ಮಣಿಪಾಲ: ಬೆಂಕಿಗಾಹುತಿಯಾದ ಫ್ಯಾಮಿಲಿ ರೆಸ್ಟೋರೆಂಟ್
Fire accident at manipal family restaurant
Team Udayavani, Jul 15, 2022, 9:25 AM IST
ಮಣಿಪಾಲ: ಮಣಿಪಾಲ ಪೇಟೆಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು ವಸತಿ ಗೃಹದಲ್ಲಿದ್ದ ರೆಸ್ಟೋರೆಂಟ್ ಒಂದು ಸುಟ್ಟು ಕರಕಲಾದ ಘಟನೆ ಇಂದು ಸಂಭವಿಸಿದೆ.ಇಲ್ಲಿನ ಖಾಸಗಿ ಲಾಡ್ಜ್ನ ರೆಸ್ಟೋರೆಂಟ್ನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿದೆ. ಕೆಲವೇ ಹೊತ್ತಿನಲ್ಲಿ ಬೆಂಕಿಯ ಕೆನ್ನಾಲಿಗೆ ಇಡೀ ಫ್ಯಾಮಿಲಿ ರೆಸ್ಟೋರೆಂಟ್ ಅನ್ನು ವ್ಯಾಪಿಸಿದೆ.ಬೆಳಗಿನ ಜಾವ ಬೆಂಕಿ ಹೊತ್ತಿಕೊಂಡ ತಕ್ಷಣ ಅಗ್ನಿಶಾಮಕ ದಳವನ್ನು ಕರೆಸಿಕೊಳ್ಳಲಾಯಿತು. ಸತತ ಕಾರ್ಯಚರಣೆಯಿಂದ ಬೆಂಕಿ ನಂದಿಸಲಾಗಿದೆ. ಆದರೆ ಫ್ಯಾಮಿಲಿ ರೆಸ್ಟೋರೆಂಟ್ ಸಂಪೂರ್ಣ ಸುಟ್ಟು ಕರಕಲಾಗಿದ್ದು ಲಕ್ಷಾಂತರ ರೂ.ನಷ್ಟ ಸಂಭವಿಸಿದೆ. ರೆಸ್ಟೋರೆಂಟ್ನ ಪೀಠೋಪಕರಣಗಳ ಜೊತೆಗೆ ಸಾಕಷ್ಟು ಮದ್ಯದ ಬಾಟಲಿಗಳು ಬೆಂಕಿಗೆ ಆಹುತಿಯಾಗಿವೆ ಎಂದು ತಿಳಿದುಬಂದಿದೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ