District Excise Department seized Millions worth of Marijuana | Udayavani
Team Udayavani, Sep 22, 2020, 4:23 PM IST
ಸೊರಬ: ರಾಜ್ಯದಲ್ಲಿ ಡ್ರಗ್ಸ್ ಪ್ರಕರಣಗಳು ದಿನಕ್ಕೊಂದು ತಿರುವು ಪಡೆಯುತ್ತಿರುವ ಸಂದರ್ಭದಲ್ಲಿಯೇ ತಾಲ್ಲೂಕಿನ ಕಣ್ಣೂರು ಗ್ರಾಮದಲ್ಲಿ ಜಿಲ್ಲಾ ಅಬಕಾರಿ ವಿಚಕ್ಷಣಾ ದಳದ ಪೊಲೀಸರು ಸುಮಾರು ೫.೫೦ ಲಕ್ಷ ಮೌಲ್ಯದ ಭಾರಿ ಪ್ರಮಾಣದ ಹಸಿ ಗಾಂಜಾ ಗಿಡಗಳನ್ನು ಮಂಗಳವಾರ ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಬಕಾರಿ ಡಿಸಿ ಕ್ಯಾಪ್ಟನ್ ಜಿ.ಎ. ಅಜಿತ್ ಕುಮಾರ್ ನೇತೃತ್ವದ ತಂಡ ಕಣ್ಣೂರು ಗ್ರಾಮದ ಸರ್ವೆ ನಂ. ೨೬ರ ಬಗರ್ಹುಕ್ಕುಂ ಜಮೀನಿನಲ್ಲಿ ಶುಂಠಿ ಮತ್ತು ಮೆಕ್ಕೆಜೋಳದ ಬೆಳೆಗಳ ನಡುವೆ ಬೆಳೆದಿದ್ದ ೬ ರಿಂದ ೮ ಅಡಿ ಎತ್ತರದ ಸುಮಾರು ೨೦೦ ಹಸಿ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದು ಮೂವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳಾದ ಗಂಗಾಧರಪ್ಪ, ಪರಶುರಾಮಪ್ಪ, ಹುಚ್ಚರಾಯಪ್ಪ ತಲೆ ಮರೆಸಿಕೊಂಡಿದ್ದಾರೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ
Sandalwood: ಸ್ಟಾರ್ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್. ನರಸಿಂಹಲು
Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ