ಕಾಡಾನೆ ಕಾಟದಿಂದ ಹೈರಾಣಾದ ಮೂಡಿಗೆರೆ ರೈತರು
elephant attack
Team Udayavani, Jul 30, 2023, 4:12 PM IST
ಚಿಕ್ಕಮಗಳೂರು: ತೀವ್ರ ಮಳೆಯಿಂದ ಕಂಗೆಟ್ಟಿಂದ ಮಲೆನಾಡ ರೈತರು ಇದೀಗ ಕಾಡಾನೆ ಕಾಟಕ್ಕೆ ಹೈರಾಣಾಗಿದ್ದಾರೆ. ಮೂಡಿಗೆರೆ ತಾಲೂಕಿನ ಸಾರಗೋಡು, ಕುಂದೂರು ಗ್ರಾಮಗಳಲ್ಲಿ 60ಕ್ಕೂ ಹೆಚ್ಚು ರೈತರ ತೋಟಗಳಲ್ಲಿ ಕಾಡಾನೆಗಳು ದಾಂಗುಡಿ ಇಟ್ಟಿದ್ದು ರೈತರ ತಲೆನೋವಿಗೆ ಕಾರಣವಾಗಿದೆ.ಕಾಡಾನೆ ದಾಳಿಗೆ ಕಾಫಿ ತೋಟಗಳ ನಾಶವಾಗದೆ. ಇದರ ಜೊತೆಗೆ ಮೆಣಸು, ಬಾಳೆ, ಏಲಕ್ಕಿ, ಅಡಿಕೆ ಬೆಳೆಗಳಿಗೆ ಹಾನಿಯಾಗಿದೆ. 20ಕ್ಕೂ ಹೆಚ್ಚೆರುವ ಕಾಡಾನೆ ಹಿಂಡಿನಿಂದ ತೋಟಗಳ ಮೇಲೆ ನಿರಂತರ ದಾಳಿಯಾಗುತ್ತಿದೆ. ತೋಟದ ಬೆಳೆಗಳನ್ನು ತುಳಿದು ನಾಶ ಮಾಡಿವೆ.ಪದೇ-ಪದೇ ಆನೆಗಳು ತೋಟಗಳಿಗೆ ಲಗ್ಗೆ ಇಡುತ್ತಿದ್ದರೂ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಬಾರದ ಕಾರಣ ರೈತರು ಆಕ್ರೋಶ ಹೊರಹಾಕಿದ್ದಾರೆ. ಸ್ಥಳೀಯ ಶಾಸಕರ ಗಮನಕ್ಕೆ ತಂದರೂ ಪ್ರಯೋಜನವಿಲ್ಲ, ಲಕ್ಷಾಂತರ ರೂಪಾಯಿ ನಷ್ಟವಾಗುತ್ತಿದೆ, ನಮಗೆ ಪರಿಹಾರ ಒದಗಿಸಬೇಕು ಎಂದು ರೈತರು ಅಳಲು ತೋಡಿಕೊಂಡಿದ್ದಾರೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ