹಲವು ಹೆಸರಿನಲ್ಲಿ ಮಾನವನು ಮಾಡುವ ಪರಿಸರ ನಾಶ. ಪರಿಸರವನ್ನು ರಕ್ಷಿಸುವ, ಸಂರಕ್ಷಿಸುವ ಕರ್ತವ್ಯ ಪ್ರತಿಯೊಬ್ಬರದ್ದೂ ಆಗಿದ್ದು ಈ ಕರ್ತವ್ಯವನ್ನು ನಮಗೆಲ್ಲರಿಗೂ ನೆನಪಿಸುವ ದಿನವಾಗಿದೆ.
-ಸ್ವಾತಿ ಶಿರ್ಲಾಲು
ಎಂಪಿಎಂ ಕಾಲೇಜು, ಕಾರ್ಕಳ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು
Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?
Minister Sudhakar: ಸೀಟ್ ಬ್ಲಾಕಿಂಗ್ ದಂಧೆ ವಿರುದ್ಧ ಕ್ರಿಮಿನಲ್ ಕೇಸ್ ಅಸ್ತ್ರ
Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ
Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್: ಮಹಾಯುತೀಲಿ ಬಿರುಕು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.