ನಾಡುಕಂಡ ಶ್ರೇಷ್ಠ ಕವಿ ಡಾ| ಸಿದ್ದಲಿಂಗಯ್ಯ


Team Udayavani, Jul 3, 2021, 3:51 PM IST

ನಾಡುಕಂಡ ಶ್ರೇಷ್ಠ ಕವಿ ಡಾ| ಸಿದ್ದಲಿಂಗಯ್ಯ

ಕನ್ನಡ ನಾಡಿನ ಹಿರಿಯ ಸಾಹಿತಿಗಳಲ್ಲೊಬ್ಬರಾಗಿದ್ದ ಸರಳ ಸಜ್ಜನಿಕೆಯ ಡಾ| ಸಿದ್ಧಲಿಂಗಯ್ಯ ಮೂರ್ತರಾದರೂ ಅಮೂರ್ತರು.  ಹೊಡಿಯಿರ್ಲಾ, ಬಡಿಯಿರ್ಲಾ ಎಂಬುದನ್ನು ಕೇವಲ ಕೃತಿಗಷ್ಟೇ ಸೀಮಿತವಾಗಿರಿಸಿ ಸರಳವಾಗಿ ಮತ್ತೂಬ್ಬರಿಗೆ ಮಾದರಿಯಾಗಿ ಬದುಕಿದ ಕವಿ ಸಿದ್ದಲಿಂಗಯ್ಯಅವರು.

ಸಿದ್ದಲಿಂಗಯ್ಯ ಅವರು 1954ರ ಫೆಬ್ರವರಿ 3ರಂದು ದೇವಯ್ಯ ಮತ್ತು ವೆಂಕಟಮ್ಮನವರ ಪುತ್ರರಾಗಿ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಮಂಚನಬೆಲೆಯಲ್ಲಿ ಜನಿಸಿದರು.  ಅವರು  1974ರಲ್ಲಿ ಬೆಂಗಳೂರಿನ ಸರಕಾರಿ ಕಲಾಕಾಲೇಜಿನಿಂದ ಬಿ.ಎ. ಆನರ್ಸ್‌ (ಐಚ್ಛಿಕ ಕನ್ನಡ) ಪದವಿಯನ್ನು ಪಡೆದರಲ್ಲದೆ, 1976ರಲ್ಲಿ ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಪ್ರೊ| ಡಿ.ಎಲ್‌. ನರಸಿಂಹಾಚಾರ್ಯರ ಸ್ವರ್ಣಪದಕದೊಂದಿಗೆ ಪ್ರಥಮ ಶ್ರೇಣಿಯಲ್ಲಿ ಎಂ.ಎ. ಪದವಿಯನ್ನು ಪಡೆದರು.  ಪ್ರೊ| ಜಿ.ಎಸ್‌. ಶಿವರುದ್ರಪ್ಪನವರ ಮಾರ್ಗದರ್ಶನದಲ್ಲಿ “ಗ್ರಾಮದೇವತೆಗಳು’ ಎಂಬ ಪ್ರೌಢ ಪ್ರಬಂಧವನ್ನು ಮಂಡಿಸಿ 1989ರಲ್ಲಿ ಪಿಎಚ್‌.ಡಿ. ಪದವಿಯನ್ನು ಗಳಿಸಿದರು. ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಧ್ಯಾಪಕರಾಗಿ, ಕನ್ನಡ ಅಧ್ಯಯನ ಕೇಂದ್ರದ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದರು. ವಿದ್ಯಾರ್ಥಿ ದೆಸೆಯಿಂದಲೇ ಸಮಾಜದಲ್ಲಿನ ಅಸಮಾನತೆಗಳ  ಬಗ್ಗೆ ತಮ್ಮೊಳಗೆ ಮೊಳೆಯೊಡೆಯುತ್ತಿದ್ದ ಸಿಟ್ಟು, ಆಕ್ರೋಶಗಳನ್ನು ವ್ಯಕ್ತಪಡಿಸಲು ಸಿದ್ದಲಿಂಗಯ್ಯಅವರು ಆಯ್ದುಕೊಂಡದ್ದು ಕಾವ್ಯ ಮಾಧ್ಯಮ. ಹೀಗೆ ಅವರು ಬರೆದ ಹಲವಾರು ಕವನಗಳ ಸಂಕಲನ “ಹೊಲೆಮಾದಿಗರ ಹಾಡು’ 1975ರಲ್ಲಿ ಪ್ರಕಟಗೊಂಡಿತು. ಮುಂದೆ ಅವರ “ಸಾವಿರಾರು ನದಿಗಳು’, “ಕಪ್ಪುಕಾಡಿನ ಹಾಡು’, “ಮೆರವಣಿಗೆ’,  “ನನ್ನ ಜನಗಳು ಮತ್ತು ಇತರ ಕವಿತೆಗಳು’, “ಆಯ್ದ ಕವನಗಳು’ ಮುಂತಾದ ಕವನ ಸಂಕಲನಗಳು  ಪ್ರಕಟಗೊಂಡವು.

ಸಿದ್ದಲಿಂಗಯ್ಯನವರ “ಪಂಚಮ ಮತ್ತು ನೆಲಸಮ’, “ಏಕಲವ್ಯ’  ಪ್ರಮುಖ ನಾಟಕಗಳಾದರೆ “ಅವತಾರಗಳು’ ಪ್ರಬಂಧ ಕೃತಿ. ಇವಲ್ಲದೆ ರಸಗಳಿಗೆಗಳು, ಎಡಬಲ,  ಹಕ್ಕಿನೋಟ, ಜನಸಂಸ್ಕೃತಿ, ಉರಿಕಂಡಾಯ ಮುಂತಾದ ಲೇಖನ ಸಂಗ್ರಹಗಳು,ಆತ್ಮಕಥನ ಊರು-ಕೇರಿ ಪ್ರಕಟಗೊಂಡಿವೆ.

ಇವರ “ಊರು ಕೇರಿ’ ಆತ್ಮಕಥೆ ಇಂಗ್ಲಿಷ್‌ ಹಾಗೂ ತಮಿಳಿಗೂ ಅನುವಾದಗೊಂಡಿದ್ದು, ಇಂಗ್ಲಿಷ್‌ ಅನುವಾದವನ್ನು ಕೇಂದ್ರ ಸಾಹಿತ್ಯ ಅಕಾಡೆಮಿಯು ಪ್ರಕಟಿಸಿದೆ. ಸಿದ್ದಲಿಂಗಯ್ಯನವರ ಹಲವಾರು ಕವಿತೆಗಳು ಇಂಗ್ಲಿಷ್‌, ಹಿಂದಿ, ತಮಿಳು, ಬಂಗಾಲಿ, ಮಲಯಾಳ ಮತ್ತು ತೆಲುಗು ಭಾಷೆಗಳಲ್ಲಿ ಅನುವಾದಗೊಂಡಿವೆ.

ಪುಟ್ಟಣ್ಣ ಕಣಗಾಲರು ನಿರ್ದೇಶಿಸಿದ “ಧರಣಿಮಂಡಲ ಮಧ್ಯದೊಳಗೆ’ ಚಿತ್ರಕ್ಕೆ ಸಿದ್ದಲಿಂಗಯ್ಯ ಅವರು ಬರೆದ ಗೀತೆಗೆ 1983-84ರಲ್ಲಿ ರಾಜ್ಯಪ್ರಶಸ್ತಿ ಸಂದಿತ್ತು. ಪಣಜಿಯಲ್ಲಿ ನಡೆದ ಭಾರತೀಯ ಕನ್ನಡ ಸಮ್ಮೇಳನದ ಅಧ್ಯಕ್ಷತೆ, ಗೋರೆಗಾಂವ್‌ನ ವಿಚಾರ ಭಾರತಿ ಸಮ್ಮೇಳನದ ಅಧ್ಯಕ್ಷತೆ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ, ಬೀದರ್‌ನಲ್ಲಿ ನಡೆದ ಶರಣ ಸಮ್ಮೇಳನದ ಅಧ್ಯಕ್ಷತೆ, ಮತ್ತು ಹಂಪಿ ಉತ್ಸವ, ಮೈಸೂರು ದಸರಾ ಮಹೋತ್ಸವ, ದಿಲ್ಲಿಯಲ್ಲಿ ನಡೆದ ದಕ್ಷಿಣ ಪ್ರಾಂತೀಯ ಸಮ್ಮೇಳನದಲ್ಲಿ ಕವಿಗೋಷ್ಠಿಯ ಅಧ್ಯಕ್ಷತೆ, ಆಳ್ವಾಸ್‌ ನುಡಿಸಿರಿ ಸಮ್ಮೇಳನ  ಹಾಗೂ ಶ್ರವಣಬೆಳಗೊಳದಲ್ಲಿ 81ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ಮುಂತಾದ ಗೌರವಗಳು ಸಿದ್ದಲಿಂಗಯ್ಯನ ಅವರನ್ನು ಅರಸಿ ಬಂದಿದ್ದವು.

ಸಿದ್ದಲಿಂಗಯ್ಯಅವರು ನಿರಂತರವಾಗಿ ಹಲವಾರು ಸಾಮಾಜಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತ ಬಂದಿದ್ದು,  ಜಾನಪದ ಸಾಹಿತ್ಯ ಸಂಪಾದಕ ಮಂಡಲಿ, ಅಂಬೇಡ್ಕರ್‌ಕೃತಿಗಳ ಕನ್ನಡ ಭಾಷಾಂತರ ಮತ್ತು ಸಂಪಾದನ ಸಮಿತಿ, ರಾಮಮನೋಹರ ಲೋಹಿಯಾ ಅವರ ಕೃತಿಗಳ ಭಾಷಾಂತರ ಮತ್ತು ಸಂಪಾದನ ಸಮಿತಿ, ಕನ್ನಡ ಸಾಹಿತ್ಯ ಪರಿಷತ್‌ನ ಕಾರ್ಯಕಾರಿ ಮಂಡಲಿ ಮುಂತಾದವುಗಳಲ್ಲಿ ಸದಸ್ಯರಾಗಿದ್ದುದರ  ಜತೆಗೆ ದಲಿತ ಸಂಘರ್ಷ ಸಮಿತಿ, ಬಂಡಾಯ ಸಾಹಿತ್ಯ ಸಂಘಟನೆಗಳ ಸ್ಥಾಪಕ ಸದಸ್ಯರಾಗಿದ್ದರು. ಸಿದ್ದಲಿಂಗಯ್ಯ ಅವರ ಸೃಜನಶೀಲ ಸಾಹಿತ್ಯ ಸಾಧನೆಗಾಗಿ ರಾಜ್ಯೋತ್ಸವ ಪ್ರಶಸ್ತಿ, ಡಾ| ಅಂಬೇಡ್ಕರ್‌ ಶತಮಾನೋತ್ಸವ ವಿಶೇಷ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಜಾನಪದ ತಜ್ಞ ಪ್ರಶಸ್ತಿ, ಡಾ| ಅಂಬೇಡ್ಕರ್‌ ಪ್ರಶಸ್ತಿ, ಸತ್ಯಕಾಮ ಪ್ರತಿಷ್ಠಾನ ಪ್ರಶಸ್ತಿ, ಬಾಬು ಜಗಜೀವನ ರಾಮ್‌ ಪ್ರಶಸ್ತಿ, ಹಂಪಿ ವಿಶ್ವವಿದ್ಯಾನಿಲಯದ ನಾಡೋಜ ಪ್ರಶಸ್ತಿ ಮುಂತಾದ ಗೌರವಗಳು ಸಂದಿದ್ದವು.

ಕರ್ನಾಟಕ ವಿಧಾನ ಪರಿಷತ್‌ನ ಸದಸ್ಯರಾಗಿ 1988-94, 1995-2001 ರ ವರೆಗೆ ಎರಡು ಬಾರಿ ಕಾರ್ಯನಿರ್ವಹಿಸುವುದರ ಜತೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದಲ್ಲಿ 2006-08 ಅವಧಿಯಲ್ಲಿ  ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಸಿದ್ದಲಿಂಗಯ್ಯನವರು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾಗಿಯೂ  ಕಾರ್ಯ ನಿರ್ವಹಿಸಿದ್ದರು. ಉಪನ್ಯಾಸಗಳು ಮತ್ತು ಅವರ ಸರಳ ಸ್ನೇಹ ಗುಣ ಸದಾ ನೆನಪಲ್ಲಿ ಉಳಿಯುವಂತದ್ದು.

 

ವಿಜಯಕುಮಾರ್‌ಎಚ್‌. ಕೆ.

ಎ.ಜೆ. ಕಾಲೇಜು ಫಾರ್ಮಸಿ, ಮಂಗಳೂರು

 

ಟಾಪ್ ನ್ಯೂಸ್

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-uv-fusion

UV Fusion: ಒಂದು ಪುಟ್ಟ ಸಹಾಯ ಒಬ್ಬರ ಬದುಕನ್ನೇ ಬದಲಾಯಿಸಬಹುದು…

14-uv-fusion

UV Fusion: ಮೊದಲ ಬಾರಿ ಲೇಖನಿ ಹಿಡಿದ ಅನುಭವ

13–uv-fusion

UV Fusion: ಹೃದಯದಲ್ಲಿ ಬಾಲ್ಯದ ಮಿಡಿತ

12-uv-fusion

UV Fusion: ಇನ್ನಾದರು ಎಚ್ಚೆತ್ತುಕೊಂಡು ಕನ್ನಡ ಶಾಲೆ ರಕ್ಷಿಸಿ

11-uv-fusion

UV Fusion: ಕುಟುಂಬ ಎಂಬ ಬೆಚ್ಚಗಿನ ರಕ್ಷಾ ಕವಚ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

India’s first FIP ​​Padel tournament begins

FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ

14-bng

Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್‌!

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.