ಹೆಬ್ಬಾವಿನ ಬಾಯಿಯಿಂದ ಮನೆಯ ನಾಯಿಯನ್ನು ರಕ್ಷಿಸಿ ಹಾವನ್ನು ಸುರಕ್ಷಿತವಾಗಿ ಕಾಡಿಗೆ ಬಿಟ್ಟರು
Team Udayavani, Sep 29, 2020, 7:22 PM IST
ಬೈಂದೂರು: ಗೋಳಿಹೊಳೆ ಗ್ರಾಮದ ಅರೆಶಿರೂರು ರವಿ ಶೆಟ್ಟಿ ಬೈಂದೂರು ಅವರ ಮನೆಯ ತೋಟದಲ್ಲಿ ಭಾರಿ ಗಾತ್ರದ ಹೆಬ್ಬಾವು ಕಾಣಿಸಿಕೊಂಡಿದ್ದು ಭಾರೀ ಪ್ರಯತ್ನದ ಬಳಿಕ ಈ ಹೆಬ್ಬಾವನ್ನು ಸುರಕ್ಷಿತವಾಗಿ ಹಿಡಿದು ಮೀಸಲು ಅರಣ್ಯದಲ್ಲಿ ಬಿಡಲಾಯಿತು.
ಕರ್ನಾಟಕ ಕಾರ್ಮಿಕ ವೇದಿಕೆಯ ರಾಜ್ಯಾಧ್ಯಕ್ಷ ಕಾರ್ಮಿಕ ಮುಖಂಡ ಡಾ.ರವಿ ಶೆಟ್ಟಿ ಬೈಂದೂರು ಅವರ ಮನೆಯ ಅಡಿಕೆ ತೋಟದಲ್ಲಿ ಅವರು ಸಾಕಿದ ನಾಯಿಯನ್ನು ಈ ಹೆಬ್ಬಾವು ಹಿಡಿದು ನುಂಗುತ್ತಿತ್ತು.