Achievement: ಸಾಧಿಸುವ ಛಲವೊಂದಿದ್ದರೆ ಸೋಲೆಂಬುದು ಅಂತ್ಯವಲ್ಲ


Team Udayavani, Aug 31, 2024, 4:15 PM IST

16-uv-fusion

ಈ ಜಗತ್ತಿನಲ್ಲಿ ಪ್ರತಿಯೊಬ್ಬರಿಗೂ ಕನಸುಗಳನ್ನು ಕಾಣುವ ಹಕ್ಕಿದೆ. ಹಾಗೆಯೇ ವಿದ್ಯಾರ್ಥಿ ಯಾದವನು ತಮ್ಮ ಜೀವನದಲ್ಲಿ ಬಲಿಷ್ಠವಾದ ಕನಸನ್ನು  ಕಾಣುತ್ತಾ ಮುಂದೆ ಸಾಗಬೇಕು. ಕನಸು ಕಂಡರೆ ಸಾಲದು ಅದನ್ನು ನನಸು ಮಾಡಲು ಕಠಿನ ಪರಿಶ್ರಮ ಪಡಬೇಕು. ಪ್ರಯತ್ನವಿಲ್ಲದಿದ್ದರೆ ಯಾವುದನ್ನು ಕೂಡ ಸಾಧಿಸಲು ಸಾಧ್ಯವಿಲ್ಲ.

ಕನಸು ನನಸು ಮಾಡುವ ಹಾದಿಯಲ್ಲಿ ಅನೇಕ ರೀತಿಯ ಸವಾಲುಗಳು ಎದುರಾಗಬಹುದು. ಉದಾಹರಣೆಗೆ ಇತ್ತೀಚಿಗೆ ನಾವು ನೋಡುವ, ಕೇಳುವ ಘಟನೆಯೆಂದರೆ ವಿದ್ಯಾರ್ಥಿಯು ಪರೀಕ್ಷೆಯಲ್ಲಿ ಕಡಿಮೆ ಅಂಕಗಳು ಬಂತೆಂದು ಆತ್ಮಹತ್ಯೆ ಮಾಡಿಕೊಳ್ಳುವುದು. ಇದು ಒಬ್ಬ ಉತ್ತಮ ವಿದ್ಯಾರ್ಥಿಯಾದವನ ಲಕ್ಷಣವಲ್ಲ. ಇನ್ನೂ ಅನೇಕ ಅವಕಾಶಗಳಿರುತ್ತವೆ. ಅವುಗಳ ಕಡೆ ಯೋಚಿಸದೇ ಕೇವಲ ಕಡಿಮೆ ಅಂಕ ಬಂತು ಅಲ್ಲಿಗೆ ನನ್ನ ಜೀವನವೇ ಮುಗಿಯಿತೆಂದು ಆತ್ಮಹತ್ಯೆ ಮಾಡಿಕೊಳ್ಳುವುದು ಅತೀ ದೊಡ್ಡ ತಪ್ಪು.

ಯಾಕೆಂದರೆ “ಸೋಲೇ ಗೆಲುವಿನ ಮೆಟ್ಟಿಲು’ ಎಂಬ ಮಾತಿನಂತೆ ಇಲ್ಲಿ ಕಡಿಮೆ ಅಂಕ ಬಂದದ್ದು ಸೋಲಲ್ಲ ಅದು ಗುರಿಯನ್ನು ತಲುಪಲು ಇನ್ನೊಂದು ಅವಕಾಶ ಎಂದು ಭಾವಿಸಿ ವಿದ್ಯಾರ್ಥಿ ಮುನ್ನಡೆಯಬೇಕು. ಆಗ ಆತ ತನ್ನ ಕನಸನ್ನು ನನಸು ಮಾಡಲು ಸಾಧ್ಯವಾಗುತ್ತದೆ. ಆತ್ಮಹತ್ಯೆಯೇ ಸೋಲಿಗೆ ಪರಿಹಾರ ಎಂದುಕೊಳ್ಳುವುದು ತಪ್ಪು.

ಯಾಕೆಂದರೆ ಆತ್ಮಹತ್ಯೆ ಮಾಡಿಕೊಂಡರೆ ಮುಂದೆ ಕನಸನ್ನು ನನಸು ಮಾಡಲು ಯಾವ ಅವಕಾಶವೂ ದೊರೆಯುವುದಿಲ್ಲ. ಸ್ವಾಮಿ ವಿವೇಕಾನಂದರೇ ಹೇಳಿರುವಂತೆ “ಏಳಿ ಏದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ’ ಅಂದರೆ ಸೋತೆ ಎಂದು ಭಾವಿಸಿ, ನನ್ನಿಂದ ಸಾಧ್ಯವಿಲ್ಲ ಎಂದು ಕುಳಿತುಕೊಳ್ಳುವ ಬದಲು  ನನ್ನಿಂದ ಅಸಾಧ್ಯವಾದದ್ದು ಯಾವುದು ಇಲ್ಲ ಎಲ್ಲವೂ ಸಾಧ್ಯ ಎಂಬ ಛಲವನ್ನು ಇಟ್ಟುಕೊಂಡು ಮುಂದೆ ಸಾಗಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ. ಆದ್ದರಿಂದ ವಿದ್ಯಾರ್ಥಿಗಳಾದ ನಾವು ನಮ್ಮ ಅಮೂಲ್ಯವಾದ ಜೀವನವನ್ನು ಕೇವಲ ಒಂದು ನಕರಾತ್ಮಕ ಯೋಚನೆಯಿಂದ ಹಾಳುಮಾಡಿಕೊಳ್ಳುವುದಕ್ಕಿಂತ ಸಕಾರಾತ್ಮಕವಾಗಿ ಯೋಚನೆ ಮಾಡಿ ಪ್ರಯತ್ನ ಪಟ್ಟರೆ ಜೀವನದಲ್ಲಿ ನಮ್ಮ ಗುರಿಯನ್ನು ತಲುಪಬಹುದು.

-ದೀಪ್ತಿ ಕೋಟ್ಯಾನ್‌

ಚಾರ್ಮಾಡಿ

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

16

Uv Fusion: ಪೆನ್ನಿಗೊಂದು ಕಥೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.