ಧಾರಾಕಾರ ಮಳೆಗೆ ಮುಳುಗಿದ ಚೆನ್ನೈ, ಶಾಲಾ, ಕಾಲೇಜು ಬಂದ್
Team Udayavani, Jan 1, 2022, 5:53 PM IST
1. ನಿವೇಶನ, ಮನೆ ಖರೀದಿದಾರರಿಗೆ ರಾಜ್ಯ ಸರ್ಕಾರ ಶುಭ ಸುದ್ದಿ: ಹೊಸ ವರ್ಷದ ಗಿಫ್ಟ್ ನೀಡಿದ ರಾಜ್ಯ ಸರ್ಕಾರ
ರಾಜ್ಯ ಸರ್ಕಾರವು ನಿವೇಶನ, ಮನೆ ಖರೀದಿದಾರರಿಗೆ ಶುಭ ಸುದ್ದಿ ನೀಡಿದೆ. ಕಂದಾಯ ನಿವೇಶನ, ವಸತಿಗೃಹಗಳ ಮೇಲಿನ ಗೈಡೆನ್ಸ್ ಮೌಲ್ಯದಲ್ಲಿ ಶೇ.10ರಷ್ಟು ಕಡಿತ ಮಾಡಲಾಗಿದೆ. ಸಚಿವ ಆರ್ ಅಶೋಕ್ ಅವರು ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ್ದು, ಕಳೆದ ಎರಡು ವರ್ಷದಿಂದ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಕಂದಾಯ ಇಲಾಖೆಯಿಂದ ಗಿಫ್ಟ್ ನೀಡಲು ನಿರ್ಧಾರಿಸಲಾಗಿದೆ ಎಂದರು.
2. ಡಿಕೆಶಿ ಡಿಸಿಗೆ ಅರ್ಜಿ ಹಾಕಿ ಮತಾಂತರವಾದರೆ ರಗಳೆ ಇಲ್ಲ: ಈಶ್ವರಪ್ಪ
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಜಿಲ್ಲಾಧಿಕಾರಿಗೆ ಅರ್ಜಿ ಹಾಕಿಕೊಂಡು ಮುಸಲ್ಮಾನ ಅಥವಾ ಕ್ರಿಶ್ಚಿಯನ್ ಆಗಿ ಮತಾಂತರವಾದರೆ ರಗಳೆ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ನೀಡಿದ್ದಾರೆ.
3. ಒಟ್ಟಾಗಿ ಸವಾಲು ಎದುರಿಸೋಣ: ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಲಹೆ
ಆರ್ಥಿಕವಾಗಿ, ಆಡಳಿತದ ದೃಷ್ಟಿಯಿಂದ 2022 ಸವಾಲಿನ ವರ್ಷವಾಗಿದ್ದು, ಇದನ್ನು ಎಲ್ಲರೂ ಒಗ್ಗೂಡಿ ಸಮರ್ಥವಾಗಿ ಎದುರಿಸುವ ಸಂಕಲ್ಪ ಮಾಡಬೇಕಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ತಿಳಿಸಿದರು.
4. 2021 ರಲ್ಲಿ ಮಹಿಳೆಯರ ವಿರುದ್ಧದ ಅಪರಾಧದ ದೂರು: ಉತ್ತರ ಪ್ರದೇಶದಲ್ಲೇ ಹೆಚ್ಚು
ಮಹಿಳೆಯರ ವಿರುದ್ಧದ ಅಪರಾಧಗಳ ಕುರಿತು ಸುಮಾರು 31 ಸಾವಿರ ದೂರುಗಳನ್ನು ಸ್ವೀಕರಿಸಲಾಗಿದ್ದು,ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಉತ್ತರ ಪ್ರದೇಶದಿಂದ ಅರ್ಧಕ್ಕಿಂತ ಹೆಚ್ಚು ದೂರುಗಳು ಬಂದಿವೆ ಎಂದು ರಾಷ್ಟ್ರೀಯ ಮಹಿಳಾ ಆಯೋಗ ತಿಳಿಸಿದೆ. 2014 ರಿಂದ ಅತಿ ಹೆಚ್ಚು ಪ್ರಕರಣಗಳು ಬಂದಿದ್ದು, ಅದರಲ್ಲಿ ಅರ್ಧದಷ್ಟು ಉತ್ತರ ಪ್ರದೇಶದಿಂದ ದಾಖಲಾಗಿವೆ. 23,722 ದೂರುಗಳನ್ನು ಸ್ವೀಕರಿಸಿದ್ದು, 2020 ಕ್ಕೆ ಹೋಲಿಸಿದರೆ 2021 ರಲ್ಲಿ ಮಹಿಳೆಯರ ಮೇಲಿನ ಅಪರಾಧಗಳ ದೂರುಗಳಲ್ಲಿ ಶೇಕಡಾ 30 ರಷ್ಟು ಏರಿಕೆಯಾಗಿದೆ.
5. ಅನಿರೀಕ್ಷಿತ ಧಾರಾಕಾರ ಮಳೆಗೆ ಮುಳುಗಿದ ಚೆನ್ನೈ, ಶಾಲಾ, ಕಾಲೇಜು ಬಂದ್
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಚೆನ್ನೈನಲ್ಲಿ ಒಂದೇ ದಿನದಲ್ಲಿ ಬರೋಬ್ಬರಿ 20 ಸೆಂ.ಮೀ ಮಳೆಯಾಗಿದ್ದು, ಚೆನ್ನೈ, ತಿರುವಳ್ಳೂರ್, ಕಾಂಚಿಪುರಂ ಹಾಗೂ ಚೆಂಗಲ್ ಪಟ್ಟುವಿನಲ್ಲಿ ಎಲ್ಲಾ ಸರ್ಕಾರಿ ಕಚೇರಿಗಳನ್ನು ಬಂದ್ ಮಾಡಲಾಗಿದೆ ಎಂದು ವರದಿ ತಿಳಿಸಿದೆ.
6. ಭಾರತ; 24ಗಂಟೆಗಳಲ್ಲಿ 22,775 ಕೋವಿಡ್ ಪ್ರಕರಣ ಪತ್ತೆ, ಒಮಿಕ್ರಾನ್ ಸಂಖ್ಯೆ 1,431ಕ್ಕೆ ಏರಿಕೆ
ಭಾರತದಲ್ಲಿ ಕೋವಿಡ್ ಸೋಂಕು ಪ್ರಕರಣ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 22,775 ಪ್ರಕರಣ ವರದಿಯಾಗಿದೆ. ಕೋವಿಡ್ ಸೋಂಕಿನಿಂದ 406 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.
7. ‘ಲಕಲಕ ಲ್ಯಾಂಬೋರ್ಗಿನಿ’ಯಲ್ಲಿ ರಚಿತಾ ರಾಮ್ ಮಿಂಚು
ಸಿನಿಮಾಗಳಲ್ಲಿ ಬಿಝಿಯಾಗಿರುವ ನಟಿ ರಚಿತಾ ರಾಮ್ ಸದ್ದಿಲ್ಲದೇ ಆಲ್ಬಂ ಸಾಂಗ್ ವೊಂದರಲ್ಲಿ ಹೆಜ್ಜೆ ಹಾಕಿದ್ದಾರೆ. ಅದು ಲಕಲಕ ಲ್ಯಾಂಬೋರ್ಗಿನಿ. ಇದು ಚಂದನ್ ಶೆಟ್ಟಿಯವರ ಮತ್ತೊಂದು ಆಲ್ಬಂ ಆಗಿದೆ. ಚಂದನ್ ಶೆಟ್ಟಿಯವರೇ ಸಾಹಿತ್ಯ ಬರೆದು, ಸಂಗೀತ ನೀಡಿ, ಹಾಡಿನಲ್ಲೂ ಕಾಣಿಸಿಕೊಂಡಿದ್ದಾರೆ. ಈ ಹಾಡಿನ ನಿರ್ದೇಶನವನ್ನು ನಂದಕಿಶೋರ್ ಮಾಡಿದ್ದಾರೆ. ಬಿಂದ್ಯಾ ಮೂವೀಸ್ ಲಾಂಛನದಲ್ಲಿ ಆರ್. ಕೇಶವ್ ಈ ಹಾಡನ್ನು ನಿರ್ಮಿಸಿದ್ದಾರೆ.
8. ಈ ಆಟಗಾರ ಟೀಂ ಇಂಡಿಯಾದಲ್ಲಿ ‘ಅದ್ಭುತ’ ಸೃಷ್ಟಿಸಲಿದ್ದಾನೆ: ಚೇತನ್ ಶರ್ಮಾ
ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ನಾಯಕ ರೋಹಿತ್ ಶರ್ಮಾ ಬದಲಿಗೆ ಕೆ.ಎಲ್.ರಾಹುಲ್ ಅವರನ್ನು ಭಾರತ ತಂಡದ ನಾಯಕರನ್ನಾಗಿ ಘೋಷಿಸಲಾಗಿದ್ದು, ವೇಗಿ ಜಸ್ಪ್ರೀತ್ ಬುಮ್ರಾ ಉಪನಾಯಕರಾಗಿದ್ದಾರೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ