UV Fusion: ಸಾಂಪ್ರದಾಯಿಕ ಕರಕುಶಲ ಕಲೆಗಳನ್ನು ಬೆಳೆಸೋಣ
Team Udayavani, Nov 24, 2024, 3:00 PM IST
ಹಿಂದಿನ ಕಾಲದ ಸಾಂಪ್ರದಾಯಿಕ ಕರಕುಶಲ ಕಲೆಗಳು ಇಂದು ಮರೆಮಾಗಿ ಹೋಗಿದೆ. ಇಂದು ಕರಕುಶಲ ಕಲೆಯನ್ನು ಬೆಳೆಸುವವರು ಇದ್ದರೂ ಅದಕ್ಕೆ ಬೇಡಿಕೆಯೇ ಇಲ್ಲವಾಗಿದೆ. ಇದಕ್ಕೆ ಕಾರಣ ಆಧುನಿಕತೆ.
ಹಿಂದೆ ಅನ್ನವನ್ನು ಬಸಿಯಲು ಕಾಡಿನಲ್ಲಿ ಸಿಗುವ ಬಳ್ಳಿಗಳಿಂದ ನಿರ್ಮಿಸಿದ ವಸ್ತುಗಳನ್ನು ಬಳಸುತ್ತಿದ್ದರು. ಆಡು ಭಾಷೆಯಲ್ಲಿ ತಟ್ಟಿ ಕುಡುಪು ಎಂದು ಕರೆಯಲಾಗುತ್ತದೆ. ಹೀಗೆ ಕನ್ನಡಿ ಬುಟ್ಟಿ, ಗೊಬ್ಬರ ಬುಟ್ಟಿ ಮುಂತಾದ ಬುಟ್ಟಿಗಳನ್ನು ತಯಾರಿಸುತ್ತಿದ್ದರು. ಅಂದಿನ ಕಾಲದಲ್ಲಿ ಇದು ಜೀವನ ಸಾಗಿಸಲು ಮುಖ್ಯಮಾರ್ಗವಾಗಿತ್ತು. ಈ ಬುಟ್ಟಿಗಳನ್ನು ಯಾವುದೇ ಕಾಲದಲ್ಲಾದರೂ ತಯಾರಿಸಬಹುದಾಗಿತ್ತು. ಹಾಗೆಯೇ ಅಂದು ಮಣ್ಣಿನ ಮಡಕೆ ಇದ್ದು ಅದರಲ್ಲಿ ನೀರು ತುಂಬಿಸಿಟ್ಟರೆ, ಇಂದಿನ ರೆಫ್ರಿಜರೇಟರ್ನ ನೀರಿಗಿಂತ ಏನೂ ಕಡಿಮೆ ಇಲ್ಲ. ಆದರೆ ಇಂದಿನ ಜನರು ಮಣ್ಣಿನ ಮಡಕೆ, ಬುಟ್ಟಿ ಮುಂತಾದ ಸಾಂಪ್ರದಾಯಿಕ ಕಲೆಗಳನ್ನು ಕಡೆಗಣಿಸಿಬಿಟ್ಟಿದ್ದಾರೆ. ಇವು ಕೆಲವು ಅಂಗಡಿಗಳಲ್ಲಿ ಮಾತ್ರ ಕಾಣಸಿಗುತ್ತಿದ್ದು, ಯಾರು ಖರೀದಿಸಲು ಮುಖ ಮಾಡುತ್ತಿಲ್ಲ. ಸ್ಟೀಲ್, ಅಲ್ಯೂಮಿನಿಯಂ ಪಾತ್ರೆಗಳನ್ನೇ ಹೆಚ್ಚಾಗಿ ಬಳಸುತ್ತಿದ್ದಾರೆ. ಮಣ್ಣಿನ ಮಡಕೆಯ ಪಾತ್ರೆಗಳನ್ನು ಬಳಸುವುದರಿಂದ ಆರೋಗ್ಯಕ್ಕೂ ಉತ್ತಮ. ಹಾಗೆಯೇ ಇಂತಹ ಕಲೆಗಳನ್ನು ಬೆಳೆಸುವವರಿಗೆ ಪ್ರೋತ್ಸಾಹ ಮತ್ತು ಅವರ ಶ್ರಮಕ್ಕೆ ಬೆಲೆ ನೀಡಿದಂತಾಗುತ್ತದೆ. ಇನ್ನಾದರೂ ಇಂತಹ ಕಲೆಗಳನ್ನು ಗೌರವಿಸೋಣ.
-ಪ್ರಜ್ಞಾ ಆಚಾರ್ಯ
ಸರಕಾರಿ ಪ್ರಥಮ ದರ್ಜೆ ಕಾಲೇಜು ಕಾರ್ಕಳ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.