Byrati Basavaraj ಸುದ್ದಿಗೆ ಬಂದರೆ ಸರಿ ಇರಲ್ಲ! ಕನಕ ಗುರುಪೀಠ ಸ್ವಾಮೀಜಿ ಎಚ್ಚರಿಕೆ
Team Udayavani, Aug 18, 2020, 1:14 PM IST
ದಾವಣಗೆರೆ: ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸುವ ಪ್ರಯತ್ನ ಮಾಡಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಮದು ಜಿಲ್ಲೆಯ ಬಿಜೆಪಿ ಶಾಸಕರಿಗೆ ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ನೇರ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ವಿಡಿಯೋ ಸಂದೇಶ ಬಿಡುಗಡೆ ಮಾಡಿರುವ ಅವರು ಜಿಲ್ಲೆಯ ಬಿಜೆಪಿ ಶಾಸಕರಿಗೆ ಎಚ್ಚರಿಕೆ ನೀಡಿದ್ದಾರೆ.