Scholify ಸ್ಕಾಲರ್‌ಶಿಪ್ ಸೇವೆ ಆರಂಭಿಸಿದ ಸೋನು ಸೂದ್
Team Udayavani, Sep 23, 2020, 5:06 PM IST
ಮಣಿಪಾಲ: ವಲಸೆ ಕಾರ್ಮಿಕರಿಗೆ, ನಿರುದ್ಯೋಗಿಗಳಿಗೆ ಉದ್ಯೋಗವನ್ನು ಒದಗಿಸುವ ಮತ್ತು ಅಗತ್ಯವಿರುವವರಿಗೆ ತನ್ನ ಕೈಯಿಂದ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುವ ಸೋನು ಸೂದ್ ಈಗ ಮಕ್ಕಳ ಭವಿಷ್ಯವನ್ನು ಭದ್ರಪಡಿಸುತ್ತಿದ್ದಾರೆ. ಸೋನು ತನ್ನ ಸ್ಕಾಲರ್‌ಶಿಪ್ ಆ್ಯಪ್ ಸ್ಕೋಲಿಫೈ ಅನ್ನು ಪ್ರಾರಂಭಿಸಿದ್ದಾರೆ.
ಈ ಆ್ಯಪ್ ಬಿಡುಗಡೆ ಮಾಡಿದ ಸುದ್ದಿಯನ್ನು ಅವರು ಟ್ವಿಟರ್ ಮೂಲಕ ಬಹಿರಂಗಪಡಿಸಿದ್ದಾರೆ. ಈ ಅಪ್ಲಿಕೇಶನ್ ಮೂಲಕ ಬಳಕೆದಾರರು ವಿದ್ಯಾರ್ಥಿವೇತನವನ್ನು ಗೆಲ್ಲಬಹುದು ಎಂದು ಅವರು ಹೇಳಿದ್ದಾರೆ. 100ರಿಂದ ಕೋಟಿ ರೂಪಾಯಿಗಳ ವರೆಗೆ ವಿದ್ಯಾರ್ಥಿವೇತನವನ್ನು ನೀಡುತ್ತದೆ.
ತಾಯಿಯ ಹೆಸರಿನಲ್ಲಿ ಬಡ ಮಕ್ಕಳಿಗೆ ಸಹಾಯ
ಕಳೆದ ವಾರವಷ್ಟೇ ಸೋನು ತನ್ನ ತಾಯಿ ಸರೋಜ್ ಹೆಸರಿನಲ್ಲಿ ಬಡ ಮಕ್ಕಳಿಗೆ ವಿದ್ಯಾರ್ಥಿವೇತನವನ್ನು ಘೋಷಿಸಿದ್ದರು. ಇದಕ್ಕಾಗಿ 10 ದಿನಗಳಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಯೋಜನೆಯ ಸ್ಪಷ್ಟ ಜಾರಿಗೆ ಕೆಲವು ಷರತ್ತುಗಳನ್ನೂ ನಿಗದಿಪಡಿಸಲಾಗಿದೆ. ವಾರ್ಷಿಕ ಆದಾಯವು ಎರಡು ಲಕ್ಷ ರೂಪಾಯಿಗಳಿಗಿಂತ ಕಡಿಮೆ ಇದ್ದರೆ, ಅವರು ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು ಎಂದು ಸೋನು ಹೇಳಿದ್ದಾರೆ. ಅವರ ಶೈಕ್ಷಣಿಕ ದಾಖಲೆ ಉತ್ತಮವಾಗಿರಬೇಕು. ಇದಕ್ಕಾಗಿ ಸೋನು ಅವರ ತಾಯಿ ಪ್ರೋ. ಸರೋಜ ಸೂದ್ ಅವರ ಹೆಸರಿನಲ್ಲಿ ವಿದ್ಯಾರ್ಥಿವೇತನವನ್ನು ಪ್ರಾರಂಭಿಸಲು ದೇಶಾದ್ಯಂತದ ವಿಶ್ವವಿದ್ಯಾಲಯಗಳೊಂದಿಗೆ ಒಪ್ಪಂದ ಮಾಡಿಕೊಂಡಿದ್ದಾರೆ.
I am pleased to introduce Scholify!
Download my scholarship app, Scholify on Android or visit https://t.co/Gn330D9Tzq now and you can win a scholarship.@Scholifyme #PadheSabhiBadheSabhi #keepmovingforward pic.twitter.com/b5np2gTkZ0
— sonu sood (@SonuSood) September 21, 2020
ಜುಲೈನಲ್ಲಿ ಉದ್ಯೋಗ ಅಪ್ಲಿಕೇಶನ್
ಇದಕ್ಕೂ ಮೊದಲು ಸೋನು ಜುಲೈ ಕೊನೆಯ ವಾರದಲ್ಲಿ “ಪ್ರವಾಸಿ ರೋಜಗಾರ್ ಆ್ಯಪ್’ ಬಿಡುಗಡೆ ಮಾಡಿದ್ದರು. ಇದು ವಲಸಿಗರಿಗೆ ಉದ್ಯೋಗ ಹುಡುಕಲು ಅಗತ್ಯವಾದ ಮಾಹಿತಿ ಮತ್ತು ಸರಿಯಾದ ಲಿಂಕ್ ಅನ್ನು ಒದಗಿಸುತ್ತದೆ. ಈ ಆ್ಯಪ್ ಮೂಲಕ 500ಕ್ಕೂ ಹೆಚ್ಚು ಕಂಪನಿಗಳಲ್ಲಿ ಉದ್ಯೋಗಾವಕಾಶಗಳನ್ನು ನೀಡುತ್ತದೆ. ಇದು ಜುಲೈ 23ರಂದು ಪ್ರಾರಂಭವಾಗಿದ್ದು, ಇದಕ್ಕಾಗಿ ದಿಲ್ಲಿ, ಮುಂಬಯಿ, ಬೆಂಗಳೂರು, ಹೈದರಾಬಾದ್, ಕೊಯಮತ್ತೂರು, ಅಹಮದಾಬಾದ್ ಮತ್ತು ತಿರುವನಂತಪುರಂ ಸೇರಿದಂತೆ 7 ನಗರಗಳಲ್ಲಿ 24 ಗಂಟೆಗಳ ಸಹಾಯವಾಣಿ ಮತ್ತು ವಲಸೆ ನೆರವು ಕೇಂದ್ರಗಳನ್ನು ಸ್ಥಾಪಿಸಲಾಗಿದೆ.
ದೇಶಾದ್ಯಂತ ಲಾಕ್‌ಡೌನ್ ಜಾರಿಯಾದಾಗಿನಿಂದ ಜನರಿಗೆ ಸಹಾಯ ಮಾಡಲು ಸೋನು ಸೂದ್ ಸಜ್ಜಾಗಿದ್ದರು. ಮಹಾರಾಷ್ಟ್ರ ಪೊಲೀಸರಿಗೆ ಕೋವಿಡ್ ಸೆಕ್ಯುರಿಟಿ ಕಿಟ್, ಪ್ರವಾಹ ಪೀಡಿತ ಜನರಿಗೆ ಮನೆ, ಆನ್‌ಲೈನ್ ಶಿಕ್ಷಣಕ್ಕಾಗಿ ಸ್ಮಾರ್ಟ್ ಫೋನ್, ಆಹಾರ ಇತ್ಯಾದಿಗಳು ಅವುಗಳಲ್ಲಿ ಸೇರಿದ್ದು, ಇವು ಕೆಲವೇ ಉದಾಹರಣೆಗಳಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.