Women: ಹೆಣ್ಣು ಹೊರೆಯಲ್ಲ ಶಕ್ತಿ


Team Udayavani, Oct 12, 2024, 11:47 AM IST

4-uv-fusion

ಹೆಣ್ಣು ಶಿಶು ಹತ್ಯೆ ದೇಶಾದ್ಯಂತ ಹೆಚ್ಚಾಗುತ್ತಿದೆ. ಇತ್ತೀಚಿಗೆ ಅಲ್ಟ್ರಾ ಸೌಂಡ್‌ ಡಯಾಗ್ನೋಸ್ಟಿಕ್‌ ವಿಧಾನಗಳಂಥಹ ನವೀನ ತಾಂತ್ರಿಕತೆಯ ಬೆಳವಣಿಗೆಯಿಂದಾಗಿ ತಾಯಿ ಗರ್ಭದಲ್ಲಿ ಭ್ರೂಣಾವಸ್ಥೆಯಲ್ಲಿರುವಾಗಲೇ ಲಿಂಗ ಪತ್ತೆ ಹಚ್ಚಬಹುದಾಗಿರುವುದರಿಂದ ಹೆಣ್ಣು ಭ್ರೂಣ ಹತ್ಯೆಗೆ ರಾಜ ಮಾರ್ಗ ತೆರೆದಂತಾಗಿದೆ. ಭ್ರೂಣ ಪತ್ತೆ ಹಚ್ಚುವುದು ಭಾರತದಲ್ಲಿ ಕಾನೂನು ಬಾಹಿರವಾಗಿದ್ದರೂ, ಕಾನೂನಿನ ಕಣ್ಣಿಗೆ ಮಣ್ಣೆರೆಚುವ ಕೆಲಸಗಳು ಅಲ್ಲಲ್ಲಿ ನಡೆಯುತ್ತಿವೆ.

ಹೆಣ್ಣು ಭ್ರೂಣ ಹತ್ಯೆಯಂತಹ ಕರಾಳ ಕೃತ್ಯಗಳಿಗೆ ನಮ್ಮ ಪುರುಷ ಪ್ರಧಾನ ಸಾಮಾಜಿಕ ವ್ಯವಸ್ಥೆಯೇ ಕಾರಣ. ಗಂಡು ಇಳಿವಯಸ್ಸಿನಲ್ಲಿ ಊರುಗೋಲಾಗುತ್ತಾನೆ, ಹೆಣ್ಣಾದರೆ ಮದುವೆಯಾಗಿ ಬೇರೆ ಮನೆಗೆ ಹೋಗುವವಳು ಎಂದು ಬಲವಾಗಿ ನಂಬುವವವರು ಹೆಣ್ಣೆಂದರೆ ಹೀಗಳೆಯುತ್ತಾರೆ.

ಇದಕ್ಕಿಂತಲೂ ದುರಾದೃಷ್ಟದ ಸಂಗತಿಯೆಂದರೆ, “ಹೆಣ್ಣೆಂದರೆ ಸೆರಗಿನಲ್ಲಿ ಕೆಂಡವನ್ನು ಕಟ್ಟಿಕೊಂಡಂತೆ’ ಎಂದು ನಂಬುವ ದೊಡ್ಡ ವರ್ಗವೇ ನಮ್ಮಲ್ಲಿದೆ. ಪ್ರತಿದಿನ ಮಾಧ್ಯಮಗಳಲ್ಲಿ ಕಂಡುಬರುವ ಹೆಣ್ಣಿನ ಮೇಲೆ ಅತ್ಯಾಚಾರ, ಕೊಲೆ, ಅವಮಾನದಂತಹ ಘಟನೆಗಳ ವರದಿಗಳೂ ಈ ಮನಃಸ್ಥಿತಿಗೆ ಕಾರಣವಾಗಿವೆ.

ಹೀಗಾಗಿ ಜನರಿಗೆ ಶಿಕ್ಷಣ ದೊರೆತು ತಿಳುವಳಿಕೆ ಹೆಚ್ಚಿದರೂ ಅದೆಷ್ಟೋ ದಂಪತಿ ಹೆಣ್ಣುಮಗುವನ್ನು ಬಯಸುವುದಿರಲಿ, ಮಗು ಹೆಣ್ಣು ಎಂದು ತಿಳಿದ ಕೂಡಲೇ ಭ್ರೂಣಹತ್ಯೆ ಮಾಡಿಸುವಂತಹ ನೀಚ ಕೃತ್ಯಕ್ಕೆ ಕೈಹಾಕುತ್ತಾರೆ.

21ನೇ ಶತಮಾನದ ನಾಲ್ಕನೇ ಒಂದು ಭಾಗ ಮುಗಿಯುತ್ತಾ ಬಂದರೂ ನಮ್ಮ ಜನಸಂಖ್ಯೆಯಲ್ಲಿ, ಹೆಣ್ಣು-ಗಂಡಿನ ಅನುಪಾತ ದಲ್ಲಿ ದೊಡ್ಡ ವ್ಯತ್ಯಾಸವನ್ನು ಗುರುತಿಸಬಹುದಾಗಿದೆ. ಹೆಣ್ಣು ಶಿಶು ಹತ್ಯೆಗಿಂತಲೂ ಹೆಣ್ಣು ಭ್ರೂಣ ಹತ್ಯೆಯ ಪರಿಣಾಮವಾಗಿ 1991 ಮತ್ತು 2001ರ ನಡುವಿನ ಅವಧಿಯಲ್ಲಿ ಆರು ವರ್ಷ ವಯೋಮಾನದ ಹೆಣ್ಣು ಗಂಡಿನ ಅನುಪಾತ ದಿನದಿಂದ ದಿನಕ್ಕೆ ದಾರುಣಾವಸ್ಥೆಗೆ ತಲುಪುತ್ತಿದೆ.

ಲಿಂಗ ತಾರತಮ್ಯದ ಧೋರಣೆಯನ್ನು ಅನುಸರಿಸಿಕೊಂಡು ಬರುತ್ತಿರುವುದರ ಪರಿಣಾಮವಾಗಿಯೇ ಭಾರತದ ಜನಸಂಖ್ಯೆಯಲ್ಲಿ 50 ಮಿಲಿಯನ್ನಷ್ಟು ಹುಡುಗಿಯರು ಮತ್ತು ಮಹಿಳೆಯರು ಕಾಣೆಯಾಗಿದ್ದಾರೆ ಎಂದು ಯುನಿಸೆಫ್‌ ವರದಿ ಮಾಡಿದೆ.

ಭಾರತದಲ್ಲಿ ಪ್ರತೀ ವರ್ಷ ಹುಟ್ಟುವ 12 ಮಿಲಿಯನ್‌ ಬಾಲಕಿಯರಲ್ಲಿ ಸುಮಾರು ಒಂದೂವರೆ ಮಿಲಿಯನ್‌ಗಿಂತಲೂ ಹೆಚ್ಚು ಬಾಲಕಿಯರು ಒಂದು ವರ್ಷದ ಒಳಗೆ ಅಸುನೀಗುತ್ತಿದ್ದಾರೆ. ಅಂದರೆ ಶೇ. 12.2ರಷ್ಟು ಹೆಣ್ಣು ಮಕ್ಕಳು ತಮ್ಮ ಮೊದಲನೇ ಜನ್ಮದಿನೋ ತ್ಸವವನ್ನು ಆಚರಿಸುವ ಮುಂಚೆಯೇ ಮಣ್ಣು ಸೇರಿರುತ್ತಾರೆ. ಕೇವಲ 9 ಮಿಲಿಯನ್‌ ಹೆಣ್ಣು ಮಕ್ಕಳು ಮಾತ್ರ ತಮ್ಮ 15ನೇ ಜನ್ಮ ದಿನೋತ್ಸವವನ್ನು ಆಚರಿಸಿಕೊಳ್ಳುವಷ್ಟು ಸುದೈವಿಗಳಾಗಿದ್ದಾರೆ.

ಹೆಣ್ಣು ಭ್ರೂಣ ಹತ್ಯೆಗೆ ನೇರ ಮತ್ತು ಮುಖ್ಯ ಕಾರಣವೆಂದರೆ, ಹೆಣ್ಣು ಮಗುವನ್ನು ಕುಟುಂಬದಲ್ಲಿ ಒಂದು ಹೊರೆಯೆಂದೇ ಪರಿಗಣಿಸುತ್ತಿರುವುದು. “ಹೆಣ್ಣು ಸಂಸಾರದ ಕಣ್ಣು’ ಎಂಬ ಮಾತನ್ನು ಅರ್ಥಮಾಡಿಕೊಂಡವರು ಕಡಿಮೆ. ವರದಕ್ಷಿಣೆ, ಕುಟುಂಬದ ಮರ್ಯಾದೆ, ಅವಳನ್ನು ಮದುವೆ ಮಾಡಿಕೊಡುವ ದೊಡ್ಡ ತಾಪತ್ರಯ ಮುಂತಾದ ಸಂಗತಿಗಳು ಕುಟುಂಬದ ಹಿರಿಯರನ್ನು ಸದಾ ಕಾಡುತ್ತವೆ.

ಒಟ್ಟಿನಲ್ಲಿ ಹೆಣ್ಣು ಮಗುವೇ ಬೇಡ ಎಂಬ ತೀರ್ಮಾನಕ್ಕೆ ಬರುವಂತೆ ಮಾಡುತ್ತಿದೆ. ಕುಟುಂಬದಲ್ಲಿ ಒಂದು ಗಂಡು ಮಗು ಜನಿಸಿದರೆ ಅದು ಸುದೈವ ಎಂದೇ ಪರಿಗಣಿಸಲಾಗುತ್ತದೆ. ಇದಕ್ಕೆ ವ್ಯತಿರಿಕ್ತವಾಗಿ ಹೆಣ್ಣು ಮಗುವಿನ ಹುಟ್ಟು ದುರ್ದೈವದ ಸಂಕೇತವೆನಿಸುತ್ತದೆ. ಈ ಎಲ್ಲ ಕಾರಣಗಳಿಂದಾಗಿ ಸರಕಾರ ಯಾವುದೇ ಯೋಜನೆಗಳನ್ನು ತರಲಿ, ಎಷ್ಟೇ ಜಾಗೃತಿ ಮೂಡಿಸಲಿ, ಹೆಣ್ಣು ಭ್ರೂಣ ಹತ್ಯೆ ದೇಶದಲ್ಲಿ ಅವ್ಯಾಹತವಾಗಿ ಸಾಗುತ್ತಲೇ ಇದೆ.

ಆಶಾ ಎ.ಆರ್‌.

ಮಂಗಳೂರು ವಿವಿ

ಟಾಪ್ ನ್ಯೂಸ್

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-uv-fusion

Government School: ಅಳಿವಿನಂಚಿನಲ್ಲಿ ನನ್ನೂರ ಸರಕಾರಿ ಶಾಲೆ

12-uv-fusion

UV Fusion: ಹಬ್ಬ ಹರಿದಿನಗಳಲ್ಲಿ ಯುವಜನರ ಪಾತ್ರ

11-uv-fusion

UV Fusion: ಹುಲಿ ವೇಷವೆಂಬ ವಿಸ್ಮಯ

9-uv-fusion

Family: ನಾವು ನಮ್ಮವರೊಂದಿಗೆ ಕಳೆಯುವ ಸಮಯ ಅಮೂಲ್ಯ

8-uv-fusion

Ratan Tata: ಉದ್ಯಮ ಕ್ಷೇತ್ರದ ಅಜಾತಶತ್ರು ರತನ್‌ ಟಾಟಾ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

POLICE-5

Kinnigoli: ಪಕ್ಷಿಕೆರೆ; ಕೊಲೆ ಪ್ರಕರಣ ಮತ್ತಷ್ಟು ಸಂಗತಿಗಳು ಬೆಳಕಿಗೆ?

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.