ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆಗಾರಿಕೆ


Team Udayavani, Jun 5, 2020, 6:15 PM IST

ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆಗಾರಿಕೆ

ಯುವ ಜನರಿಗೆ ಪರಿಸರದ ಕಾಳಜಿ ಮೂಡಿಸಲು ಆಚರಿಸುವ ದಿನವೇ ವಿಶ್ವ ಪರಿಸರ ದಿನ. ಜಾಗತಿಕ ಮಟ್ಟದಲ್ಲಿ ಸುಮಾರು ನೂರಕ್ಕಿಂತ ಹೆಚ್ಚಿನ ರಾಷ್ಟ್ರಗಳು ಜೂನ್‌ ಐದನ್ನು ಪರಿಸರ ದಿನವನ್ನಾಗಿ ಆಚರಿಸುವುದರಿಂದಲೇ ಇದು ವಿಶ್ವ ಪರಿಸರ ದಿನಾಚರಣೆ ಎನಿಸಿಕೊಂಡಿದೆ. ಈ ಸಂದರ್ಭದಲ್ಲಿ ಪರಿಸರದ ಶಿಶುಗಳೆನಿಸಿದ ನಮ್ಮ ಮೇಲೆ ಪರಿಸರ ಸಂರಕ್ಷಣೆಯ ಜವಾಬ್ದಾರಿ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ.

ಇಂದಿನ ಪರಿಸರ ಮಾಲಿನ್ಯದ ಗೂಡಾಗಿದ್ದು, ನಮ್ಮ ಇರುವಿಕೆಗೆ ಅರ್ಥ ನೀಡಿದ ಪರಿಸರ ಮಾತೆಯನ್ನು ನಾವು , ನಮ್ಮ ಕಾರ್ಯಗಳಿಂದ ಕಲುಷಿತಗೊಳಿಸಿ, ಅದರ ದುಷ್ಪರಿಣಾಮಗಳನ್ನು ಈಗಾಗಲೇ ಎದುರಿಸುತ್ತಿದ್ದೇವೆ. ವಾಯು ಮಾಲಿನ್ಯ, ಜಲ ಮಾಲಿನ್ಯ, ಅಧಿಕ ಉಷ್ಣಾಂಶ, ಮಣ್ಣಿನ ಮಾಲಿನ್ಯ, ಅರಣ್ಯ ನಾಶ ಹೀಗೆ ಒಂದೇ, ಎರಡೇ ಪರಿಸರದಲ್ಲಿ ಇಂದು ಉಂಟಾಗಿರುವ ಏರುಪೇರುಗಳು. ಈ ಏರುಪೇರುಗಳಿಗೆ ಕಾರಣ, ಅಭಿವೃದ್ಧಿ ಹೆಸರಿನಲ್ಲಿ ನಾವು ಪರಿಸರದ ಮೇಲೆ ಮಾಡಿರುವ ದೌರ್ಜನ್ಯದ ಫ‌ಲವಾಗಿದ್ದು, ಅದರ ಪರಿಣಾಮವಾಗಿ ಹೃದಯ ಸಂಬಂಧಿ, ಉಸಿರಾಟ ಸಂಬಂಧಿ, ಅಪೌಷ್ಟಿಕತೆಯಂತಹ ಅನೇಕ ದುಷ್ಪರಿಣಾಮ ನಾವು ಎದುರಿಸುತ್ತಿದ್ದೇವೆ.

ಕೇವಲ ವರ್ಷಕ್ಕೆ ಒಂದು ದಿನದ ಪರಿಸರ ರಕ್ಷಣೆ ಎಂಬುದು ಸೀಮಿತವಾಗಬಾರದು. ಪ್ರತಿ ದಿನವು ನಮಗೆ ಪರಿಸರ ದಿನವಾಗಬೇಕು. ಏಕೆಂದರೆ ಪರಿಸರ ನಮ್ಮ ಜೀವನದ ಅವಿಭಾಜ್ಯ ಅಂಗವಾಗಿದೆ. ಪರಿಸರವಿಲ್ಲದೆ ಮಾನವ ಬದುಕುವುದಕ್ಕೆ ಸಾಧ್ಯವೇ ಇಲ್ಲ ಎಂಬ ನಿತ್ಯ ಸತ್ಯವನ್ನು ನಾವಿಂದು ನಮ್ಮ ಜೀವನದ ಗುರಿಯನ್ನಾಗಿಸಿಕೊಂಡು ಪರಿಸರ ಸಂರಕ್ಷಣೆಯತ್ತ ನಾವೆಲ್ಲರೂ ಸಾಗಬೇಕು ಎಂಬ ಪರಿಸ್ಥಿತಿ ಸೃಷ್ಟಿಯಾಗಿದೆ.

ಪರಿಸರ ಎಂಬ ಜೀವಜಾಲದಲ್ಲಿ ಜೀವಿಗಳು ಒಂದನ್ನೊಂದು ರೂಪದಲ್ಲಿ ಅಂದರೆ ಪ್ರತ್ಯಕ್ಷ ಅಥವ ಪರೋಕ್ಷವಾಗಿ ಅವಲಂಬಿಸಿ ಪರಸ್ಪರ ಪ್ರಭಾವಿಸುತ್ತ ಇರುತ್ತಿದೆವೆ. ಈ ರೀತಿಯ ಪರಸ್ಪರ ಅವಲಂಬನೆಯು ಸಕಲ ಜೀವಿಗಳನ್ನೂ ಆಹಾರ ಸರಪಳಿಯ ರೂಪದಲ್ಲಿ ಬೆಸೆದು, ಅವುಗಳ ಪರಸ್ಪರ ಪ್ರಭಾವಗಳನ್ನು ಇನ್ನು ನಿಕಟಗೊಳಿಸಿ ಜೀವಜಾಲವನ್ನಾಗಿಸಿದೆ.

ಆದರ್ಶ ಪ್ರೇಮಿಗಳಾದ ಸಾಲುಮರದ ತಿಮ್ಮಕ್ಕ ಅವರು 248 ಸಸಿಗಳನ್ನು ನೆಟ್ಟು ಇಂದಿಗೆ ಅವುಗಳ ಮೌಲ್ಯವು ಸುಮಾರು 15 ಲಕ್ಷ ರೂ.ಗಳೆಂದು ಅಂದಾಜು ಮಾಡಲಾಗಿದೆ. ಈ ಮರಗಳ ನಿರ್ವಹಣೆಯನ್ನು ಸರಕಾರ ವಹಿಸಿಕೊಂಡಿದ್ದ. ಇನ್ನೂ ತುಳಸಿಗೌಡ ಇವರಿಗೆ ಯಾವುದೇ ಔಪಚಾರಿಕ ಶಿಕ್ಷಣ ಇಲ್ಲದೆ ಇಳಿ ವಯಸ್ಸಿನಲ್ಲೂ ಲಕ್ಷಾಂತರ ಸಸಿಗಳನ್ನು ನೆಡುವುದರ ಮೂಲಕ ಪರಿಸರ ಪ್ರೀತಿಯನ್ನು ತೋರುತ್ತಿದ್ದಾರೆ. ಇವರೂ ಅರಣ್ಯ ವಿಶ್ವಕೋಶ ಎಂದೆ ಪ್ರಸಿದ್ಧಿ ಪಡೆಯುತ್ತಿದ್ದಾರೆ. ಇವರಿಗೆ 72 ವರ್ಷವಾದರೂ ಈಗಲೂ ಪರಿಸರ ಕಾಳಜಿಯನ್ನು ತೋರುತ್ತೀರುವ ಇವರೂ ಯಾವ ಸಮಯಕ್ಕೆ ಯಾವ ಸಸಿಯನ್ನು ನೆಡಬೇಕು, ಯಾವ ಸಂದರ್ಭದಲ್ಲಿ ಹೂ, ಮತ್ತು ಹಣ್ಣು ಬಿಡುತ್ತವೆ ಎಂಬುದು ಇವರ ಜ್ಞಾನ ಭಂಡಾರದಲ್ಲಿದೆ ಎಂದು ಹೇಳಬಹುದು.

ಮಾನವ ಜೀವಿಯೂ ಪ್ರಕೃತಿಯ ನಿಯಮಗಳನ್ನು ಪಾಲಿಸಿದ್ದರೆ ಬಹುಷ್ಯ ಇಂದು ಯಾವುದೇ ಸಮಸ್ಯೆಗಳು ಬರುತ್ತಿರಲಿಲ್ಲ. ಒಂದು ಹನಿ ನೀರಿಗಾಗಿ ಇಂದು ಪರದಾಡುವಂತಾಗಿದೆ ಎಂದರೆ ಅದಕ್ಕೆ ಹೊಣೆ ಯಾರು? ನಾವೆ ಅಲ್ಲವೇ! ಈ ಬಗ್ಗೆ ನಾವು ಚಿಂತಿಸಿ ಸೂಕ್ತ ಕ್ರಮವನ್ನು ಕೈಗೊಂಡಾಗ ಮಾತ್ರ ಪರಿಸರ ಸಂರಕ್ಷಣೆ ಮಾಡುವುದಕ್ಕೆ ಸಾಧ್ಯ.

ನಿಸರ್ಗ ಸಿ.ಎ., ಚೀರನಹಳ್ಳಿ

ಟಾಪ್ ನ್ಯೂಸ್

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Qatar: ಕತಾರ್‌ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ

Qatar: ಕತಾರ್‌ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ

priyank-kharge

Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

1-fish

Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

kejriwal-2

Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

16-digital-arrest

Digital Arrest: ಡಿಜಿಟಲ್‌ ಅರೆಸ್ಟ್‌ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು

17-bus

Emotions: ಭಾವನೆಗಳ ಬಸ್‌ ನಿಲ್ದಾಣ

14-uv-fusion

Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ

12-uv-fusion

Success: ಯಶಸ್ವಿ ಜೀವನಕ್ಕೆ ಸೂತ್ರಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Qatar: ಕತಾರ್‌ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ

Qatar: ಕತಾರ್‌ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ

priyank-kharge

Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

1-neemo

ShivaRajkumar ಮನೆಯ ಮುದ್ದಿನ ಶ್ವಾನ ನೀಮೋ ಇನ್ನಿಲ್ಲ: ಭಾವನಾತ್ಮಕ ಪತ್ರ ಬರೆದ ಗೀತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.