ತೃಪ್ತಿ ಎಲ್ಲಿ ಮಾರಾಟಕ್ಕಿದೆ, ತಿಳಿಸುವಿರಾ…?


Team Udayavani, Jun 27, 2021, 11:41 AM IST

ತೃಪ್ತಿ ಎಲ್ಲಿ ಮಾರಾಟಕ್ಕಿದೆ, ತಿಳಿಸುವಿರಾ…?

ಅದೊಂದು ನದಿ ಪಾತ್ರ. ಆ ನದಿಯಲ್ಲಿ ಮೀನೊಂದು ವಾಸಿಸುತ್ತಿತ್ತು. ನದಿಯ ಪಕ್ಕದಲ್ಲಿದ್ದ ಮರದಲ್ಲಿ ನವಿಲೊಂದು ಮನೆ ಮಾಡಿತ್ತು. ಅವೆರಡರ ಮಧ್ಯೆ ಹೇಗೋ ಎಂತೋ ಗೆಳೆತನವಾಯಿತು. ಗೆಳೆತನ ಬೆಳೆಯುತ್ತಾ ಹೋದಂತೆ, ಒಬ್ಬರಿಗೊಬ್ಬರು ಜೀವ ಬಿಡಲೂ ಸಿದ್ಧ ಎಂಬಷ್ಟು ಆತ್ಮೀಯವಾದವು. ಹೀಗಿರುವಾಗ, ಒಮ್ಮೆ ಬೇಟೆಗಾರರ ತಂಡವೊಂದು ಅಲ್ಲಿಗೆ ಬಂದಿತು. ಮರದ ಮೇಲೆ ಕುಳಿತು ನೀರಿನಲ್ಲಿದ್ದ ಮೀನಿನೊಂದಿಗೆ ಹರಟುತ್ತಿದ್ದ ನವಿಲನ್ನು ಆ ತಂಡದ ಒಬ್ಬ ಆಸಾಮಿ ನೋಡಿಬಿಟ್ಟ. ಅದನ್ನು ಹಿಡಿದು ಕೈಕಾಲು ಕಟ್ಟಿ ಒಯ್ಯಲು ಅನುವಾದ.

ನೀರಿನಡಿಯಲ್ಲಿದ್ದ ಮೀನು ಇದನ್ನೆಲ್ಲ ನೋಡುತ್ತಿತ್ತು. ಮೆಲ್ಲಗೆ ತಲೆ ಹೊರಗೆ ಹಾಕಿ ಅಣ್ಣಾ ಬೇಟೆಗಾರನೇ, ಇದುವರೆಗೂ ಯಾರೂ ಕಂಡಿರದ ಅಮೂಲ್ಯವಾದ ಮುತ್ತನ್ನು ನಾನು ತಂದು ಕೊಡುತ್ತೇನೆ. ನನ್ನ ಗೆಳೆಯನನ್ನು ಬಿಟ್ಟು ಬಿಡು ಎಂದಿತು. ಬೇಟೆಗಾರ ಒಪ್ಪಿದ. ಮೀನು ನೀರಿನಾಳಕ್ಕೆ ಹೋಗಿ ಒಂದು ಮುತ್ತನ್ನು ಕಚ್ಚಿ ತಂದು ಅವನ ಕೈಯಲ್ಲಿಟ್ಟಿತು. ಬೇಟೆಗಾರ ಮುತ್ತನ್ನು ನೋಡಿದವನೇ ಕಣ್ಣರಳಿಸಿದ. ಇಂಥ ಸುಂದರ ಮುತ್ತನ್ನು ಅವನೆಂದೂ ಕಂಡಿರಲಿಲ್ಲ. ಅದರ ಬೆಲೆ ಅಂದಾಜಿಸಿದ. ಅದೇ ಗುಂಗಿನಲ್ಲಿ ನವಿಲನ್ನು ಬಿಡುಗಡೆಗೊಳಿಸಿದ. ನವಿಲು ಮತ್ತೆ ಮರದ ಮೇಲೆ ಕುಳಿತಿತು.

ಮರುದಿನ ಬೇಟೆಗಾರ ಪುನಃ ಬಂದ. ಅವನ ಕಣ್ಣುಗಳಲ್ಲಿ ದುರಾಸೆ ಕುಣಿಯುತ್ತಿತ್ತು. ಮೀನಿಗೆ ಕೂಡಲೇ ಗೊತ್ತಾಯಿತು. ಮೀನನ್ನು ನೋಡಿದ ಬೇಟೆಗಾರ, ಒಂಟಿ ಮುತ್ತಿಗೆ ಅಷ್ಟೇನೂ ಬೆಲೆ ಇಲ್ಲವಂತೆ, ಜೋಡಿಗೆ ಬೆಲೆ ಎಂದು ಅಕ್ಕಸಾಲಿಗ ಹೇಳಿದ. ಹಾಗಾಗಿ ನೀನು ಇಂಥದೇ ಇನ್ನೊಂದು ಮುತ್ತು ತಂದು ಕೊಟ್ಟರೆ ನಿನ್ನ ಗೆಳೆಯನ ತಂಟೆಗೆ ನಾನು ಇನ್ನೆಂದೂ ಬರುವುದಿಲ್ಲ, ಮಾತು ಕೊಡುತ್ತೇನೆ ಎಂದ. ಜಾಣ ಮೀನು ತತ್‌ಕ್ಷಣವೇ, ಅಂಥದ್ದೇ ಇನ್ನೊಂದು ಮುತ್ತು ಹುಡುಕಬೇಕಾದರೆ ನಿನ್ನ ಕೈಯಲ್ಲಿರುವ ಮುತ್ತನ್ನು ನನಗೆ ಕೊಡಬೇಕು. ನಾನು ಅಂಥದ್ದೇ ಹುಡುಕಿ ತರುತ್ತೇನೆ ಎಂದು ಹೇಳಿ, ಬಂಡೆಯ ಮೇಲೆ ಅದನ್ನಿಡಲು ಹೇಳಿತು. ಬೇಟೆಗಾರ ಹಾಗೆಯೇ ಮಾಡಿದ. ಮೀನು ಹಾರಿ ಮುತ್ತನ್ನು ಕಚ್ಚಿಕೊಂಡು ನೀರಿನೊಳಗಿಳಿಯಿತು. ಅಲ್ಲಿಂದಲೇ ತಲೆ ಎತ್ತಿ, ಬೇಟೆಗಾರನೇ, ನನ್ನ ಗೆಳೆಯ ನಿನ್ನ ಕೈಗೆಟುಕದಷ್ಟು ದೂರ ನಿನ್ನೆಯೇ ಹೊರಟು ಹೋಗಿದ್ದಾನೆ. ನೀನು ಮರಳಿ ಬಂದೇ ಬರುತ್ತೀಯಾ ಎಂದು ನಮಗೆ ತಿಳಿದಿತ್ತು. ಮನುಷ್ಯರ ಸ್ವಭಾವವೇ ಹೀಗೆ.

ತೃಪ್ತಿ ಎಂಬುದು ನಿಮಗಿಲ್ಲ. ಇದಿದ್ದರೆ ಅದು, ಅದಿದ್ದರೆ ಮತ್ತೂಂದು, ಹೀಗೆ ಬೇಕುಗಳ ಸಂತೆಯಲ್ಲಿ ಕಳೆದು ಹೋಗುತ್ತೀರಿ. ಆದ್ದರಿಂದಲೇ ನೀವು ದುಃಖೀಗಳು. ತೃಪ್ತಿಯೇ ಸುಖದ ಮೊದಲ ಹೆಜ್ಜೆ. ಆದರೆ ನಿಮಗದರ ಅರಿವು ಇಲ್ಲವೇ ಇಲ್ಲ.  ಅತಿಯಾಸೆಯಿಂದ ನಿನಗೆ ಸಿಕ್ಕಿದ್ದನ್ನೂ ಕಳೆದುಕೊಂಡೆ. ಹೋಗು, ಹೊರಟುಹೋಗು ಎನ್ನುತ್ತ ನೀರಿನಲ್ಲಿ ಮುಳುಗಿ ಮಾಯವಾಯಿತು. ಈ ಕಥೆಯ ಸಾರ ಎಷ್ಟು ಸತ್ಯ ಅಲ್ವಾ? ಈ ಕಥೆಗೂ ನಮ್ಮ ಬದುಕಿಗೂ ಬಹಳವೇ ಸಾಮ್ಯತೆ ಇದೆ. ನಾವೆಲ್ಲರೂ ನಮ್ಮ ಜೀವನದಲ್ಲಿ ಅಮೂಲ್ಯವಾದ ಪ್ರತಿಕ್ಷಣವನ್ನು ಸಂಭ್ರಮಿಸುವುದನ್ನು ಮರೆತಿರುತ್ತೇವೆ. ಯೌವನ, ವಯಸ್ಕ ಈ ಹಂತಗಳನ್ನು ಆನಂದಿಸದೆ ದಾಟುತ್ತೇವೆ. ಆಮೇಲೆ ಪರಿತಪಿಸುತ್ತೇವೆ. ಮನುಷ್ಯ ಬೆಳೆಯುತ್ತಾ ಹೋದಂತೆ ಖುಷಿಯನ್ನು ಕಳೆದುಕೊಳ್ಳುತ್ತಾ ಹೋಗುತ್ತಾನೆ. ಸಣ್ಣದರಲ್ಲಿ ಖುಷಿಪಡುತ್ತಿದ್ದ ನಮಗೆ ಬೆಳೆಯುತ್ತಾ ಹೋದಂತೆ ಆಸೆ, ದುರಾಸೆಗಳೂ ಬೆಳೆಯುತ್ತವೆ. ಬಾಲ್ಯದಲ್ಲಿ ಸಣ್ಣಪುಟ್ಟ ವಿಷಯಕ್ಕೂ ಸಂಭ್ರಮಿಸುತ್ತಿದ್ದವರು ಬೆಳೆಯುತ್ತಾ ಹೋದಂತೆ ಆ ಖುಷಿಯನ್ನು ಮೂಲೆಗೆ ತಳ್ಳಿ, ಕೈಕಾಲು ಕಟ್ಟಿ ಕೂರಿಸಿ ಬಿಡುತ್ತೇವೆ.

ಆಗ ಒಂದು ರೂಪಾಯಿಯ ಮಿಠಾಯಿ, ಪೆಪ್ಪರಮಿಂಟಿಗೂ ಸಂಭ್ರಮಿಸುತ್ತಿದ್ದವರು ಇಂದು ಸಾವಿರಾರು ರೂಪಾಯಿ ಖರ್ಚು ಮಾಡಿ, ಸ್ಟಾರ್‌ಹೊಟೇಲಿನಲ್ಲಿ ಉಂಡರೂ ಖುಷಿ ಪಡುವುದಿಲ್ಲ.

ಮೊದಲ ಬಾರಿ ಸೈಕಲ್‌ನಲ್ಲಿ ಬಿದ್ದು ಎದ್ದು ಓಡಿಸಿದ ಖುಷಿ, ಇಂದು ಲಕ್ಷಗಟ್ಟಲೇ ಸುರಿದು ಕೊಂಡ ಕಾರಿನಲ್ಲಿ ಕಾಣುವುದಿಲ್ಲ. ಆಕಾಶದಲ್ಲಿ ಹಾರಾಡುವ ವಿಮಾನ ನೋಡಿ ಕೈಬೀಸಿ ಟಾಟಾ ಮಾಡುತ್ತಿದ್ದ ಖುಷಿ ಇಂದು ವಿಮಾನದಲ್ಲಿ ಪ್ರಯಾಣಿಸಿದರೂ ಇಲ್ಲ. ತೃಪ್ತಿ ಎನ್ನುವುದನ್ನು ಮರೆತು ಬಿಟ್ಟಿದ್ದೇವೆ. ಬಾಲ್ಯದ ಮರಕೋತಿ, ಕುಂಟೆಬಿಲ್ಲೆ, ಕಣ್ಣಮುಚ್ಚಾಲೆ, ಲಗೋರಿ ಆಟಗಳು, ಸೈಕಲ್‌ ತುಳಿಯುವುದನ್ನು ಎದ್ದು, ಬಿದ್ದು, ಕಲಿತದ್ದು, ಪರೀಕ್ಷೆಯಲ್ಲಿ ಒಂದು ಮಾರ್ಕ್ಸ್ ಜಾಸ್ತಿ ತೆಗೆದುಕೊಂಡಿದ್ದಾಗಿ ಸಂಭ್ರಮಿಸಿದ್ದು, ಗದ್ದೆ ತೋಟಗಳಲ್ಲಿ ಸುತ್ತಾಡಿದ್ದು, ಹಣ್ಣು ಕದ್ದು ತಿಂದದ್ದು, ಶಾಲಾ ಕಾಲೇಜು ಸ್ಪರ್ಧೆಗಳಲ್ಲಿ ಬಹುಮಾನ, ಪ್ರಶಸ್ತಿ ಗಳಿಸಿದ್ದು ಇದೆಲ್ಲವು ಸಣ್ಣ ವಯಸ್ಸಿನ ಖುಷಿಗೆ ಕಾರಣವಾಗುತ್ತಿತ್ತು.

ಜೀವನದ ಸಂಗಾತಿಯೇ ಗೆಳೆಯನಾಗಿದ್ದು, ತೊಟ್ಟಿಲು ಕಟ್ಟಿದ್ದು, ಮಗುವಿನ ನಗುವಿನಲ್ಲಿ ಲೋಕವನ್ನೇ ಮರೆತಿದ್ದು, ಗುರು ಹಿರಿಯರ ಆಶೀರ್ವಾದ ಪಡೆದಿದ್ದು, ಪ್ರೀತಿ ಪಾತ್ರರ ಮೆಚ್ಚುಗೆಯ ಮಾತುಗಳಿಂದ ಅವರ ಅಪ್ಪುಗೆಯಿಂದ ಅರಳಿದ್ದು, ಎಲ್ಲವೂ ಸಂಭ್ರಮಗಳೇ.. ಕೆಲವು ಸಣ್ಣ ಸಂಭ್ರಮಗಳಾದರೆ, ಮತ್ತೂಂದಿಷ್ಟು ದೊಡ್ಡ ಪ್ರಮಾಣದ ಸಂಭ್ರಮಗಳು. ಸೈಟು ಖರೀದಿಸಿದ್ದು, ಮನೆ ಕಟ್ಟಿಸಿದ್ದು, ಹೊಸ ಗಾಡಿ ಕೊಂಡದ್ದು, ಬರಹಗಳನ್ನು ಬರೆದದ್ದು, ಪತ್ರಿಕೆಗಳಿಗೆ ಕಳಿಸಿದ್ದು, ಅವು ಮೆಚ್ಚುಗೆ ಗಳಿಸಿದ್ದು, ಎಲ್ಲವೂ ದೊಡ್ಡ ಸಂಭ್ರಮಗಳೇ. ಆ ಕ್ಷಣಗಳು ಆನಂದಿಸಲೇಬೇಕಾದದ್ದೇ. ಆದರೆ ನಾವು ಆಗ, ಅಯ್ಯೋ ಬಿಡಿ, ಇದೇನು ದೊಡ್ಡ ವಿಷಯ? ನನ್ನ ಆಸೆ ಬೇರೇನೇ ಇತ್ತು ಎಂದು ಮೂಗನ್ನು ಮುರಿಯುತ್ತೇವೆ. ಇದಕ್ಕೆಲ್ಲ ಕಾರಣ ಏನು? ಅತಿಯಾದ ಆಸೆಯೇ, ಅಸೂಯೆಯೇ, ಅತೃಪ್ತಿಯೇ, ಆಮಿಷವೇ, ಒಟ್ಟಿನಲ್ಲಿ, ನಮ್ಮೊಳಗಿರುವ ತೃಪ್ತಿಯ ಸೆಲೆಯನ್ನು ನಾವೇ ಬತ್ತಿಸಿಕೊಂಡು, ಮತ್ತೆಲ್ಲೋ ಅದರ ಹುಡುಕಾಟದಲ್ಲಿ ನಿರತರಾಗಿರುತ್ತೇವೆ. ಅತೃಪ್ತ ಮನಸ್ಸಿಗರಾಗಿ ತೊಳಲಾಡುತ್ತಿರುತ್ತೇವೆ. ತೃಪ್ತಿ ಎಲ್ಲಿಯಾದರೂ

ಮಾರಾಟಕ್ಕಿದೆಯೇ? ಎಂದು ಅರಸುತ್ತಿರುತ್ತೇವೆ.

 

ಅಪ್ಪಾಜಿ. ದ. ಕುಲಕರ್ಣಿ

ಹರಪನಹಳ್ಳಿ

ಟಾಪ್ ನ್ಯೂಸ್

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-uv-fusion

UV Fusion: ಒಂದು ಪುಟ್ಟ ಸಹಾಯ ಒಬ್ಬರ ಬದುಕನ್ನೇ ಬದಲಾಯಿಸಬಹುದು…

14-uv-fusion

UV Fusion: ಮೊದಲ ಬಾರಿ ಲೇಖನಿ ಹಿಡಿದ ಅನುಭವ

13–uv-fusion

UV Fusion: ಹೃದಯದಲ್ಲಿ ಬಾಲ್ಯದ ಮಿಡಿತ

12-uv-fusion

UV Fusion: ಇನ್ನಾದರು ಎಚ್ಚೆತ್ತುಕೊಂಡು ಕನ್ನಡ ಶಾಲೆ ರಕ್ಷಿಸಿ

11-uv-fusion

UV Fusion: ಕುಟುಂಬ ಎಂಬ ಬೆಚ್ಚಗಿನ ರಕ್ಷಾ ಕವಚ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.