ಬೆಂಗಳೂರು: ಹೊಸಗುಡ್ಡದಹಳ್ಳಿಯ ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರಿ ಅಗ್ನಿ ಅವಘಡ
Team Udayavani, Nov 10, 2020, 2:41 PM IST
ಬೆಂಗಳೂರು: ನಗರದ ಮೈಸೂರು ರಸ್ತೆಯಲ್ಲಿರುವ ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಭಾರಿ ಅಗ್ನಿ ಅವಘಡವೊಂದು ಸಂಭವಿಸಿದ್ದು, ಪ್ರದೇಶಲದಲ್ಲಿ ದಟ್ಟ ಹೊಗೆ ಆವರಿಸಿದೆ.
ಬಾಪೂಜಿ ನಗರದ ಹೊಸಗುಡ್ಡದಹಳ್ಳಿ ಒಂದನೇ ಕ್ರಾಸ್ ನಲ್ಲಿರುವ ಕೆಮಿಕಲ್ ಫ್ಯಾಕ್ಟರಿಯಲ್ಲಿ ಈ ಅಗ್ನಿ ಅವಘಡ ಸಂಭವಿಸಿದ್ದು, ಸ್ಥಳಕ್ಕೆ 8 ಅಗ್ನಿ ಶಾಮಕ ವಾಹನಗಳು ದೌಡಾಯಿಸಿದ್ದು, ಅಗ್ನಿ ನಂದಿಸುವ ಕಾರ್ಯದಲ್ಲಿ ತೊಡಗಿದೆ.
ಸಿಲಿಂಡರ್ ಸ್ಪೋಟದಿಂದ ಈ ಅಗ್ನಿ ಅನಾಹುತ ನಡೆದಿದೆ ಎನ್ನಲಾಗಿದೆ. ಯಾವುದೇ ಸಾವು- ನೋವು ಸಂಭವಿಸಿಲ್ಲ. ಆದರೆ ಹಲವು ವಾಹನಗಳು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸುಟ್ಟಿವೆ.